ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಕೊಡುಗೆ ಅಪಾರ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ

ಮಕ್ಕಳ ಭವಿಷ್ಯ ರೂಪಿಸುವುದು ಶಿಕ್ಷಕರ ಕೈಯಲ್ಲಿರುತ್ತದೆ, ದೇಶದ ಅಭಿವೃದ್ಧಿಗಾಗಿ ಮಕ್ಕಳು ಪುಟ್ಟ ಹೆಜ್ಜೆಯಿಂದ ದಿಟ್ಟ ಹೆಜ್ಜೆ ಇಡುವವರೆಗೂ ಶಿಕ್ಷಕರ ಕೊಡುಗೆ ಅಪಾರವಾದದ್ದು ಎಂದು ಅಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ, ದೇವನಹಳ್ಳಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ದೇವನಹಳ್ಳಿ ಟೌನ್ ನ ಅಂಬೇಡ್ಕರ್ ಭವನದಲ್ಲಿ  ಭಾರತರತ್ನ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ರವರ ಜನ್ಮದಿನಾಚರಣೆಯ ಅಂಗವಾಗಿ ಏರ್ಪಡಿಸಲಾಗಿದ್ದ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆಯನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಭಾರತ ರತ್ನ ಸರ್ವೆಪಲ್ಲಿ ರಾಧಾಕೃಷ್ಣನ್ ಅವರು ಸ್ವಾತಂತ್ರ್ಯ ಹೋರಾಟಗಾರರು, ಶಿಕ್ಷಕರು, ರಾಷ್ಟ್ರಪತಿಗಳಾಗಿ ಬಹಳಷ್ಟು ಸೇವೆ ಸಲ್ಲಿಸಿದ್ದಾರೆ. ಸಾವಿತ್ರಿ ಬಾಯಿ ಪುಲೆ ಅವರು ಭಾರತದ ಮೊದಲ ಮಹಿಳಾ ಶಿಕ್ಷಕಿ. ಹೆಣ್ಣು ಕಲಿತರೆ ಶಾಲೆಯೊಂದು ತೆರೆದಂತೆ ಎನ್ನುವ ನಾಣ್ಣುಡಿಯೇ ಇದೆ. ಹೆಣ್ಣು ಮಕ್ಕಳು, ಸದೃಢರು ಸಬಲರು. ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ದೇಶವನ್ನು ಕಟ್ಟುವುದು ಮುಂದಿನ ಪ್ರಜೆಗಳಾದ ಮಕ್ಕಳು. ಮಕ್ಕಳಿಗೆ ಶಿಕ್ಷಕರು ಹೇಗೆ ಪಾಠ ಕಲಿಸುತ್ತೀರಿ ಅನ್ನುವುದು ಮುಖ್ಯ. ಶಾಲೆಯ ಮಕ್ಕಳನ್ನು ನಿಮ್ಮ ಮಕ್ಕಳಂತೆ ಭಾವಿಸಿ. ಬಸವಣ್ಣನವರ  ಕಾಯಕವೇ ಕೈಲಾಸ ಎಂಬಂತೆ ಕರ್ತವ್ಯ ನಿಷ್ಠೆ ಇರಬೇಕು, ದೇಶದ ಭವಿಷ್ಯ ಶಿಕ್ಷಕರ ಕೈಲಿದೆ. ಮಕ್ಕಳಿಗೆ ಸಂಸ್ಕಾರ, ಜ್ಞಾನ ನೀಡಿ ವಿದ್ಯಾರ್ಥಿಗಳನ್ನು ಬೆಳೆಸಬೇಕು ಎಂದರು.

ಅಕ್ಟೋಬರ್ 02 ರ ಗಾಂಧಿ ಜಯಂತಿ ದಿನ 10 ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿ ಮಾಡಲಾಗುವುದು. ತಾಲ್ಲೂಕಿನ ಶಾಲೆಗಳಿಗೆ ಮೊದಲ ಹಂತದಲ್ಲಿ ಕುಡಿಯುವ ನೀರು ಶೌಚಾಲಯಕ್ಕೆ ಆದ್ಯತೆ ನೀಡಿ, ಶಾಲಾ ಕಟ್ಟಡ, ಆಟದ ಮೈದಾನ, ಕಾಂಪೌಂಡ್ ನ್ನು ಹಂತ ಹಂತವಾಗಿ ನಿರ್ಮಿಸಲಾಗುವುದು ಎಂದು ಹೇಳಿದರು. ದೇವನಹಳ್ಳಿ ಯಲ್ಲಿರುವ ಗುರುಭವನಕ್ಕೆ 1000 ಆಸನ ವ್ಯವಸ್ಥೆ ಒಳಗೊಂಡ ಭವನ ನಿರ್ಮಾಣಕ್ಕೆ  10 ಲಕ್ಷ ರೂ.ಗಳನ್ನು ಶಾಸಕರ ಅನುದಾನದಲ್ಲಿ ನೀಡಲಾಗುವುದು ಎಂದು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಪದವೀಧರರ ಕ್ಷೇತ್ರ ಶಾಸಕರಾದ ಅ.ದೇವೇಗೌಡ ಅವರು ಮಾತನಾಡಿ ಮನುಷ್ಯ ನಾಗರಿಕನಾಗಬೇಕಾದರೆ ಶಿಕ್ಷಣದ ಪಾತ್ರ ಅಪಾರವಾಗಿರುತ್ತದೆ. ಶಿಕ್ಷಣ ಎಂದರೆ ವಿದ್ಯಾರ್ಥಿಯ ವ್ಯಕ್ತಿತ್ವ ರೂಪಿಸುವುದು. ಶಿಕ್ಷಣದ ಗೌರವ ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿ. ತಂದೆ ತಾಯಿಯ ನಂತರ ಮಕ್ಕಳ  ಜೀವನ ರೂಪಿಸುವುದು ಶಿಕ್ಷಕರೇ ಎಂದು ಅವರು ಹೇಳಿದರು.

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ಶಾಸಕರಾದ ಪ್ರದೀಪ್ ಈಶ್ವರ್ ಅವರು ಮಾತನಾಡಿ ಮಕ್ಕಳಿಗೆ ಪಾಠದ ಜೊತೆಗೆ , ಧೈರ್ಯ, ಆತ್ಮಸ್ಥೈರ್ಯ, ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಬಲ ಬೆಳೆಸಿ. ಸಾಧನೆಗಳ ಬಗ್ಗೆ ಪ್ರೊತ್ಸಾಹದ ಮಾತುಗಳನ್ನಾಡಿ. ಶಾಲೆಯಲ್ಲಿ ಹೇಳುವ ಪಾಠವನ್ನು ನಿಜ ಜೀವನದಲ್ಲಿ ಅಳವಡಿಸಿಕೊಂಡರೆ ಉತ್ತಮ ಪ್ರಜೆಗಳಾಗುತ್ತಾರೆ. ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಜವಾಬ್ದಾರಿ ಹೆಚ್ಚಿರುತ್ತದೆ ಎಂದು ಅವರು ಹೇಳಿದರು.

ಇದೆ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರಿಗೆ ಹಾಗೂ ಉತ್ತಮ ಶಿಕ್ಷಕರಿಗೆ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ದೇವನಹಳ್ಳಿ ತಹಶೀಲ್ದಾರ್ ಶಿವರಾಜ್, ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥ್ ಗೌಡ, ಶಾಲಾ ಸಾಕ್ಷರತಾ ಹಾಗೂ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಶ್ರೀಕಂಠ, ತಾಲೂಕು ಶಿಕ್ಷಣಾಧಿಕಾರಿ ಸುಮ, ಪುರಸಭೆ ಮುಖ್ಯಾಧಿಕಾರಿ ದೊಡ್ಡ ಮಲ್ಲಯ್ಯ, ಶಿಕ್ಷಕರ ಸಂಘದ ಅಧ್ಯಕ್ಷ, ಉಪಾಧ್ಯಕ್ಷ, ಶಾಲಾ ಶಿಕ್ಷಕರು, ನಿವೃತ್ತ ಶಿಕ್ಷಕರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಪಾಲನಜೋಗಿಹಳ್ಳಿ ಬಳಿ ಅಪಘಾತ: ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…

18 minutes ago

ಚಿಂತಕರು ಸ್ವಾಮಿ ನಾವು ಚಿಂತಕರು….

ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ‌ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…

1 hour ago

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ನೇಮಕ

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…

14 hours ago

ಪ್ರತಿಯೊಬ್ಬ ಭಾರತೀಯನ ತಲೆ ಮೇಲೆ ರೂ. 4.8 ಲಕ್ಷದಷ್ಟು ಸಾಲದ ಹೊರೆ ಇದೆ- ಸಿಎಂ‌ ಸಿದ್ದರಾಮಯ್ಯ

ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…

15 hours ago

ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದ ಪಾಪಿ ಪುತ್ರ

ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…

17 hours ago

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

21 hours ago