ಮಜರಾಹೊಸಹಳ್ಳಿ ಗ್ರಾ.ಪಂ ಪ್ರಭಾರ ಅಧ್ಯಕ್ಷರಾಗಿ ಮಾರಪ್ಪ ಅಧಿಕಾರ ಸ್ವೀಕಾರ

ತಾಲೂಕಿನ ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ 17 ಸದಸ್ಯರ ಬಲ ಹೊಂದಿದ್ದು, ಸರ್ವ ಸದಸ್ಯರ ಒಮ್ಮತದಿಂದ ಅವಿರೋಧವಾಗಿ ಮಾರಪ್ಪನವರನ್ನು ಪ್ರಭಾರ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.

ಪ್ರಭಾರ ಅಧ್ಯಕ್ಷರಿಗೆ ಸದಸ್ಯರು ಮತ್ತು ಸ್ಥಳೀಯ ಮುಖಂಡರು ಮಾಲಾರ್ಪಣೆ ಮಾಡಿ ಸಿಹಿ ಹಂಚುವ ಮೂಲಕ ಅಭಿನಂದಿಸಿದರು.

ಮಾಧ್ಯಮದವರೊಂದಿಗೆ ಪ್ರಭಾರ ಅಧ್ಯಕ್ಷ ಮಾರಪ್ಪ ಮಾತನಾಡಿ, ನಮ್ಮ ಪಂಚಾಯತಿಯ ಸರ್ವ ಸದಸ್ಯರು ಯಾವುದೇ ಪಕ್ಷ ಬೇಧವಿಲ್ಲದೆ ಅವಿರೋಧವಾಗಿ ನನ್ನನ್ನು ಪ್ರಭಾರ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆ‌. ಅವರೆಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ನನಗೆ ವಹಿಸಿರುವ ಜವಾಬ್ಧಾರಿಯನ್ನು ಯಾವುದೇ ಪಕ್ಷಬೇಧ ಮಾಡದೆ ಪಂಚಾಯತಿಯ ಸರ್ವತೋಮುಖ ಅಭಿವೃದ್ಧಿಗೆ ನಿಷ್ಠೆಯಿಂದ ಶ್ರಮಿಸುತ್ತೇನೆ ಎಂದರು.

ಈ ಹಿಂದೆ ನಾನು ಗ್ರಾಮ ಪಂಚಾಯತಿ ಸದಸ್ಯನಾಗಿ, ಉಪಾಧ್ಯಕ್ಷನಾಗಿ ಕರ್ತವ್ಯ ನಿರ್ವಹಿಸಿದ್ದು, ಹಳೆಯ ಅನುಭವಗಳು ಅಧ್ಯಕ್ಷನಾಗಿ ಕರ್ತವ್ಯ ನಿರ್ವಹಿಸಲು ಮತ್ತಷ್ಟು ಶಕ್ತಿ ತುಂಬಲಿವೆ. ನಮ್ಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾಕಷ್ಟು ಕಾರ್ಖಾನೆಗಳಿದ್ದು , ಸ್ಥಳೀಯ ಕಾರ್ಖಾನೆಗಳಿಂದ ನಮಗೆ ಲಾಭಕ್ಕಿಂತ ನಷ್ಟವೇ ಹೆಚ್ಚು. ಪ್ರಮುಖವಾಗಿ ಪರಿಸರ ಮಾಲಿನ್ಯ, ಜಲ ಮೂಲಗಳ ಮಾಲಿನ್ಯ ನಿರಂತರವಾಗಿ ಕಾಡುತ್ತಿರುವ ಸಮಸ್ಯೆಯಾಗಿದೆ. ಈ ಕುರಿತು ಗ್ರಾಮ ಮಟ್ಟದಿಂದ ರಾಜ್ಯಮಟ್ಟದವರೆಗೂ ನಾವು ನಿರಂತರ ಹೋರಾಟ ನಡೆಸುತ್ತಿದ್ದೇವೆ. ಸದ್ಯದ ಪರಿಸ್ಥಿತಿಯಲ್ಲಿ ನಮ್ಮ ದೊಡ್ಡತುಮಕೂರು ಪಂಚಾಯಿತಿ ಹಾಗೂ ಮಜರಾಹೊಸಹಳ್ಳಿ ವ್ಯಾಪ್ತಿಯ ಗ್ರಾಮಗಳಿಗೆ ಅರಳುಮಲ್ಲಿಗೆ ಪಂಚಾಯಿತಿ ವ್ಯಾಪ್ತಿಯಿಂದ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ಕಾಮಗಾರಿ ಚಾಲ್ತಿಯಲ್ಲಿದ್ದು, ಸ್ಥಳೀಯ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದೇ ಮೊದಲ ಆದ್ಯತೆಯಾಗಿದೆ ಎಂದರು.

ಪ್ರಭಾರ ಅಧ್ಯಕ್ಷರಿಗೆ ಸ್ಥಳೀಯ ಮುಖಂಡರಾದ ತಿ.ರಂಗರಾಜು, ಬಮೂಲ್ ನಿರ್ದೇಶಕ ಬಿ ಸಿ ಆನಂದ್ ಕುಮಾರ್, ಸ್ಥಳೀಯ ಮುಖಂಡ ಬಿ ಎಚ್ ಕೆಂಪಣ್ಣ, ಕಾಂಗ್ರೆಸ್ ಮುಖಂಡ ಆದಿತ್ಯ ನಾಗೇಶ್, ಮುಖಂಡ ಸಂದೇಶ್ ಸೇರಿದಂತೆ ಹಲವು ಗಣ್ಯರು ಶುಭಕೋರಿದ್ದಾರೆ.

Ramesh Babu

Journalist

Recent Posts

ಮದುವೆಯಾದ 45 ದಿನಕ್ಕೆ ಲವರ್​​ ಜೊತೆ ಯುವತಿ ಎಸ್ಕೇಪ್​​: ಪತಿ, ಸೋದರ ಮಾವ ಸೂಸೈಡ್

  ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…

3 hours ago

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…

5 hours ago

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!

ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…

5 hours ago

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…

7 hours ago

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

8 hours ago

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

13 hours ago