ಮಗನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ ತಂದೆ. ದೊಡ್ಡಬಳ್ಳಾಪುರ ತಾಲೂಕಿನ ವಾಣಿಗರಹಳ್ಳಿ ಗ್ರಾಮದಲ್ಲಿ ಜೂನ್ 29ರ ಸಂಜೆ ಸುಮಾರು 7ಗಂಟೆ ಸಮಯದಲ್ಲಿ ಘಟನೆ ನಡೆದಿದೆ.
ಮಗ ಆದರ್ಶ್ ಗೆ ದುಡಿಮೆ ಮಾಡಲು ಆಟೋ , ಕಾರು ಸಹ ತಂದೆ ಖರೀದಿ ಮಾಡಿ ಕೊಡಲಾಗಿತ್ತು. ಆದರೆ ಕುಡಿತದ ಚಟಕ್ಕೆ ಒಳಗಾಗಿದ್ದ ಮಗ ಆದರ್ಶ್ ಎಲ್ಲವನ್ನು ಹಾಳು ಮಾಡಿದ್ದ, ಜೊತೆಗೆ ಕುಡಿತದ ಚಟ ಬಿಡಲು ಪರಿವರ್ತನಾ ಕೇಂದ್ರಕ್ಕೂ ಸಹ ಸೇರಿದ್ದರು. ಆದರೂ ಕುಡಿತ ಬಿಡದ ಮಗ ಆದರ್ಶ್ ಇತ್ತೀಚೆಗೆ ತಾಯಿಗೂ ಸಹ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದ ಎನ್ನಲಾಗಿದೆ.
ಮಗನ ರೋಧನೆ ತಾಳಲಾರದೇ ರೋಸಿ ಹೋಗಿದ್ದ ತಂದೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಇನ್ನೂ ಪಕ್ಕದಲ್ಲಿ ಇದ್ದ ಬಾರ್ ಬಳಿ ತಂದೆ ಮಗನಿಗೆ ಥಳಿಸಿದ್ದಾನೆ ನಂತರ ಕೈ ಕಾಲು ಕಟ್ಟಿ ತೋಟಕ್ಕೆ ಎಳೆದೊಯ್ದಿದ್ದಾನೆ. ನಂತರ ತೋಟದ ಬಳಿ ಕೈ ಕಾಲು ಕಟ್ಟಿ ಹಲಸಿನ ಮರಕ್ಕೆ ಕಟ್ಟಿಹಾಕಿ ಪೆಟ್ರೋಲ್ ಸುರಿದು ಬೆಂಕಿ ಇಟ್ಟಿದ್ದಾನೆ. ಈ ಬಗ್ಗೆ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…
ಮಂಗಳವಾರ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರು ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಅವರು ಉಪರಾಷ್ಟ್ರಪತಿ…
ದೊಡ್ಡಬಳ್ಳಾಪುರ : 40 ಕೋಟಿ ಮೌಲ್ಯದ ಸರ್ಕಾರಿ ಆಸ್ತಿಯನ್ನ ಸರ್ಕಾರದ ವಶಕ್ಕೆ ಪಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜುರವರ…