ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ವತಿಯಿಂದ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕರ ನಿಷೇಧ ಮತ್ತು ನಿಯಂತ್ರಣ ಕಾಯ್ದೆ 1986 ಮತ್ತು ತಿದ್ದುಪಡಿ ಕಾಯ್ದೆ 2016ರಡಿಯಲ್ಲಿ ಜಿಲ್ಲೆಯಲ್ಲಿ ಬಾಲಕಾರ್ಮಿಕರನ್ನು ಹಾಗೂ ಕಿಶೋರ ಕಾರ್ಮಿಕರನ್ನು ನೇಮಿಸಿಕೊಂಡಿರುವವರ ವಿವಿಧ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಅನಿರೀಕ್ಷಿತ ತಪಾಸಣೆ ಮತ್ತು ಹಠಾತ್ ದಾಳಿಯನ್ನು ಕೈಗೊಂಡಾಗ ಕಂಡುಬಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಕ್ಕಳಿಗೆ ಎಸ್.ಸಿ.ಎಸ್.ಪಿ. ಮತ್ತು ಟಿ.ಎಸ್.ಪಿ ಯೋಜನೆಯಡಿ ಶೈಕ್ಷಣಿಕ ಸಾಮಾಗ್ರಿಗಳನ್ನು ಮತ್ತು ಅವರ ಪೋಷಕರಿಗೆ ಆಹಾರ ಧಾನ್ಯಗಳ ಕಿಟ್ ಗಳನ್ನು ಜಿಲ್ಲಾಧಿಕಾರಿಗಳಾದ ಡಾ.ಶಿವಶಂಕರ್.ಎನ್ ಅವರು ವಿತರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ನಾಗೇಂದ್ರ ಹೆಚ್.ಆರ್ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕರಾದ ಸುಬ್ಬಾರಾವ್.ಎಸ್ ಹಾಗೂ ಪೋಷಕರು ಮತ್ತು ಮಕ್ಕಳು ಹಾಜರಿದ್ದರು.