ಬೆಂಗಳೂರು ಗ್ರಾಮಾಂತರ ಜಿಲ್ಲಾ ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಎಸ್.ಎಸ್.ಘಾಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ವಿನೂತನವಾಗಿ ಪಂಜಿನ ಮೆರವಣಿಗೆ ನಡೆಸಲಾಯಿತು.
ತಪ್ಪದೆ ಮತದಾನ ಮಾಡುವಂತೆ, ಮತದಾನ ಪ್ರತಿಜ್ಞೆ ವಿಧಿ ಸ್ವೀಕರಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಪಂಜಿನ ಮೆರವಣಿಗೆ ನಡೆಸಲಾಯಿತು.
ಬೃಹತ್ ಪಂಜಿನ ಮೆರವಣಿಗೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರವಿ.ಎಂ.ತಿರ್ಲಾಪುರ, ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ತೇಜಸ್‌ಕುಮಾರ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ನಾಗರಾಜ, ದೊಡ್ಡಬಳ್ಳಾಪುರ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಶ್ರೀನಾಥ್‌ಗೌಡ, ಅಧಿಕಾರಿಗಳು, ಸಿಬ್ಬಂದಿ ಸೇರಿದಂತೆ ಸಾರ್ವಜನಿಕರು ಭಾಗವಹಿಸಿದ್ದರು.