ಹಳೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಲೋಕಾಯುಕ್ತ ಅಧಿಕಾರಿಗಳ ತಂಡ ತಾಲೂಕಿನ ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಬೆಳಿಗ್ಗೆಯಿಂದ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಕಳೆದ ಎರಡು ವರ್ಷದ ಹಿಂದೆ ಪಂಚಾಯಿತಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಇದರ ಜೊತೆಗೆ ಎರಡು ತಿಂಗಳ ಹಿಂದೆಯೂ ಸಹ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಈಗ ಪ್ರಕರಣಗಳಿಗೆ ಸಂಬಂಧಿಸಿದಂತೆ ಇಂದು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಕೈಗಾರಿಕಾ ಪ್ರದೇಶವನ್ನ ಒಳಗೊಂಡಿರುವ ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ, ಕೆಲವು ಕಾರ್ಖಾನೆಗಳು ಯಾವುದೇ ಅನುಮತಿ ಇಲ್ಲದೆ ಕೆಲಸ ಮಾಡುತ್ತಿವೆ. ಹಾಗೆಯೇ ಅನುಮತಿ ಇಲ್ಲದೆ ಪಿಜಿಗಳನ್ನು ನಡೆಸಲಾಗುತ್ತಿದೆ ಎಂದು ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನಲೆ ಲೋಕಾಯುಕ್ತ ಅಧಿಕಾರಿಗಳು ಪಂಚಾಯಿತಿ ಮೇಲೆ ದಾಳಿ ನಡೆಸಿ ಕಾಗದ ಪತ್ರಗಳ ಪರಿಶೀಲನೆಯನ್ನ ನಡೆಸುತ್ತಿದ್ದಾರೆ.