Categories: ಗದಗ

ಮಕ್ಕಳಿಗೆ ಕೊಡಬೇಕಿದ್ದ ಹಾಸಿಗೆ, ಬೆಡ್‌ಶೀಟ್‌ ಅಧಿಕಾರಿ ಮನೆಯಲ್ಲಿ….!

ಗದಗ: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇಲೆ ಶಿರಹಟ್ಟಿ ತಾಲ್ಲೂಕು ಬಿಸಿಎಂ ಅಧಿಕಾರಿ ಎಂ.ಕೆ.ಸುರಕೋಡ ಅವರಿಗೆ ಸಂಬಂಧಿಸಿದ ಆರು ಕಡೆಗಳಲ್ಲಿ ಗುರುವಾರ ಬೆಳಿಗ್ಗೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು, ಶೇ 227 ಅಧಿಕ ಆಸ್ತಿ ಹೊಂದಿರುವುದನ್ನು ಪತ್ತೆ ಮಾಡಿದ್ದಾರೆ.

ಲೋಕಾಯುಕ್ತ ಪೊಲೀಸರ ಶೋಧನೆ ವೇಳೆ ಅಧಿಕಾರಿಯ ಮನೆಯಲ್ಲಿ ಬಿಸಿಎಂ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಸರಬರಾಜು ಮಾಡಲಾಗಿದ್ದ ಹಾಸಿಗೆ– ಬೆಡ್‌ಶೀಟ್‌ಗಳು, ಹಾಸ್ಟೆಲ್‌ನಲ್ಲಿ ಅಡುಗೆ ಮಾಡಲು ಬಳಸುವ ದೊಡ್ಡ ದೊಡ್ಡ ಪಾತ್ರೆಗಳು, ನೋಟ್‌ಪುಸ್ತಕಗಳು ಸಿಕ್ಕಿದ್ದು, ಅಧಿಕಾರಿಗಳನ್ನು ದಂಗುಬಡಿಸಿದೆ.

ಇವುಗಳ ಜತೆಗೆ, ₹13 ಲಕ್ಷ ಮೌಲ್ಯದ ಆರು ನಿವೇಶನಗಳು, ₹45 ಲಕ್ಷ ಮೌಲ್ಯದ ಮನೆ, ₹80.77 ಲಕ್ಷ ಮೌಲ್ಯದ 29 ಎಕರೆ ಜಮೀನು ಸೇರಿದಂತೆ ಒಟ್ಟು ₹1.38 ಕೋಟಿ ಮೌಲ್ಯದ ಸ್ಥಿರಾಸ್ತಿಗೆ ಸಂಬಂಧಿಸಿದ ಕಾಗದ ಪತ್ರಗಳು ಸಿಕ್ಕಿವೆ.

₹89 ಸಾವಿರ ನಗದು, ₹23.21 ಲಕ್ಷ ಮೌಲ್ಯದ 152 ಗ್ರಾಂ ಚಿನ್ನಾಭರಣ, ₹2.05 ಲಕ್ಷ ಮೌಲ್ಯದ ಬೆಳ್ಳಿ, ₹31.40 ಲಕ್ಷ ಮೌಲ್ಯದ ವಾಹನಗಳು ಸೇರಿದಂತೆ ಒಟ್ಟು ₹1.82 ಕೋಟಿ ಆಸ್ತಿ ಪತ್ತೆ ಮಾಡಿದ್ದಾರೆ.

Ramesh Babu

Journalist

Share
Published by
Ramesh Babu

Recent Posts

ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳ ಸರಣಿ: ಜನರಲ್ಲಿ ಆತಂಕ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಮುಂದುವರಿದಿದ್ದು, ಎರಡು ದಿನಗಳ ಅಂತರದಲ್ಲಿ ಎರಡು ಮನೆಗಳ ಕಳ್ಳತನ ಹಾಗೂ ಬೈಕ್ ಕಳವು…

9 hours ago

ರೈತರಿಗೆ ನೋವಾಗುವ ಯಾವುದೇ ತೀರ್ಮಾನ ಇಲ್ಲ; ಕಾವೇರಿ ಬಿಕ್ಕಟ್ಟಿಗೆ ಮೇಕೆದಾಟು ಒಂದೇ ಶಾಶ್ವತ ಪರಿಹಾರ- ಸಚಿವ ಚಲುವರಾಯಸ್ವಾಮಿ

ರೈತರಿಗೆ ನೋವಾಗುವ ಯಾವುದೇ ತೀರ್ಮಾನಗಳನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ. ರೈತರ ಸಹಕಾರವಿದ್ದರೆ, ಅವರಿಗೆ ಅಗತ್ಯವಿರುವ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ ಎಂದು…

13 hours ago

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

14 hours ago

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

15 hours ago