ಮಕ್ಕಳಲ್ಲಿ ಭವಿಷ್ಯದ ಕನಸುಗಳನ್ನು ಬಿತ್ತೋಣ-ಪರಿಸರವಾದಿ ಕೆ.ಗುರುದೇವ್‌

ದೊಡ್ಡಬಳ್ಳಾಪುರ: ಸತತ ಪರಿಶ್ರಮ ಮತ್ತು ಅಧ್ಯಯನಶೀಲತೆಯಿಂದ ಉತ್ತಮ ಭವಿಷ್ಯವನ್ನು ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎಂದು ಪರಿಸರವಾದಿ ಕೆ.ಗುರುದೇವ್‌ ಹೇಳಿದರು.

ನಗರದ ಶ್ರೀ ದೇವರಾಜ ಅರಸ್‌ ಅಂತಾರಾಷ್ಟ್ರೀಯ ವಸತಿ ಪ್ರೌಢಶಾಲೆಯಲ್ಲಿ ಗುರುವಾರ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಹಿರಿಯರನ್ನು ಗೌರವಿಸುವ ಗುಣ, ಸಮಾಜದೊಂದಿಗೆ ಬೆರೆಯುವ ಆಲೋಚನೆಗಳನ್ನು ಮಕ್ಕಳಲ್ಲಿ ರೂಢಿಸಬೇಕು. ಸಮಯಕ್ಕೆ ಹೆಚ್ಚಿನ ಆದ್ಯತೆ ನೀಡಿ ನಮ್ಮ ಹೊಣೆಯನ್ನು ಅರಿತುಕೊಂಡರೆ ಯಶಸ್ಸು ಸಾಧ್ಯ ಎಂದರು.

ಶ್ರೀ ದೇವರಾಜ ಅರಸ್‌ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ಪ್ರಾಧ್ಯಾಪಕ ಪ್ರೊ.ಕೆ.ಆರ್.ರವಿಕಿರಣ್ ಮಾತನಾಡಿ, ಮಹತ್ವಾಕಾಂಕ್ಷೆಗಳನ್ನು ಮಕ್ಕಳಲ್ಲಿ ಬಿತ್ತುವ ಮೂಲಕ ಸದೃಢ ಭವಿಷ್ಯದ ಸಂಕಲ್ಪವನ್ನು ಮಾಡಬೇಕು. ನಿರ್ದಿಷ್ಟ ಗುರಿ ಮತ್ತು ಪ್ರಖರ ವಿಚಾರಧಾರೆಗಳನ್ನು ಪ್ರಚೋದಿಸುವ ಗುರು ಇದ್ದಾಗ ಸಮರ್ಥ ನಾಯಕತ್ವದ ಗುಣಗಳನ್ನು ರೂಢಿಸಿಕೊಳ್ಳಲು ಸಾಧ್ಯವಾಗುತ್ತದೆ. ಮಕ್ಕಳಲ್ಲಿ ಭವಿಷ್ಯದ ಬಗ್ಗೆ ಧನಾತ್ಮಕ ಕನಸುಗಳನ್ನು ಬಿತ್ತುವುದು ಶಿಕ್ಷಣದ ಪರಮೋಚ್ಛ ಗುರಿಯಾಗಬೇಕು ಎಂದು ತಿಳಿಸಿದರು.

ಶಾಲೆಯ 10ನೇ ತರಗತಿ, 9ನೇ ತರಗತಿಯ ಪ್ರತಿಭಾವಂತ ವಿದ್ಯಾರ್ಥಿಗಳು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿದ್ದುದು ವಿಶೇಷವಾಗಿತ್ತು. ವಿವಿಧ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ವಿಜೇತರು, ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ, ಬಹುಮಾನ ನೀಡಿ ಅಭಿನಂದಿಸಲಾಯಿತು.

ಶಾಲೆಯ ಮುಖ್ಯಶಿಕ್ಷಕ ಜಿಯಾವುಲ್ಲಾಖಾನ್‌ ಅಧ್ಯಕ್ಷತೆ ವಹಿಸಿದ್ದರು. ಅಧ್ಯಾಪಕರಾದ ಬಿ.ವಿಜಯ್‌ಕುಮಾರ್, ದೇವರಾಜ್‌, ಮಹಮ್ಮದ್‌ ಕೈಸರ್‌ ಪಾಷಾ, ರಶ್ಮಿ, ಕಾವ್ಯಶ್ರೀ, ಶ್ರೀನಿವಾಸ್‌ ಉಪಸ್ಥಿತರಿದ್ದರು.

Ramesh Babu

Journalist

Recent Posts

ವಿಷಮುಕ್ತ ಕೃಷಿಯಿಂದ ರೈತರ ಆರ್ಥಿಕ ಪ್ರಗತಿ ಸಾಧ್ಯ: ನಟರಾಜ್ ವಿ

ದೊಡ್ಡಬಳ್ಳಾಪುರ: ಅತಿಯಾದ ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ಬಳಕೆಯಿಂದ ಮಣ್ಣಿನ ಫಲವತ್ತತೆ ಕುಸಿಯುವುದರ ಜೊತೆಗೆ ಮನುಷ್ಯನ ಆರೋಗ್ಯದ ಮೇಲೂ ಗಂಭೀರ…

9 minutes ago

ಇತಿಹಾಸದ ಸತ್ಯ ಮಾರುಕಟ್ಟೆಯಲ್ಲಿ ಮಾರಾಟಕ್ಕಿದೆ……

ಗಾಂಧಿ ಹತ್ಯೆ ಹಿಂದಿನ ಸತ್ಯ, ಲಾಲ್ ಬಹದ್ದೂರ್ ಶಾಸ್ತ್ರಿ ಸಾವಿನ ಸತ್ಯ, ಬಸವಣ್ಣನವರ ಮರಣದ ಹಿಂದಿನ ಸತ್ಯ, ಟಿಪ್ಪು ಸುಲ್ತಾನ್…

45 minutes ago

ಇರುವುದೊಂದೇ ಬದುಕು. ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳೋಣ….

ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ ನನ್ನೋರು........... ಒಂದು ಚಿತ್ರ ಗೀತೆಯ ಹಾಡಿನ ಸಾಲುಗಳಿವು.…

1 day ago

2,411 ದಿನಗಳಿಂದ ನಿರಂತರ ಅನ್ನದಾಸೋಹ: ದಾನಿಗಳ ಸೇವೆಗೆ ಗಣ್ಯರ ಮೆಚ್ಚುಗೆ

  ದೊಡ್ಡಬಳ್ಳಾಪುರ: ಹಸಿದವರಿಗೆ ಅನ್ನ ನೀಡುವ ಮಹತ್ಕಾರ್ಯವನ್ನು ಕಳೆದ 2,411 ದಿನಗಳಿಂದ ನಿರಂತರವಾಗಿ ನಡೆಸಿಕೊಂಡು ಬರುತ್ತಿರುವ ಅನ್ನದಾಸೋಹಿ ಮಲ್ಲೇಶ್ ಮತ್ತು…

1 day ago

ಮಾನವೀಯ ಸಂಬಂಧಗಳ ಹುಡುಕುತ್ತಾ………

ಅಕ್ಕ, ತಮ್ಮನ ಕೈ ಹಿಡಿದುಕೊಂಡು ರಸ್ತೆ ದಾಟುತ್ತಾ ಇರುವಾಗ ತಮ್ಮ ಕೈ ಹಿಡಿದೇ ಅಕ್ಕನ ಹಿಂದೆ ಪುಟ್ಟ ಪುಟ್ಟ ಹೆಜ್ಜೆ…

2 days ago

ಹೊನ್ನಘಟ್ಟದಲ್ಲಿ ಮೂರೂವರೆ ಎಕರೆ ಸರ್ಕಾರಿ ಜಮೀನು ಒತ್ತುವರಿ ಆರೋಪ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹೊನ್ನಘಟ್ಟ ಗ್ರಾಮದಲ್ಲಿ ಸುಮಾರು ಮೂರೂವರೆ ಎಕರೆ ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿಕೊಂಡು, ಅದನ್ನು ಬೇರೆಯವರಿಗೆ ಬಾಡಿಗೆಗೆ ನೀಡಲಾಗಿದೆ…

3 days ago