ಮಣ್ಣಿನಿಂದ ತಯಾರಿಸಿದ ವಸ್ತುಗಳಿಂದ ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಜೊತೆಗೆ ಪರಿಸರಕ್ಕೂ ಪ್ರಯೋಜನಕಾರಿ ಹೆಚ್ಚಾಗಿ ಮಣ್ಣಿನ ವಸ್ತುಗಳನ್ನು ಬಳಸುವುದರಿಂದ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದಾಗಿದೆ ಎಂದು ಜೆಡಿಯು ಪಕ್ಷದ ರಾಜ್ಯ ಅಧ್ಯಕ್ಷ ಹಾಗೂ ಮಾಜಿ ಶಾಸಕ ಮಹಿಮಾ ಜೆ.ಪಟೇಲ್ ತಿಳಿಸಿದರು.
ತಾಲೂಕಿನ ಕಲ್ಲಂಡೂರು ಗ್ರಾಮದಲ್ಲಿನ ಡಾ.ಕೆ.ನಾಗರಾಜ್ ಅವರ ಪ್ರೋಟರಿ ಕ್ಲಸ್ಟರ್ ಗೆ ಮಂಗಳವಾರ ಭೇಟಿ ನೀಡಿ ಮಣ್ಣಿನಿಂದ ತಯಾರಿಸಿದ ವಸ್ತುಗಳನ್ನು ವೀಕ್ಷಿಸಿ ಮಾತನಾಡಿದ ಅವರು ಪ್ಲಾಸ್ಟಿಕ್ ಹಾಗೂ ಗಾಜಿನಿಂದ ತಯಾರಿಸಿದ ಲೋಟ, ತಟ್ಟೆಗಳಲ್ಲಿ ವಿಷಕಾರಿ ರಾಸಾಯನಿಕ ಅಂಶವಿರುತ್ತದೆ. ಈ ಅಂಶವು ನಮಗೆ ಗೊತ್ತಿಲ್ಲದೆ ಊಟದ ಜತೆ ದೇಹ ಸೇರಿ ಆರೋಗ್ಯ ಕೆಡಿಸುತ್ತದೆ. ಪೂರ್ವಜರು ಮಣ್ಣಿನಿಂದ ಮಾಡಿದ ಮಡಿಕೆ, ಕುಡಿಕೆಗಳನ್ನೇ ಪಾತ್ರೆಗಳಾಗಿ ಬಳಸಿ ಆರೋಗ್ಯವಂತರಾಗಿರುತ್ತಿದ್ದರು. ಮಡಿಕೆ, ಕುಡಿಕೆ ಬಳಸುವ ಮೂಲಕ ಕುಂಬಾರಿಕೆ ವೃತ್ತಿಯನ್ನು ಉತ್ತೇಜಿಸಿದಂತೆ ಆಗುತ್ತದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಸುಳ್ಳು, ಮೋಸ, ಭ್ರಷ್ಟಾಚಾರದ ರಾಜಕಾರಣ ಜಾಸ್ತಿಯಾಗಿದೆ ಸಾವಯವ ರಾಜಕಾರಣದ ಚಿಂತನೆಯಡಿ ಬದಲಾವಣೆಗೆ ನಾವು ಎಲ್ಲರೂ ಪ್ರಯತ್ನ ಮಾಡಲಾಗುತ್ತಿದೆ. ಸಕರಾತ್ಮಕ ಆಲೋಚನೆಗಳಿಂದ ರಾಜಕಾರಣವನ್ನು ಕಟ್ಟುವ ಕೆಲಸ ಆಗಬೇಕಿದೆ ಬಹುತೇಕರಲ್ಲಿ ಇವತ್ತಿನ ರಾಜಕಾರಣದ ಬಗ್ಗೆ ಬೇಸರವಿದೆ. ಬದ್ಧತೆಯುಳ್ಳ ರಾಜಕಾರಣದ ಅಗತ್ಯವಿದೆ ಎಂಬ ಮನಸಿದೆ. ಹೃದಯಕ್ಕೆ ಬೇಕಾದ ರಾಜಕಾರಣವನ್ನು ಜನರು ಆಯ್ಕೆ ಮಾಡಿಕೊಳ್ಳಬೇಕಿದ್ದು, ಕೆಟ್ಟದನ್ನು ದೂರ ಮಾಡಬೇಕು ಇದಕ್ಕೆ ಜನರ ಸಹಕಾರ ಮುಖ್ಯವಾಗಿದೆ ಎಂದರು.
ಈ ಸಂದರ್ಭದಲ್ಲಿ ಜೆಡಿಯು ಪಕ್ಷದ ಯುವ ಘಟಕದ ರಾಜ್ಯ ಅಧ್ಯಕ್ಷ ಹಾಗೂ ಕುಂಬಾರ ಸಮುದಾಯದ ಮುಖಂಡ ಡಾ.ಕೆ.ನಾಗರಾಜ್ ಮಾತನಾಡಿ ಇತ್ತೀಚೆಗೆ ಅಲ್ಯೂಮಿನಿಯಂ, ಸ್ಟೀಲ್ ಪಾತ್ರೆಗಳ ಹಾವಳಿಯಿಂದಾಗಿ ವಂಶಪಾರಂಪರ್ಯವಾಗಿ ಕುಲಕಸುಬಾಗಿ ಮಾಡಿಕೊಂಡು ಬಂದಿರುವ ಕುಂಬಾರಿಕೆ ವೃತ್ತಿಗೆ ತೊಡಕುಂಟಾಗುತ್ತಿದೆ. ಮಣ್ಣಿನ ಪಾತ್ರೆಯಲ್ಲಿ ಬೇಯಿಸಿದ ಬಗೆ ಬಗೆಯ ಪದಾರ್ಥಗಳು ಹೆಚ್ಚು ರುಚಿಕರ ಹಾಗೂ ಆರೋಗ್ಯಕ್ಕೂ ಪೂರಕವಾಗಿತ್ತು. ಅಂದಿನ ದಿನಗಳಲ್ಲಿ ಮಣ್ಣಿನಿಂದ ಮಾಡಿದ ಉತ್ಪನ್ನಗಳಿಗೆ ಎಲ್ಲಿಲ್ಲದ ಬೇಡಿಕೆಯಿತ್ತು. ಪ್ರಸ್ತುತ ಬಹುತೇಕ ಜನರು ಅಲ್ಯೂಮಿನಿಯಂ, ಸ್ಟೀಲ್ ಪಾತ್ರೆ ಖರೀದಿಗೆ ಮಾರುಹೋಗುತ್ತಿದ್ದಾರೆ. ಆದರೂ ಕಲ್ಲಂಡೂರು ಗ್ರಾಮದ ಕ್ಲಸ್ಟರ್ ನಲ್ಲಿ ಮಣ್ಣಿನಲ್ಲಿ ಮಡಕೆ ಲೋಟ ಇತ್ಯಾದಿ ತಯಾರಿಸುವ ಕುಂಬಾರ ಸಂಪ್ರದಾಯವನ್ನು ಮುಂದುವರೆಸಿಕೊಂಡು ಹೋಗುತ್ತಾ ಇದ್ದೇವೆ ಎಂದರು.
ಸಮಾಜದಲ್ಲಿ ದಿನದಿಂದ ದಿನಕ್ಕೆ ಕುಂಬಾರ ವೃತ್ತಿ ಮಾಡುವವರ ಸಂಖ್ಯೆ ಕಡಿಮೆಯಾಗುತ್ತಿದ್ದು, ಸಮುದಾಯವರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಸವಲತ್ತು ಬಳಸಿಕೊಂಡು ಸ್ವಾವಲಂಬನೆ ಸಾಧಿಸುವಂತೆ ಆಗಬೇಕು ಮಣ್ಣಿನಿಂದ ತಯಾರಿಸಿದ ವಸ್ತುಗಳಿಗೆ ಮಾರುಕಟ್ಟೆ ವ್ಯವಸ್ಥೆ ಸಹ ಮಾಡಲಾಗುತ್ತದೆ ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ಈ ಸಂದರ್ಭದಲ್ಲಿ ಜೆಡಿಯು ಪಕ್ಷದ ರಾಜ್ಯ ಕಾರ್ಯದರ್ಶಿಗಳಾದ ಶಶಿಕುಮಾರ್ ಗೌಡ, ಸೂರ್ಯಪ್ರಕಾಶ್ ಮಹಡಿ, ಮಹಿಳಾ ಘಟಕದ ರಾಜ್ಯ ಅಧ್ಯಕ್ಷೆ ಎಂ.ಡಿ ಕಲಾವತಿ, ಉಪಾಧ್ಯಕ್ಷೆ ಶಾಂತಕುಮಾರಿ, ರೈತ ಘಟಕದ ಅಧ್ಯಕ್ಷ ಡಿ.ಕೆ ಶ್ರೀನಿವಾಸ್, ಮುಖಂಡರಾದ ಚಂದ್ರಶೇಖರ್, ಪ್ರಭು, ಗಂಗರಾಜು, ಮುಂತಾದವರು ಇದ್ದರು
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…