ಮಕ್ಕಳಲ್ಲಿ ಭವಿಷ್ಯದ ಕನಸುಗಳನ್ನು ಬಿತ್ತೋಣ-ಪರಿಸರವಾದಿ ಕೆ.ಗುರುದೇವ್‌

ದೊಡ್ಡಬಳ್ಳಾಪುರ: ಸತತ ಪರಿಶ್ರಮ ಮತ್ತು ಅಧ್ಯಯನಶೀಲತೆಯಿಂದ ಉತ್ತಮ ಭವಿಷ್ಯವನ್ನು ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎಂದು ಪರಿಸರವಾದಿ ಕೆ.ಗುರುದೇವ್‌ ಹೇಳಿದರು.

ನಗರದ ಶ್ರೀ ದೇವರಾಜ ಅರಸ್‌ ಅಂತಾರಾಷ್ಟ್ರೀಯ ವಸತಿ ಪ್ರೌಢಶಾಲೆಯಲ್ಲಿ ಗುರುವಾರ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಹಿರಿಯರನ್ನು ಗೌರವಿಸುವ ಗುಣ, ಸಮಾಜದೊಂದಿಗೆ ಬೆರೆಯುವ ಆಲೋಚನೆಗಳನ್ನು ಮಕ್ಕಳಲ್ಲಿ ರೂಢಿಸಬೇಕು. ಸಮಯಕ್ಕೆ ಹೆಚ್ಚಿನ ಆದ್ಯತೆ ನೀಡಿ ನಮ್ಮ ಹೊಣೆಯನ್ನು ಅರಿತುಕೊಂಡರೆ ಯಶಸ್ಸು ಸಾಧ್ಯ ಎಂದರು.

ಶ್ರೀ ದೇವರಾಜ ಅರಸ್‌ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ಪ್ರಾಧ್ಯಾಪಕ ಪ್ರೊ.ಕೆ.ಆರ್.ರವಿಕಿರಣ್ ಮಾತನಾಡಿ, ಮಹತ್ವಾಕಾಂಕ್ಷೆಗಳನ್ನು ಮಕ್ಕಳಲ್ಲಿ ಬಿತ್ತುವ ಮೂಲಕ ಸದೃಢ ಭವಿಷ್ಯದ ಸಂಕಲ್ಪವನ್ನು ಮಾಡಬೇಕು. ನಿರ್ದಿಷ್ಟ ಗುರಿ ಮತ್ತು ಪ್ರಖರ ವಿಚಾರಧಾರೆಗಳನ್ನು ಪ್ರಚೋದಿಸುವ ಗುರು ಇದ್ದಾಗ ಸಮರ್ಥ ನಾಯಕತ್ವದ ಗುಣಗಳನ್ನು ರೂಢಿಸಿಕೊಳ್ಳಲು ಸಾಧ್ಯವಾಗುತ್ತದೆ. ಮಕ್ಕಳಲ್ಲಿ ಭವಿಷ್ಯದ ಬಗ್ಗೆ ಧನಾತ್ಮಕ ಕನಸುಗಳನ್ನು ಬಿತ್ತುವುದು ಶಿಕ್ಷಣದ ಪರಮೋಚ್ಛ ಗುರಿಯಾಗಬೇಕು ಎಂದು ತಿಳಿಸಿದರು.

ಶಾಲೆಯ 10ನೇ ತರಗತಿ, 9ನೇ ತರಗತಿಯ ಪ್ರತಿಭಾವಂತ ವಿದ್ಯಾರ್ಥಿಗಳು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿದ್ದುದು ವಿಶೇಷವಾಗಿತ್ತು. ವಿವಿಧ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ವಿಜೇತರು, ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ, ಬಹುಮಾನ ನೀಡಿ ಅಭಿನಂದಿಸಲಾಯಿತು.

ಶಾಲೆಯ ಮುಖ್ಯಶಿಕ್ಷಕ ಜಿಯಾವುಲ್ಲಾಖಾನ್‌ ಅಧ್ಯಕ್ಷತೆ ವಹಿಸಿದ್ದರು. ಅಧ್ಯಾಪಕರಾದ ಬಿ.ವಿಜಯ್‌ಕುಮಾರ್, ದೇವರಾಜ್‌, ಮಹಮ್ಮದ್‌ ಕೈಸರ್‌ ಪಾಷಾ, ರಶ್ಮಿ, ಕಾವ್ಯಶ್ರೀ, ಶ್ರೀನಿವಾಸ್‌ ಉಪಸ್ಥಿತರಿದ್ದರು.

Ramesh Babu

Journalist

Recent Posts

ಪಿಯುಸಿ ವಿದ್ಯಾರ್ಥಿಗಳಿಗೆ National Academic Depository (NAD) – DigiLocker ಮೂಲಕ ಫಲಿತಾಂಶದ ದಿನವೇ ಅಂಕಪಟ್ಟಿ

2025-26ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ದಿನವೇ National Academic Depository…

1 hour ago

ಯುವಕರು ನೈತಿಕ ಮೌಲ್ಯಗಳನ್ನು ರೂಢಿಸಿಕೊಳ್ಳಬೇಕು- ವಕೀಲ ಬಿ. ಸುರೇಶ್ ಗೌಡ

ಯುವಕರು ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ವೈಯಕ್ತಿಕ ಬೆಳವಣಿಗೆಗೆ ಮಾತ್ರವಲ್ಲದೆ, ಆರೋಗ್ಯಕರ ಮತ್ತು ಸಮೃದ್ಧ ಸಮಾಜದ ನಿರ್ಮಾಣಕ್ಕೂ ಅತ್ಯಗತ್ಯವಾಗಿದೆ ಎಂದು ಹೈಕೋರ್ಟ್…

6 hours ago

ಕದನ ವಿರಾಮ…., ಕೊನೆಗೆ ಗೆಲ್ಲುವುದು ಹಿಂಸೆಯಲ್ಲ ಅಹಿಂಸೆ

ಕದನ ವಿರಾಮ...... ಯುದ್ಧ ವಿರಾಮ ಘೋಷಣೆಯಾಗಿದೆ. ಸಾವಿರಾರು ಜನರ ಹತ್ಯೆಗಳ ನಂತರ, ಅಪಾರ ಪ್ರಮಾಣದ ಭೂಪ್ರದೇಶ, ನೈಸರ್ಗಿಕ ಸಂಪನ್ಮೂಲಗಳು, ತೈಲ…

6 hours ago

ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ಕ್ರಮ – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ

ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜಿನಲ್ಲಿ ಯಾವ ಲೋಪಗಳು ಉಂಟಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ಸಲುವಾಗಿ ರಾಜ್ಯದ ಎಲ್ಲ…

17 hours ago

14 ರಿಂದ 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ತಪ್ಪದೇ ಎಚ್.ಪಿ.ವಿ ಲಸಿಕೆ ಹಾಕಿಸಿ- ಡಿಸಿ ಅನುರಾಧ

ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು 14 ರಿಂದ 15 ವರ್ಷದೊಳಗಿನ…

17 hours ago

ಕೃಷಿ ಹೊಂಡದಲ್ಲಿ ಈಜಲು ಹೋಗಿ 34 ವರ್ಷದ ವ್ಯಕ್ತಿ ಸಾವು

ಕೃಷಿ ಹೊಂಡದಲ್ಲಿ ಈಜಲು ಹೋಗಿ 34ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ಇಂದು…

17 hours ago