ಮತದಾನ ಜಾಗೃತಿ ಚಟುವಟಿಕೆಗಳನ್ನು ಚುರುಕುಗೊಳಿಸಿ-ಜಿಲ್ಲಾಧಿಕಾರಿ ಆರ್.ಲತಾ

ಮುಂಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಜಾಗೃತಿ ಚಟುವಟಿಕೆಗಳನ್ನು ಚುರುಕುಗೊಳಿಸಬೇಕು. ಸಾರ್ವಜನಿಕ ಮತದಾರರಿಗೆ ಮತಚಲಾವಣೆಯ ಕುರಿತ ಮಾಹಿತಿ ನೀಡಲು ಎಲ್ಲಾ ಮತಗಟ್ಟೆಗಳಲ್ಲಿ ಇವಿಎಂ ಪ್ರಾತ್ಯಕ್ಷಿಕೆ ನಡೆಸಿ ಅರಿವು ಮೂಡಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಆರ್.ಲತಾ ಹೇಳಿದರು.

ಬೀರಸಂದ್ರದ ಜಿಲ್ಲಾಡಳಿತ ಭವನದಲ್ಲಿ ಇಂದು ಜಿಲ್ಲೆಯ ನೋಡಲ್ ಅಧಿಕಾರಿಗಳು,ಕಂದಾಯ ನಿರೀಕ್ಷಕರು,ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ ಏರ್ಪಡಿಸಿದ್ದ ಇವಿಎಂ ಹಾಗೂ ವಿವಿಪ್ಯಾಟ್ ಬಳಕೆ ಕುರಿತ ತರಬೇತಿ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು,

ಜಿಲ್ಲೆಯಲ್ಲಿ 65 ಇವಿಎಂ ಯಂತ್ರಗಳನ್ನು ಪ್ರಾತ್ಯಕ್ಷಿಕೆಗೆ ಮೀಸಲಿಡಲಾಗಿದೆ.ಜಿಲ್ಲೆಯಾದ್ಯಂತ ಎಲ್ಲಾ ನಗರ ಹಾಗೂ ಗ್ರಾಮೀಣ ಪ್ರದೇಶಗಳ ಮತದಾರರ ಬಳಿ ಅವುಗಳನ್ನು ಆಯೋಗದ ಮಾರ್ಗದರ್ಶಿ ಸೂತ್ರಗಳ ಪ್ರಕಾರ ಸುರಕ್ಷಿತವಾಗಿ ತೆಗೆದುಕೊಂಡು ಹೋಗಿ , ಮಾಹಿತಿ ನೀಡಬೇಕು. ತರಬೇತಿ ನೀಡುವ ಅಧಿಕಾರಿ, ಸಿಬ್ಬಂದಿ ಸರಿಯಾದ ಮಾಹಿತಿಯೊಂದಿಗೆ ಜನರ ಬಳಿಗೆ ಹೋಗಬೇಕು.ಇವಿಎಂ ಹಾಗೂ ವಿವಿಪ್ಯಾಟ್ ಮತಯಂತ್ರಗಳ ಕಾರ್ಯವಿಧಾನ,ಚಲಾವಣೆಗೊಂಡ ಮತದ ಕುರಿತು ವಿವಿಪ್ಯಾಟ್ ಯಂತ್ರದಲ್ಲಿ ಖಚಿತಪಡಿಸಿಕೊಳ್ಳುವ ವಿಧಾನಗಳು ಮತ್ತಿತರ ಮಾಹಿತಿಗಳನ್ನು ಪ್ರಾತ್ಯಕ್ಷಿಕೆ ಮೂಲಕ ನೀಡಬೇಕು.ಸ್ವೀಪ್ ಚಟುವಟಿಕೆಗಳನ್ನು ವಿಭಿನ್ನವಾಗಿ ಕೈಗೊಂಡು ಮತದಾನದ ಮಹತ್ವ ಮನವರಿಕೆ ಮಾಡಿಕೊಡಬೇಕು ಎಂದರು.

ಜಿಪಂ ಉಪಕಾರ್ಯದರ್ಶಿ ‌ಡಾ‌.ನಾಗರಾಜ ಮಾತನಾಡಿ,ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಂದಾಯ ನಿರೀಕ್ಷಕರು ಜಂಟಿಯಾಗಿ ಜಿಲ್ಲೆಯಾದ್ಯಂತ ಇವಿಎಂ ಹಾಗೂ ವಿವಿಪ್ಯಾಟ್‌ಗಳ ಬಳಕೆ ಕುರಿತು ಜಾಗೃತಿ ಮೂಡಿಸಬೇಕು ಎಂದರು.

ಉಪವಿಭಾಗಾಧಿಕಾರಿ ತೇಜಸ್ ಕುಮಾರ ಮಾತನಾಡಿ, ಜಿಲ್ಲೆಯಾದ್ಯಂತ ಒಟ್ಟು 1337 ಮತಗಟ್ಟೆಗಳು ಸ್ಥಾಪನೆಯಾಗಲಿವೆ.ಭಾರತ ಚುನಾವಣಾ ಆಯೋಗವು ಮತದಾರರಲ್ಲಿ ವ್ಯಾಪಕ ಅರಿವು ಮೂಡಿಸಿ ಮತದಾನದ ಪ್ರಮಾಣ ಹೆಚ್ಚಿಸಲು ಸೂಚಿಸಿದೆ.ಈ ನಿಟ್ಟಿನಲ್ಲಿ ಜಿಲ್ಲೆಯ ಅಧಿಕಾರಿಗಳು ,ಸಿಬ್ಬಂದಿ ಜನರ ಬಳಿಗೆ ತೆರಳಿ ಇವಿಎಂ, ವಿವಿಪ್ಯಾಟ್ ಬಳಕೆಗಳ ಕುರಿತು ಸಮರ್ಪಕ ಮಾಹಿತಿ ನೀಡಬೇಕು ಎಂದರು‌.

ಭೂದಾಖಲೆಗಳ ಉಪನಿರ್ದೇಶಕ ಹನುಮೇಗೌಡ ಮಾತನಾಡಿ,ಜನರಲ್ಲಿ ಇವಿಎಂ,ವಿವಿಪ್ಯಾಟ್ ಮತಯಂತ್ರಗಳ ಬಳಕೆ ಕುರಿತು ಆತ್ಮವಿಶ್ವಾಸ ಮೂಡಿಸಬೇಕು.ಆಯೋಗದ ನಿರ್ದೇಶನಗಳ ಅನುಸಾರವಾಗಿ ಈ ತಂತ್ರಗಳನ್ನು ತೆಗೆದುಕೊಂಡು ಹೋಗಿ,ಸುರಕ್ಷತೆಗೆ ಆದ್ಯತೆ ನೀಡಬೇಕು.ಯಾವುದೇ ಲೋಪಗಳಿಗೆ ಅವಕಾಶವಾಗದಂತೆ ಎಚ್ಚರವಹಿಸಬೇಕು ಎಂದರು.

ತಹಸೀಲ್ದಾರ ಶಿವರಾಜ,ರಾಜ್ಯ ಮಟ್ಟದ ತರಬೇತಿದಾರ ಅಮೀರ್‌ಪಾಷಾ, ಉಪ ಕೃಷಿ ನಿರ್ದೇಶಕಿ ವಿನುತಾ, ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

2 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

2 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

4 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

9 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

24 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

1 day ago