ಮತದಾನದ ದಿನದಂದು ಕಾರ್ಮಿಕರಿಗೆ ವೇತನ ಸಹಿತ ರಜೆ

ಭಾರತ ಚುನಾವಣಾ ಆಯೋಗವು ಮೇ‌.10ರ ಬುಧವಾರದಂದು ಕರ್ನಾಟಕ ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆಯ ಪ್ರಕ್ರಿಯೆಯಲ್ಲಿ ಮತದಾನ ನಿಗದಿಪಡಿಸಿದೆ.

ಮೇ 10 ರಂದು ರಾಜ್ಯಾದ್ಯಾಂತ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ 1951ರ ಪ್ರಜಾ ಪ್ರತಿನಿಧಿ ಕಾಯ್ದೆ, ಸೆಕ್ಷನ್ 135 (ಬಿ) ರಡಿ ಹಾಗೂ ಕೈಗಾರಿಕಾ ಸಂಸ್ಥೆಗಳ (ರಾಷ್ಟ್ರೀಯ ಮತ್ತು ಹಬ್ಬದ ರಜೆಗಳು) ಕಾಯ್ದೆ 1963 ಕಲಂ 3(ಎ)ರನ್ವಯ ಅರ್ಹ ಮತದಾನರಿಗೆ ವೇತನ ಸಹಿತ ರಜೆ ಘೋಷಿಸಿ ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಮಾಲೀಕರು/ನಿಯೋಜಕರು ಅನುವು ಮಾಡಿ ಕೊಡಬೇಕಾಗಿರುತ್ತದೆ.

ಆದ್ದರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ಚುನಾವಣೆ ನಡೆಯುವ ಕ್ಷೇತ್ರಗಳ ವ್ಯಾಪ್ತಿಯ ಎಲ್ಲಾ ಕಾರ್ಖಾನೆಗಳು, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು ಮೇ 10 ರಂದು ಕಾಯ್ದೆಯನ್ವಯ ಅರ್ಹ ಕಾರ್ಮಿಕರು ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ನೀಡುವುದು.

ತಪ್ಪಿದಲ್ಲಿ, ಸಂಬಂಧಪಟ್ಟ ಸಂಸ್ಥೆ/ನಿಯೋಜಕರ ವಿರುದ್ದ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ಸೂಚಿಸಿದ್ದಾರೆ.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

4 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

8 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

9 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

10 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

12 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

15 hours ago