ಮಕ್ಕಳು ದೇಶದ ಆಸ್ತಿ, ಮಕ್ಕಳ ಹಕ್ಕುಗಳ ಮೇಲಿನ ದೌರ್ಜನ್ಯ ಶಿಕ್ಷಾರ್ಹ ಅಪರಾಧವಾಗಿದ್ದು ಮಕ್ಕಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ ಆಗಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣ ಗೌಡ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ಘಟಕ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಆರ್.ಟಿ.ಇ 2009, ಪೋಕ್ಸೋ 2012 ಹಾಗೂ ಬಾಲನ್ಯಾಯ ಕಾಯ್ದೆ 2015 ರ ಅನುಷ್ಠಾನದ ಕುರಿತು ವಿವಿಧ ಇಲಾಖೆ ಭಾಗಿದಾರರೊಂದಿಗೆ ಪ್ರಗತಿ ಪರಿಶೀಲನಾ ಸಭೆ ಮತ್ತು ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿ ಮಗುವಿನ ಸರ್ವತೋಮುಖ ಅಭಿವೃದ್ಧಿಗೆ ಬದುಕುವ ಹಕ್ಕು, ವಿಕಾಸ ಹೊಂದುವ ಹಕ್ಕು, ಭಾಗವಹಿಸುವ ಹಕ್ಕು, ರಕ್ಷಣೆ ಹಕ್ಕು ಪ್ರಮುಖ ಅಂಶಗಳಾಗಿದೆ. ವಿವಿಧ ಕಾರಣಗಳಿಂದ ಮಕ್ಕಳ ಮೇಲೆ ದೌರ್ಜನ್ಯಗಳು, ಹಕ್ಕುಗಳ ಉಲ್ಲಂಘನೆ ನಡೆಯುತ್ತಾ ಬಂದಿರುವುದು ಆಘಾತಕಾರಿ. ಕಾನೂನು ಅಡಿಯಲ್ಲಿ ಮಕ್ಕಳ ರಕ್ಷಣೆ ಆಗಬೇಕು. ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಮಕ್ಕಳ ರಕ್ಷಣೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದರು.
ಶಾಲೆಗೆ ಹಾಜರಾಗುತ್ತಿರುವ ಮಕ್ಕಳು ಮತ್ತು ಶಾಲೆಗೆ ಬರದೇ ಇರುವ ಮಕ್ಕಳ ಬಗ್ಗೆ ಗಮನ ಹರಿಸಬೇಕು. ಶಾಲೆಗೆ ಬರದೇ ಇರುವ ಮಕ್ಕಳು ಕಂಡು ಬಂದಾಗ ಆ ಮಗುವು ಶಾಲೆಗೆ ಬರದೇ ಇರಲು ಕಾರಣ ತಿಳಿದು ಅದನ್ನು ಪರಿಹರಿಸಬೇಕು. ಶಾಲೆಗಳಲ್ಲಿ ಪೊಲೀಸ್ ಸಹಾಯವಾಣಿ ಸಂಖ್ಯೆ 112 ಅನ್ನು ಕಾಡ್ಡಾಯವಾಗಿ ಪ್ರದರ್ಶಿಸಬೇಕು ಜೊತೆಗೆ ದೂರು ಪೆಟ್ಟಿಗೆಯನ್ನು ಇರಿಸಲು ಹೇಳಿದರು.
ಬಾಲ್ಯ ವಿವಾಹ, ಭಿಕ್ಷಾಟನೆ, ಮಕ್ಕಳ ಮಾರಾಟ, ಲೈಂಗಿಕ ದೌರ್ಜನ್ಯ, ಬಾಲ ಕಾರ್ಮಿಕ ಪದ್ಧತಿ ಕಂಡು ಬಂದಲ್ಲಿ ಸಾರ್ವಜನಿಕರು ಮಕ್ಕಳ ಸಹಾಯವಾಣಿ ಸಂಖ್ಯೆ 1098 ಅಥವಾ ಪೊಲೀಸ್ ಸಹಾಯವಾಣಿ ಸಂಖ್ಯೆ 112 ಗೆ ಉಚಿತ ಕರೆ ಮಾಡಿ ದೂರು ನೀಡಬಹುದಾಗಿದೆ.
ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕಲ್ಪಿಸುವುದರಿಂದ ದೇಶದ ಅಭಿವೃದ್ಧಿಗೆ ಪೂರಕ. ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ ಹೊಸ ಹೊಸ ಕಾನೂನುಗಳು ಬರುತ್ತದೆ, ಕಾನೂನುಗಳು ತಿದ್ದುಪಡಿ ಆಗುತ್ತದೆ. ಆ ಕಾನೂನುಗಳ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಲು ಕಾಲಕಾಲಕ್ಕೆ ಕಾರ್ಯಾಗಾರಗಳನ್ನು ಏರ್ಪಡಿಸಲಾಗುತ್ತದೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎ. ಬಿ ಬಸವರಾಜು, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ರಮೇಶ್ ಟಿ. ಕೆ, ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಯೋಜನಾ ನಿರ್ದೇಶಕ ವಿಠಲ್ ಕಾವ್ಳೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಮುದ್ದಣ್ಣ, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಅನಿತಾಲಕ್ಷ್ಮಿ , ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರಾಮು ಮಲ್ಲಯ್ಯ, ಡಿವೈಎಸ್ಪಿ ಶಂಕರ್ ಗೌಡ ಪಾಟೀಲ್, ಬಚಪನ್ ಬಚಾವೊ ರಾಜ್ಯ ಸಂಚಾಲಕ ಬಿನೂ ವರ್ಗಿಸ್ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು,ಸಿಬ್ಬಂದಿ ವರ್ಗ ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ಕಳೆದ 10 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗ್ರಾಮದ ಸರ್ವೇ ನಂಬರ್ 50ರ ಗೋಮಾಳದಲ್ಲಿ 53-57 ಅರ್ಜಿ…
ರಸ್ತೆ ನಿಯಮಗಳನ್ನು ಪಾಲಿಸದೆ ವಾಹನಸವಾರರಿಗೆ ಸಮಸ್ಯೆ ಮಾಡುತ್ತಿರುವ ಟೋಲ್ ಸಿಬ್ಬಂದಿ ವಿರುದ್ದ ರಾಜ್ಯ ರೈತ ಸಂಘ ಮತ್ತು ವಿವಿಧ ಕನ್ನಡಪರ…
ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…
ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…