ಮಕ್ಕಳಿಗೆ ಬಾಲ್ಯದಿಂದಲೇ ಶ್ರಮದಾನವನ್ನು ಕಲಿಸಬೇಕು- ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್  ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯಾ

ದೊಡ್ಡಬಳ್ಳಾಪುರ: ಜಗತ್ತು ಸದಾ ಬದಲಾವಣೆ ಬಯಸುತ್ತದೆ. ಜಾಗತಿಕ ಸವಾಲುಗಳಿಗೆ ಪೂರಕವಾಗಿ ಇಂದು ಶಿಕ್ಷಣ ಸೇರಿದಂತೆ ದೇಶದ ಸ್ಥಿತಿಗಳಲ್ಲಿ ಅಮೂಲಾಗ್ರ ಬದಲಾವಣೆಗಳಾಗುತ್ತಿದ್ದು, ಇದಕ್ಕೆ ಇಂದಿನ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಬೇಕಾದ ಅಗತ್ಯವಿದೆ. ಈ ದಿಸೆಯಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಕೌಟ್ಸ್ ಮತ್ತು ಗೈಡ್ಸ್ ನ್ನು ಹೆಚ್ಚು ಘಟಕಗಳನ್ನು ತೆರೆಯುವ ಮೂಲಕ ಸಂಘಟನೆಯ ಆಶಯಗಳನ್ನು ನೆರವೇರಿಸಬೇಕಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್  ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯಾ ಕರೆ ನೀಡಿದರು.

ನಗರದ ಹೊರವಲಯದ ಬೆಸೆಂಟ್ ಪಾರ್ಕ್ ನಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ನಡೆದ ಜಿಲ್ಲಾ ಮತ್ತು ತಾಲೂಕು ದೈಹಿಕ ಶಿಕ್ಷಣಾಕಾರಿಗಳು, ಸಿಆರ್ ಸಿ, ಬಿಆರ್ ಸಿ, ಶಿಕ್ಷಣ ಇಲಾಖೆಯ ಸಂಪನ್ಮೂಲ ವ್ಯಕ್ತಿಗಳಿಗೆ ಒಂದು ದಿನದ ಮಾಹಿತಿ ಶಿಬಿರದಲ್ಲಿ ಅವರು ಮಾತನಾಡಿದರು.

ಮಕ್ಕಳಿಗೆ ಬಾಲ್ಯದಿಂದಲೇ ಶ್ರಮದಾನವನ್ನು ಕಲಿಸಬೇಕು. ಆದರೆ, ಇಂದು ವ್ಯವಸ್ಥೆಯ ಬಗ್ಗೆ ತೀವ್ರ ಬೇಸರವಿದೆ. ಮಕ್ಕಳನ್ನು ವ್ಯವಸ್ಥಿತವಾಗಿ ಬೆಳೆಸುತ್ತಿಲ್ಲ. ಅವರಿಗೆ ಪರಿಸರ ಹಾಗೂ ಜಾಗತಿಕ ವಿದ್ಯಮಾನಗಳ ಬಗ್ಗೆ ಅರಿವು ಮೂಡಿಸುತ್ತಿಲ್ಲ. ತತ್ವಜ್ಞಾನಿ ಸಾಕ್ರೆಟಿಸ್ ಅವರು ಪ್ರಜಾಪ್ರಭುತ್ವದ ಋಣಾತ್ಮಕ ಅಂಶಗಳ ಬಗ್ಗೆ ಹಿಂದೆಯೇ ಎಚ್ಚರಿಸಿದ್ದರು. ಇಂದು ಸೋವಿಯತ್ ಒಕ್ಕೂಟ ಒಡೆದು ಚೂರಾಗಿದೆ. ಉಕ್ರೇನ್ ಮೇಲಿನ ಯುದ್ದ ಕರಾಳ ಅಧ್ಯಾಯವಾಗಿದ್ದು, ಇದನ್ನ ತಡೆಯುವಲ್ಲಿ ವಿಶ್ವ ಸಂಸ್ಥೆ ಸಹ ವಿಫಲವಾಗಿದೆ ಎಂದರು.

ನಮ್ಮ ಪರಿಸರ ಕಲುಷಿತವಾಗುತ್ತಿದ್ದು, ಇದನ್ನು ಉಳಿಸಿಕೊಳ್ಳಬೇಕು. ಗಿಡ ಮರಗಳನ್ನು ಬೆಳೆಸಬೇಕು. ವಿದ್ಯಾರ್ಥಿ ಜೀವನದಲ್ಲಿ ಸ್ಕೌಟ್ಸ್ ಗೈಡ್ಸ್ ತತ್ವಗಳನ್ನು ಅಳವಡಿಸಿಕೊಂಡರೆ ಅವರ ಮುಂದಿನ ಜೀವನ ಶಿಸ್ತು ಬದ್ಧವಾಗಿ, ಉತ್ತಮವಾಗಿರಲಿದೆ. ಸ್ಕೌಟ್ಸ್ ಮತ್ತು ಗೈಡ್ಸ್  ಧ್ಯೇಯೋದ್ದೇಶಗಳಾದ ದೇಶ ಪ್ರೇಮ, ಪರಿಸರ ಕಾಳಜಿ, ಸರ್ವ ಧರ್ಮ ಸಮನ್ವತೆಗಳನ್ನು ಇಂದಿನ ಮಕ್ಕಳಿಗೆ ತುಂಬಬೇಕು. ಶಿಕ್ಷಣ ಇಲಾಖೆಯ ಅಧಿಕಾರಿಗಳು ಈ ಬಗ್ಗೆ  ಹೆಚ್ಚು ಕಾಳಜಿ ವಹಿಸಬೇಕು ಎಂದರು.

ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ಕೃಷ್ಣಮೂರ್ತಿ ಮಾತನಾಡಿ, ಇಂದು ದೇಶದಲ್ಲಿ ಹಲವಾರು ಸಮಸ್ಯೆಗಳಿವೆ. ಶಿಕ್ಷಣ, ಆರೋಗ್ಯ, ಪರಿಸರ ಸಂರಕ್ಷಣೆ ಮೊದಲಾದ ಪ್ರಮುಖ ಸಂಗತಿಗಳ ಬಗ್ಗೆ ಇಂದಿನ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕಿದ್ದು, ಶಾಲೆಗಳಲ್ಲಿ ವಾರಕ್ಕೆ ಒಂದು ದಿನ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳಿಗೆ ಮೀಸಲಿಟ್ಟು, ಮಕ್ಕಳನ್ನು ಕ್ರಿಯಾಶೀಲರನ್ನಾಗಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಡಿವೈಪಿಸಿ ಯೋಜನಾಧಿಕಾರಿ ಕೆಂಪಯ್ಯ,  ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಆಯುಕ್ತ ನಾಗರಾಜ, ಕಾರ್ಯದರ್ಶಿ ಶ್ರೀನಿವಾಸ್ ಪ್ರಸಾದ್, ತರಬೇತುದಾರ, ಚಿನ್ನಸ್ವಾಮಿ ರೆಡ್ಡಿ, ಸಹಾಯಕ ಆಯುಕ್ತ ವೆಂಕಟರಾಜು, ಅರುಣಾ, ಮಾಲಾ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

Ramesh Babu

Journalist

Recent Posts

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

2 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

5 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

17 hours ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

17 hours ago

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ – ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…

20 hours ago

ಎಫ್‌ಐಡಿ ಹೊಂದಿದ ರೈತರಿಗೆ ಮಾತ್ರ ಬರಪರಿಹಾರ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆಯಿಂದಾಗಿ ಸಂಕಷ್ಟಕ್ಕೊಳಗಾದ ರೈತರಿಗೆ ನೆರವು ಒದಗಿಸುವ ಉದ್ದೇಶದಿಂದ,…

20 hours ago