ಮತದಾನದ ದಿನ ಕಾರ್ಮಿಕರಿಗೆ ವೇತನ ಸಹಿತ ರಜೆ: ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ ಆದೇಶ

ಭಾರತ ಚುನಾವಣಾ ಆಯೋಗವು 2024ರ ಲೋಕಸಭಾ ಚುನಾವಣೆಯನ್ನು ಮಾರ್ಚ್ 16 ರಂದು ಫೋಷಿಸಿದ್ದು, ಅದರಂತೆ, ಕರ್ನಾಟಕ ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಿಗದಿಯಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಏಪ್ರಿಲ್ 26(ಶುಕ್ರವಾರ) ರಂದು ಮೊದಲನೇ ಹಂತದ ಲೋಕಸಭಾ ಚುನಾವಣೆ ನಿಗದಿಯಾಗಿರುತ್ತದೆ.

ಈ ದಿನಾಂಕದಂದು ಮತದಾನ ನಡೆಯಲಿರುವ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನೋಂದಾಯಿತರಾದ ಮತದಾರರಾಗಿರುವ ಎಲ್ಲಾ ಅರ್ಹ ಕಾರ್ಮಿಕರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಸಂಬಂಧಪಟ್ಟ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳು 1963ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ (ರಾಷ್ಟ್ರೀಯ ಹಾಗೂ ಹಬ್ಬದ ರಜಾದಿನಗಳು) ಕಾಯ್ದೆಯ ಕಲಂ-03ಎ ಪ್ರಕಾರ ಮತ ಚಲಾಯಿಸಲು ಅವಕಾಶ ಮಾಡಿ ಕೊಡಬೇಕಾಗಿರುತ್ತದೆ, ಆದ್ದರಿಂದ ಮತದಾನ ನಡೆಯಲಿರುವ ಕ್ಷೇತ್ರಗಳಲ್ಲಿ ಅರ್ಹರಿರುವ ಎಲ್ಲಾ ಕಾರ್ಮಿಕ ಮತದಾರರಿಗೆ ಏಪ್ರಿಲ್ 26 ರಂದು ವೇತನ ಸಹಿತ ರಜೆ ನೀಡಿ, ಎಲ್ಲಾ ಅರ್ಹ ಕಾರ್ಮಿಕರು ಸಂವಿಧಾನಾತ್ಮಕ/ಶಾಸನಾತ್ಮಕ ಹಕ್ಕಾದ ಮತವನ್ನು ಚಲಾಯಿಸಲು ಅನುವು ಮಾಡಿಕೊಡಲು ಸೂಚಿಸಿದೆ.

ಈ ವಿಷಯದಲ್ಲಿ ಅರ್ಹ ಯಾವುದೇ ಕಾರ್ಮಿಕರಿಗೆ ಸಂವಿಧಾನಾತ್ಮಕ/ಶಾಸನಾತ್ಮಕ ಹಕ್ಕಾದ ಮತವನ್ನು ಚಲಾಯಿಸಲು ರಜೆ ನೀಡದೆ ಹಾಗೂ ಮತದಾನಕ್ಕೆ ಅವಕಾಶ ಮಾಡಿಕೊಡದಿದ್ದಲ್ಲಿ ಅಂತಹ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳ ವಿರುದ್ಧ 1963ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ (ರಾಷ್ಟ್ರೀಯ ಹಾಗೂ ಹಬ್ಬದ ರಜಾ ದಿನಗಳು) ಕಾಯ್ದೆಯ ಕಲಂ-03ಎ ಹಾಗೂ 1951ರ ಪ್ರಜಾಪ್ರತಿನಿಧಿ ಕಾಯ್ದೆಯ ಕಲಂ135(ಬಿ) ಉಲ್ಲಂಘನೆಗಳಿಗಾಗಿ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು.

ಆದ್ದರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ಚುನಾವಣೆ ನಡೆಯುವ ಕ್ಷೇತ್ರಗಳ ವ್ಯಾಪ್ತಿಯ ಎಲ್ಲಾ ಕಾರ್ಖಾನೆಗಳು, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು ಏಪ್ರೀಲ್ 26 ರಂದು ಕಾಯ್ದೆಯನ್ವಯ ಅರ್ಹ ಕಾರ್ಮಿಕರು ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ಪೋಷಿಸಬೇಕು ತಪ್ಪಿದಲ್ಲಿ, ಸಂಬಂಧಪಟ್ಟ ಸಂಸ್ಥೆ/ನಿಯೋಜಕರ ವಿರುದ್ದ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್ ಶಿವಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

11 minutes ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

1 hour ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

13 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

13 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

15 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

24 hours ago