ಅನ್ವೇಷಣಾ ಹೆಸರಲ್ಲಿ ವಿಜ್ಞಾನ ಮತ್ತು ಗಣಿತಕ್ಕೆ ಸಂಬಂಧಿಸಿದ ವಸ್ತು ಪ್ರದರ್ಶನ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಕಳೆದ ಹದಿನೈದು ದಿನಗಳಿಂದ ಶ್ರಮವಹಿಸಲಾಗಿದೆ. ವಿವಿಧ ಪ್ರಾಣಿಗಳ ಪಕ್ಷಿಗಳ ಪರಿಚಯ, ಮೆಡಿಕಲ್ ಪ್ಲಾಂಟ್ಸ್ ಗಳ ಉಪಯೋಗ, ಫನ್ ಸೈನ್ಸ್, ಮೆಥಮೆಟಿಕಲ್ ಲ್ಯಾಬ್, ಸೋಲಾರ್ ಪ್ಯಾನಲ್, ರೋಬೋಟಿಕ್, ಸ್ಮಾರ್ಟ್ ಸಿಟಿ, ಮನುಷ್ಯ ಅಂಗಾಂಗ ಪರಿಚಯ, ಭೂತದ ಮನೆ ಸೇರಿದಂತೆ ವಿವಿಧ ಪ್ರಯೋಗಗಳ ಕಲಾಕೃತಿಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ. ವಸ್ತು ಪ್ರದರ್ಶನದಲ್ಲಿ ಮಕ್ಕಳ ಪೊಷಕರು, ಸಾರ್ವಜನಿಕರು ಭಾಗಿಯಾಗಿ ಮಕ್ಕಳಿಂದ ತಯಾರಿಸಲ್ಪಟ್ಟ ವಿಜ್ಞಾನ ಮತ್ತು ಗಣಿತ ಕಲಾಕೃತಿಗಳನ್ನು ಕಣ್ತುಂಬಿಕೊಂಡರು ಎಂದು ಗುರುಕುಲ ಇಂಟರ್ನ್ಯಾಷನಲ್ ರೆಸಿಡೆನ್ಷಿಯಲ್ ಸ್ಕೂಲ್ ಆಡಳಿತ ಮಂಡಳಿ ಅಧ್ಯಕ್ಷ ರಮೇಶ್ ಹೇಳಿದರು.
ಮಕ್ಕಳಲ್ಲಿನ ಪ್ರತಿಭೆಯನ್ನು ಹೊರತರಲು, ವಿಜ್ಞಾನ ಮತ್ತು ಗಣಿತದ ಬಗ್ಗೆ ಇನ್ನಷ್ಟು ಅರಿವು ಮೂಡಿಸಲು, ಪ್ರಾಯೋಗಿಕ ಜ್ಞಾನ ವೃದ್ಧಿಸಲು ಅನ್ವೇಷಣೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ತಮ್ಮ ಸುತ್ತಾಮುತ್ತಾ ಸಿಗುವ ವಸ್ತುಗಳನ್ನು ಬಳಸಿಕೊಂಡು ಸ್ವತಃ ಮಕ್ಕಳೆ ವಿಜ್ಞಾನ ಹಾಗೂ ಗಣಿತಕ್ಕೆ ಸಂಬಂಧಿಸಿದ ಕಲಾಕೃತಿಗಳನ್ನು ತಯಾರಿಸಿದ್ದಾರೆ. ಸಾವಯವ ಕೃಷಿ ಪ್ರಾಯೋಗಿಕತೆ, ರಾಕೆಟ್ ಉಡಾವಣೆ, ಮಳೆ ನೀರು ಕೊಯ್ಲು, ಹೃದಯ, ರಕ್ತ ಪರಿಚಲನೆ, ಬಿಪಿ, ರಕ್ತ ಪರೀಕ್ಷೆ ಸೇರಿದಂತೆ ಎಲ್ಲವನ್ನು ಮಕ್ಕಳೇ ಮಾಡಿರುವುದು ಸಂತೋಷದ ಸಂಗತಿಯಾಗಿದೆ ಎಂದರು.
ಗಣಿತ, ಭೌತವಿಜ್ಞಾನ, ರಸಾಯನ ವಿಜ್ಞಾನ ಹಾಗೂ ಜೀವ ವಿಜ್ಞಾನಕ್ಕೆ ಸಂಬಂಧಿಸಿದ ಹಲವು ಪ್ರಯೋಗಗಳಿಗೆ ಅನ್ವೇಷಣಾ ಕಾರ್ಯಕ್ರಮ ವೇದಿಕೆಯಾಯಿತು ಎಂದರು.
ಈ ವೇಳೆ ಶಾಲೆಯ ಪ್ರಾಂಶುಪಾಲ, ಉಪಪ್ರಾಂಶುಪಾಲ, ವಿಜ್ಞಾನ ಶಿಕ್ಷಕಿ, ಸಹಶಿಕ್ಷಕರು, ಸಿಬ್ಬಂದಿ ಮತ್ತು ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…