ಮಕ್ಕಳು ತಮ್ಮ ಸೃಜನಶೀಲ ಪ್ರತಿಭೆ ಹೊರಹಾಕಲು ವಸ್ತುಪ್ರದರ್ಶನ ಅತ್ಯುತ್ತಮ ವೇದಿಕೆ: ಧನಂಜಯ

ಶಾಲೆಗಳಲ್ಲಿ ಏರ್ಪಡಿಸುವ ವಸ್ತು ಪ್ರದರ್ಶನಗಳು ಮಕ್ಕಳು ತಮ್ಮ ಸೃಜನಶೀಲ ಪ್ರತಿಭೆಯನ್ನು ಹೊರಹಾಕಲು ಒಳ್ಳೆಯ ವೇದಿಕೆಯಾಗಿರುತ್ತವೆ ಎಂದು ನಂದಿ ಹಿಲ್ ವೂ ಇಂಟರ್ ನ್ಯಾಷನಲ್ ಸ್ಕೂಲ್ ನ ಕಾರ್ಯದರ್ಶಿ ಧನಂಜಯ ಹೇಳಿದರು.

ತಾಲೂಕಿನ ತೂಬಗೆರೆ ಹೋಬಳಿಯ ದುರ್ಗೇನಹಳ್ಳಿ ಬಳಿ‌ ಇರುವ ನಂದಿ ಹಿಲ್ ವೂ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಏರ್ಪಡಿಸಲಾಗಿದ್ದ ಗಣಿತ, ಕಲಾ ಮತ್ತು ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಈ ವಸ್ತುಪ್ರದರ್ಶನಗಳು ಸಹಕಾರಿಯಾಗಲಿವೆ ಎಂದರು.

ಪಠ್ಯದಲ್ಲಿರುವ ಬರುವ ವಿಷಯಗಳನ್ನು ಪ್ರಾಯೋಗಿಕವಾಗಿ ವಸ್ತು ಪ್ರದರ್ಶನದಲ್ಲಿ ತೋರಿಸಬಹುದು. ಮಕ್ಕಳು ವಸ್ತು ಪ್ರದರ್ಶನದಲ್ಲಿ ಉತ್ಸುಹಕರಾಗಿ ಪಾಲ್ಗೊಳ್ಳುವುದರಿಂದ ಪಠ್ಯದಲ್ಲಿರುವ ವಿಷಯಗಳು ಚೆನ್ನಾಗಿ ಮನದಟ್ಟಾಗುತ್ತವೆ ಎಂದರು.

ಶಾಲೆಯ ಎಲ್.ಕೆ.ಜಿ ವಿದ್ಯಾರ್ಥಿಗಳಿಂದ 8ನೇ ತಗತಿಯ ಮಕ್ಕಳು ಸುತ್ತಾಮುತ್ತ ಸಿಗುವ ಕಚ್ಛಾ ವಸ್ತುಗಳನ್ನ ಬಳಸಿ ತಮ್ಮ ಪುಟ್ಟ ಪುಟ್ಟ ಕೈಗಳಿಂದ ಗಣಿತ, ಕಲಾ ಮತ್ತು ವಿಜ್ಞಾನ ಮಾದರಿಗಳನ್ನು ತಯಾರಿಸಿ ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದು ಸಂತಸದ ಸಂಗತಿ ಎಂದು ಶಾಲೆಯ ಪ್ರಾಂಶುಪಾಲರಾದ ಭಾವನಾ ಹೇಳಿದರು.

ವಸ್ತುಪ್ರದರ್ಶನದಲ್ಲಿ ರಾಷ್ಟ್ರೀಯ ಲಾಂಛನ, ಮಳೆ ನೀರು ಕೊಯ್ಲು, ವಿವಿಧ ರೀತಿಯ ಮನೆಗಳ ಕಲಾಕೃತಿ, ಮನುಷ್ಯನ ದೇಹ, ಮೆದುಳು, ಹೃದಯ, ಕಣ್ಣು, ವಿವಿಧ ಜೀವಿಗಳ ಕಲಾಕೃತಿಗಳು‌ ಸೇರಿದಂತೆ ಗಣಿತ, ಕಲಾ ಮತ್ತು ವಿಜ್ಞಾನ ಮಾದರಿಗಳು‌ ನೋಡುಗರ ಕಣ್ಮನ‌ ಸೆಳೆಯಿತು.

ಈ ವೇಳೆ ಶಾಲಾ ಅಧ್ಯಕ್ಷರಾದ ವರಲಕ್ಷ್ಮಿ, ಪೋಷಕರು ಸೇರಿದಂತೆ ಶಿಕ್ಷಕರು, ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ-ಎನ್.ಶೋಭಾ

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…

9 hours ago

ಮನೆ ಹೊಸ್ತಿಲಿನಲ್ಲಿ ಪೂಜೆಗಿಟ್ಟಿದ್ದ ಒಣಗಿದ ದಾಸವಾಳ ಹೂ ನುಂಗಿ ಆರುವರೆ ತಿಂಗಳ ಮಗು ದಾರುಣ ಸಾವು

ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…

11 hours ago

ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಲೋಕಾಯುಕ್ತ ಬಲೆಗೆ

ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…

12 hours ago

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

21 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

23 hours ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

1 day ago