Categories: ಕೋಲಾರ

ಮಣ್ಣಿನ ವಸ್ತುಗಳ ತಯಾರಿಕೆಯಿಂದ ಹಳ್ಳಿ ಜನರ ಉದ್ಯೋಗಕ್ಕೆ ಸಹಕಾರಿ: ಮಹಿಮಾ ಪಟೇಲ್

ಮಣ್ಣಿನಿಂದ ತಯಾರಿಸಿದ ವಸ್ತುಗಳಿಂದ ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಜೊತೆಗೆ ಪರಿಸರಕ್ಕೂ ಪ್ರಯೋಜನಕಾರಿ ಹೆಚ್ಚಾಗಿ ಮಣ್ಣಿನ ವಸ್ತುಗಳನ್ನು ಬಳಸುವುದರಿಂದ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದಾಗಿದೆ ಎಂದು ಜೆಡಿಯು ಪಕ್ಷದ ರಾಜ್ಯ ಅಧ್ಯಕ್ಷ ಹಾಗೂ ಮಾಜಿ ಶಾಸಕ ಮಹಿಮಾ ಜೆ.ಪಟೇಲ್ ತಿಳಿಸಿದರು.

ತಾಲೂಕಿನ ಕಲ್ಲಂಡೂರು ಗ್ರಾಮದಲ್ಲಿನ ಡಾ.ಕೆ.ನಾಗರಾಜ್ ಅವರ ಪ್ರೋಟರಿ ಕ್ಲಸ್ಟರ್ ಗೆ ಮಂಗಳವಾರ ಭೇಟಿ ನೀಡಿ ಮಣ್ಣಿನಿಂದ ತಯಾರಿಸಿದ ವಸ್ತುಗಳನ್ನು ವೀಕ್ಷಿಸಿ ಮಾತನಾಡಿದ ಅವರು ಪ್ಲಾಸ್ಟಿಕ್‌ ಹಾಗೂ ಗಾಜಿನಿಂದ ತಯಾರಿಸಿದ ಲೋಟ, ತಟ್ಟೆಗಳಲ್ಲಿ ವಿಷಕಾರಿ ರಾಸಾಯನಿಕ ಅಂಶವಿರುತ್ತದೆ. ಈ ಅಂಶವು ನಮಗೆ ಗೊತ್ತಿಲ್ಲದೆ ಊಟದ ಜತೆ ದೇಹ ಸೇರಿ ಆರೋಗ್ಯ ಕೆಡಿಸುತ್ತದೆ. ಪೂರ್ವಜರು ಮಣ್ಣಿನಿಂದ ಮಾಡಿದ ಮಡಿಕೆ, ಕುಡಿಕೆಗಳನ್ನೇ ಪಾತ್ರೆಗಳಾಗಿ ಬಳಸಿ ಆರೋಗ್ಯವಂತರಾಗಿರುತ್ತಿದ್ದರು. ಮಡಿಕೆ, ಕುಡಿಕೆ ಬಳಸುವ ಮೂಲಕ ಕುಂಬಾರಿಕೆ ವೃತ್ತಿಯನ್ನು ಉತ್ತೇಜಿಸಿದಂತೆ ಆಗುತ್ತದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಸುಳ್ಳು, ಮೋಸ, ಭ್ರಷ್ಟಾಚಾರದ ರಾಜಕಾರಣ ಜಾಸ್ತಿಯಾಗಿದೆ ಸಾವಯವ ರಾಜಕಾರಣದ ಚಿಂತನೆಯಡಿ ಬದಲಾವಣೆಗೆ ನಾವು ಎಲ್ಲರೂ ಪ್ರಯತ್ನ ಮಾಡಲಾಗುತ್ತಿದೆ. ಸಕರಾತ್ಮಕ ಆಲೋಚನೆಗಳಿಂದ ರಾಜಕಾರಣವನ್ನು ಕಟ್ಟುವ ಕೆಲಸ ಆಗಬೇಕಿದೆ ಬಹುತೇಕರಲ್ಲಿ ಇವತ್ತಿನ ರಾಜಕಾರಣದ ಬಗ್ಗೆ ಬೇಸರವಿದೆ. ಬದ್ಧತೆಯುಳ್ಳ ರಾಜಕಾರಣದ ಅಗತ್ಯವಿದೆ ಎಂಬ ಮನಸಿದೆ. ಹೃದಯಕ್ಕೆ ಬೇಕಾದ ರಾಜಕಾರಣವನ್ನು ಜನರು ಆಯ್ಕೆ ಮಾಡಿಕೊಳ್ಳಬೇಕಿದ್ದು, ಕೆಟ್ಟದನ್ನು ದೂರ ಮಾಡಬೇಕು ಇದಕ್ಕೆ ಜನರ ಸಹಕಾರ ಮುಖ್ಯವಾಗಿದೆ ಎಂದರು.

ಈ ಸಂದರ್ಭದಲ್ಲಿ ಜೆಡಿಯು ಪಕ್ಷದ ಯುವ ಘಟಕದ ರಾಜ್ಯ ಅಧ್ಯಕ್ಷ ಹಾಗೂ ಕುಂಬಾರ ಸಮುದಾಯದ ಮುಖಂಡ ಡಾ.ಕೆ.ನಾಗರಾಜ್ ಮಾತನಾಡಿ ಇತ್ತೀಚೆಗೆ ಅಲ್ಯೂಮಿನಿಯಂ, ಸ್ಟೀಲ್‌ ಪಾತ್ರೆಗಳ ಹಾವಳಿಯಿಂದಾಗಿ ವಂಶಪಾರಂಪರ್ಯವಾಗಿ ಕುಲಕಸುಬಾಗಿ ಮಾಡಿಕೊಂಡು ಬಂದಿರುವ ಕುಂಬಾರಿಕೆ ವೃತ್ತಿಗೆ ತೊಡಕುಂಟಾಗುತ್ತಿದೆ. ಮಣ್ಣಿನ ಪಾತ್ರೆಯಲ್ಲಿ ಬೇಯಿಸಿದ ಬಗೆ ಬಗೆಯ ಪದಾರ್ಥಗಳು ಹೆಚ್ಚು ರುಚಿಕರ ಹಾಗೂ ಆರೋಗ್ಯಕ್ಕೂ ಪೂರಕವಾಗಿತ್ತು. ಅಂದಿನ ದಿನಗಳಲ್ಲಿ ಮಣ್ಣಿನಿಂದ ಮಾಡಿದ ಉತ್ಪನ್ನಗಳಿಗೆ ಎಲ್ಲಿಲ್ಲದ ಬೇಡಿಕೆಯಿತ್ತು. ಪ್ರಸ್ತುತ ಬಹುತೇಕ ಜನರು ಅಲ್ಯೂಮಿನಿಯಂ, ಸ್ಟೀಲ್‌ ಪಾತ್ರೆ ಖರೀದಿಗೆ ಮಾರುಹೋಗುತ್ತಿದ್ದಾರೆ. ಆದರೂ ಕಲ್ಲಂಡೂರು ಗ್ರಾಮದ ಕ್ಲಸ್ಟರ್ ನಲ್ಲಿ ಮಣ್ಣಿನಲ್ಲಿ ಮಡಕೆ ಲೋಟ ಇತ್ಯಾದಿ ತಯಾರಿಸುವ ಕುಂಬಾರ ಸಂಪ್ರದಾಯವನ್ನು ಮುಂದುವರೆಸಿಕೊಂಡು ಹೋಗುತ್ತಾ ಇದ್ದೇವೆ ಎಂದರು.

ಸಮಾಜದಲ್ಲಿ ದಿನದಿಂದ ದಿನಕ್ಕೆ ಕುಂಬಾರ ವೃತ್ತಿ ಮಾಡುವವರ ಸಂಖ್ಯೆ ಕಡಿಮೆಯಾಗುತ್ತಿದ್ದು, ಸಮುದಾಯವರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಸವಲತ್ತು ಬಳಸಿಕೊಂಡು ಸ್ವಾವಲಂಬನೆ ಸಾಧಿಸುವಂತೆ ಆಗಬೇಕು ಮಣ್ಣಿನಿಂದ ತಯಾರಿಸಿದ ವಸ್ತುಗಳಿಗೆ ಮಾರುಕಟ್ಟೆ ವ್ಯವಸ್ಥೆ ಸಹ ಮಾಡಲಾಗುತ್ತದೆ ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ಜೆಡಿಯು ಪಕ್ಷದ ರಾಜ್ಯ ಕಾರ್ಯದರ್ಶಿಗಳಾದ ಶಶಿಕುಮಾರ್ ಗೌಡ, ಸೂರ್ಯಪ್ರಕಾಶ್ ಮಹಡಿ, ಮಹಿಳಾ ಘಟಕದ ರಾಜ್ಯ ಅಧ್ಯಕ್ಷೆ ಎಂ.ಡಿ ಕಲಾವತಿ, ಉಪಾಧ್ಯಕ್ಷೆ ಶಾಂತಕುಮಾರಿ,  ರೈತ ಘಟಕದ ಅಧ್ಯಕ್ಷ ಡಿ.ಕೆ ಶ್ರೀನಿವಾಸ್, ಮುಖಂಡರಾದ ಚಂದ್ರಶೇಖರ್, ಪ್ರಭು, ಗಂಗರಾಜು, ಮುಂತಾದವರು ಇದ್ದರು

Ramesh Babu

Journalist

Recent Posts

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

2 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

10 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

12 hours ago

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್: ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸಲು ಸಭೆ

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…

23 hours ago

ಟಿಎಪಿಎಂಸಿಎಸ್ ಚುನಾವಣೆ ಸೋಲಿಗೆ ನಾನೇ ನೇರ ಕಾರಣ- ಸೋಲಿನ ಸಂಪೂರ್ಣ ಜವಾಬ್ದಾರಿ ಶಾಸಕನಾಗಿ ನಾನೇ ತೆಗೆದುಕೊಳ್ಳುತ್ತೇನೆ- ಶಾಸಕ ಧೀರಜ್‌ ಮುನಿರಾಜ್

ಟಿಎಪಿಎಂಸಿಎಸ್ ಚುನಾವಣೆ ಸೋಲಿಗೆ ನಾನೇ ನೇರ ಕಾರಣ. ಸೋಲಿನ ಸಂಪೂರ್ಣ ಜವಾಬ್ದಾರಿ ಶಾಸಕನಾಗಿ ನಾನೇ ತೆಗೆದುಕೊಳ್ಳುತ್ತೇನೆ ಎಂದು ಶಾಸಕ ಧೀರಜ್‌…

1 day ago

ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ

ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮದಿಂದ ಹೊಲಿಗೆ ಯಂತ್ರ ಪಡೆಯಲು ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ…

1 day ago