ಮುಂಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಜಾಗೃತಿ ಚಟುವಟಿಕೆಗಳನ್ನು ಚುರುಕುಗೊಳಿಸಬೇಕು. ಸಾರ್ವಜನಿಕ ಮತದಾರರಿಗೆ ಮತಚಲಾವಣೆಯ ಕುರಿತ ಮಾಹಿತಿ ನೀಡಲು ಎಲ್ಲಾ ಮತಗಟ್ಟೆಗಳಲ್ಲಿ ಇವಿಎಂ ಪ್ರಾತ್ಯಕ್ಷಿಕೆ ನಡೆಸಿ ಅರಿವು ಮೂಡಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಆರ್.ಲತಾ ಹೇಳಿದರು.
ಬೀರಸಂದ್ರದ ಜಿಲ್ಲಾಡಳಿತ ಭವನದಲ್ಲಿ ಇಂದು ಜಿಲ್ಲೆಯ ನೋಡಲ್ ಅಧಿಕಾರಿಗಳು,ಕಂದಾಯ ನಿರೀಕ್ಷಕರು,ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ ಏರ್ಪಡಿಸಿದ್ದ ಇವಿಎಂ ಹಾಗೂ ವಿವಿಪ್ಯಾಟ್ ಬಳಕೆ ಕುರಿತ ತರಬೇತಿ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು,
ಜಿಲ್ಲೆಯಲ್ಲಿ 65 ಇವಿಎಂ ಯಂತ್ರಗಳನ್ನು ಪ್ರಾತ್ಯಕ್ಷಿಕೆಗೆ ಮೀಸಲಿಡಲಾಗಿದೆ.ಜಿಲ್ಲೆಯಾದ್ಯಂತ ಎಲ್ಲಾ ನಗರ ಹಾಗೂ ಗ್ರಾಮೀಣ ಪ್ರದೇಶಗಳ ಮತದಾರರ ಬಳಿ ಅವುಗಳನ್ನು ಆಯೋಗದ ಮಾರ್ಗದರ್ಶಿ ಸೂತ್ರಗಳ ಪ್ರಕಾರ ಸುರಕ್ಷಿತವಾಗಿ ತೆಗೆದುಕೊಂಡು ಹೋಗಿ , ಮಾಹಿತಿ ನೀಡಬೇಕು. ತರಬೇತಿ ನೀಡುವ ಅಧಿಕಾರಿ, ಸಿಬ್ಬಂದಿ ಸರಿಯಾದ ಮಾಹಿತಿಯೊಂದಿಗೆ ಜನರ ಬಳಿಗೆ ಹೋಗಬೇಕು.ಇವಿಎಂ ಹಾಗೂ ವಿವಿಪ್ಯಾಟ್ ಮತಯಂತ್ರಗಳ ಕಾರ್ಯವಿಧಾನ,ಚಲಾವಣೆಗೊಂಡ ಮತದ ಕುರಿತು ವಿವಿಪ್ಯಾಟ್ ಯಂತ್ರದಲ್ಲಿ ಖಚಿತಪಡಿಸಿಕೊಳ್ಳುವ ವಿಧಾನಗಳು ಮತ್ತಿತರ ಮಾಹಿತಿಗಳನ್ನು ಪ್ರಾತ್ಯಕ್ಷಿಕೆ ಮೂಲಕ ನೀಡಬೇಕು.ಸ್ವೀಪ್ ಚಟುವಟಿಕೆಗಳನ್ನು ವಿಭಿನ್ನವಾಗಿ ಕೈಗೊಂಡು ಮತದಾನದ ಮಹತ್ವ ಮನವರಿಕೆ ಮಾಡಿಕೊಡಬೇಕು ಎಂದರು.
ಜಿಪಂ ಉಪಕಾರ್ಯದರ್ಶಿ ಡಾ.ನಾಗರಾಜ ಮಾತನಾಡಿ,ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಂದಾಯ ನಿರೀಕ್ಷಕರು ಜಂಟಿಯಾಗಿ ಜಿಲ್ಲೆಯಾದ್ಯಂತ ಇವಿಎಂ ಹಾಗೂ ವಿವಿಪ್ಯಾಟ್‌ಗಳ ಬಳಕೆ ಕುರಿತು ಜಾಗೃತಿ ಮೂಡಿಸಬೇಕು ಎಂದರು.
ಉಪವಿಭಾಗಾಧಿಕಾರಿ ತೇಜಸ್ ಕುಮಾರ ಮಾತನಾಡಿ, ಜಿಲ್ಲೆಯಾದ್ಯಂತ ಒಟ್ಟು 1337 ಮತಗಟ್ಟೆಗಳು ಸ್ಥಾಪನೆಯಾಗಲಿವೆ.ಭಾರತ ಚುನಾವಣಾ ಆಯೋಗವು ಮತದಾರರಲ್ಲಿ ವ್ಯಾಪಕ ಅರಿವು ಮೂಡಿಸಿ ಮತದಾನದ ಪ್ರಮಾಣ ಹೆಚ್ಚಿಸಲು ಸೂಚಿಸಿದೆ.ಈ ನಿಟ್ಟಿನಲ್ಲಿ ಜಿಲ್ಲೆಯ ಅಧಿಕಾರಿಗಳು ,ಸಿಬ್ಬಂದಿ ಜನರ ಬಳಿಗೆ ತೆರಳಿ ಇವಿಎಂ, ವಿವಿಪ್ಯಾಟ್ ಬಳಕೆಗಳ ಕುರಿತು ಸಮರ್ಪಕ ಮಾಹಿತಿ ನೀಡಬೇಕು ಎಂದರು.
ಭೂದಾಖಲೆಗಳ ಉಪನಿರ್ದೇಶಕ ಹನುಮೇಗೌಡ ಮಾತನಾಡಿ,ಜನರಲ್ಲಿ ಇವಿಎಂ,ವಿವಿಪ್ಯಾಟ್ ಮತಯಂತ್ರಗಳ ಬಳಕೆ ಕುರಿತು ಆತ್ಮವಿಶ್ವಾಸ ಮೂಡಿಸಬೇಕು.ಆಯೋಗದ ನಿರ್ದೇಶನಗಳ ಅನುಸಾರವಾಗಿ ಈ ತಂತ್ರಗಳನ್ನು ತೆಗೆದುಕೊಂಡು ಹೋಗಿ,ಸುರಕ್ಷತೆಗೆ ಆದ್ಯತೆ ನೀಡಬೇಕು.ಯಾವುದೇ ಲೋಪಗಳಿಗೆ ಅವಕಾಶವಾಗದಂತೆ ಎಚ್ಚರವಹಿಸಬೇಕು ಎಂದರು.
ತಹಸೀಲ್ದಾರ ಶಿವರಾಜ,ರಾಜ್ಯ ಮಟ್ಟದ ತರಬೇತಿದಾರ ಅಮೀರ್‌ಪಾಷಾ, ಉಪ ಕೃಷಿ ನಿರ್ದೇಶಕಿ ವಿನುತಾ, ಮತ್ತಿತರರು ಉಪಸ್ಥಿತರಿದ್ದರು.
"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…
Cheap Emotional Support Animal Letter: Your Guide Understanding Cheap Emotional Support Animal Letters In recent…
Understanding ESA Letters for Mental Health Support The Role of ESA Letters in Mental Health…
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…
ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…