ಮತದಾನ ಪೂರ್ವ ಮಾರ್ಗಸೂಚಿಗಳನ್ನು ಪಾಲಿಸುವಂತೆ ಮಾಧ್ಯಮಗಳಿಗೆ ಜಿಲ್ಲಾಧಿಕಾರಿ ಆರ್.ಲತಾ ನಿರ್ದೇಶನ

2023ರ ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ 2023ರ ಮೇ, 10 ರಂದು ಮತದಾನ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಚುನಾವಣೆಯನ್ನು ನಿಷ್ಪಕ್ಷಪಾತ ಹಾಗೂ ಪಾರದರ್ಶಕತೆಯಿಂದ ನಡೆಸಲು ಮತದಾನ ಮುಕ್ತಾಯ ದಿನದ, ಹಿಂದಿನ ಸಮಯ 48 ಗಂಟೆಗಳ ಅವಧಿಯಲ್ಲಿ ಚುನಾವಣೆಗೆ ಸಂಬಂಧಿಸಿದ ಯಾವುದೇ ಜಾಹೀರಾತು, ವಿಷಯ, ಚರ್ಚೆ ಕುರಿತಾದವುಗಳನ್ನು ವಿದ್ಯುನ್ಮಾನ ಮಾಧ್ಯಮಗಳಲ್ಲಿ ಪ್ರಸಾರ ಮಾಡುವಂತಿಲ್ಲ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ತಿಳಿಸಿದ್ದಾರೆ.

ಚುನಾವಣಾ ಜಾಹೀರಾತಿಗೆ ಪೂರ್ವಾನುಮತಿ ಕಡ್ಡಾಯ

2023ರ ಮೇ, 09 ಹಾಗೂ ಮೇ, 10 ರಂದು ಅಭ್ಯರ್ಥಿಗಳು ಅಥವಾ ಪಕ್ಷಗಳು ಅಥವಾ ಇನ್ನಿತರೆ ಸಂಸ್ಥೆಗಳು ಅಥವಾ ಯಾವುದೇ ವ್ಯಕ್ತಿಯು ದಿನಪತ್ರಿಕೆಗಳಲ್ಲಿ ಯಾವುದೇ ರೀತಿಯ ಚುನಾವಣಾ ಜಾಹೀರಾತು ಪ್ರಕಟಿಸಬೇಕಾದರೆ ಸದರಿ ಜಾಹೀರಾತಿಗೆ ಜಿಲ್ಲಾ ಮಟ್ಟದ ಮಾಧ್ಯಮ ಕಣ್ಗಾವಲು ಮತ್ತು ಮಾಧ್ಯಮ ಪ್ರಮಾಣೀಕರಣ ಸಮಿತಿ(ಎಂಸಿಎಂಸಿ)ಯಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ.

ಮುದ್ರಣ ಮಾಧ್ಯಮಗಳಲ್ಲಿ ಮೇ 09 ಹಾಗೂ ಮೇ 10 ರಂದು ಚುನಾವಣಾ ಜಾಹೀರಾತು ಪ್ರಕಟಿಸಲು ಬಯಸುವ ಅಭ್ಯರ್ಥಿಗಳು, ಸದರಿ ಜಾಹೀರಾತಿನ ಎರಡು ಸ್ವಯಂ ದೃಢೀಕೃತ ಪ್ರತಿಗಳೊಂದಿಗೆ ನಿಗದಿತ ಅರ್ಜಿ ನಮೂನೆಯಲ್ಲಿ ಮೇ 07 ರೊಳಗೆ ಜಿಲ್ಲಾ ಮಟ್ಟದ ಮಾಧ್ಯಮ ಕಣ್ಗಾವಲು ಮತ್ತು ಮಾಧ್ಯಮ ಪ್ರಮಾಣೀಕರಣ ಸಮಿತಿ(ಎಂಸಿಎಂಸಿ)ಗೆ ಅರ್ಜಿ ಸಲ್ಲಿಸಬೇಕು.

ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಜಾಹೀರಾತುಗಳನ್ನು ಪ್ರಕಟಿಸಲು ಜಿಲ್ಲಾಮಟ್ಟದ ಎಂಸಿಎಂಸಿ ಕಡೆಯಿಂದ ಪೂರ್ವಾನುಮತಿ ಪಡೆಯದ ಅಭ್ಯರ್ಥಿಗಳ ಜಾಹೀರಾತುಗಳನ್ನು ಸ್ಥಳೀಯ, ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರಮಟ್ಟದ ದಿನಪತ್ರಿಕೆಗಳು ಪ್ರಕಟಿಸಬಾರದು ಎಂದು ಚುನಾವಣಾ ಆಯೋಗ ತಿಳಿಸಿದೆ ಎಂದು ಅವರು ವಿವರಿಸಿದ್ದಾರೆ.

ಮೇ 09 ಹಾಗೂ ಮೇ 10 ರಂದು ಮುದ್ರಣ ಮಾಧ್ಯಮದಲ್ಲಿ ಪ್ರಕಟಿಸಲು ಅಗತ್ಯವಿರುವ ನಿಗದಿತ(ಅನುಬಂಧ-ಸಿ) ನಮೂನೆಯ ಅರ್ಜಿಗಳನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ನಾಲ್ಕು ವಿಧಾನಸಭಾ ಕ್ಷೇತ್ರಗಳ ಚುನಾವಣಾ ಮಾಧ್ಯಮ ಕಣ್ಗಾವಲು ಕೇಂದ್ರ, ಕೊಠಡಿ ಸಂಖ್ಯೆ: 117, ಒಂದನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಇಲ್ಲಿ ಪಡೆಯಬಹುದು.

ವಿದ್ಯುನ್ಮಾನ ಮಾಧ್ಯಮಗಳಿಗೆ ಮಾರ್ಗಸೂಚಿ

ಮತದಾನಕ್ಕೆ ನಿಗದಿಪಡಿಸಿರುವ ಅವಧಿ ಕೊನೆಗೊಳ್ಳುವ 48 ಗಂಟೆಗಳ ಮುಂಚೆ ವಿದ್ಯುನ್ಮಾನ ಮಾಧ್ಯಮಗಳಾದ ಟಿವಿ, ಸಿನಿಮಾಟೋಗ್ರಾಫ್, ದೃಶ್ಯ-ಶ್ರವಣ ಮುಂತಾದವುಗಳಲ್ಲಿ ಚುನಾವಣಾ ಸಂಬಂಧಿ ವಿಷಯಯಗಳ ಪ್ರಸಾರವನ್ನು ಪ್ರಜಾ ಪ್ರತಿನಿಧಿ ಕಾಯ್ದೆ-1951 ರ ಕಲಂ 126 ರ ಪ್ರಕಾರ ನಿಷೇಧಿಸಲಾಗಿದೆ. ಚುನಾವಣಾ ಸಂಬಂಧಿ ವಿಷಯ ಎಂದರೆ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಅಥವಾ ಪರಿಣಾಮ ಬೀರುವಂತಹ ವಿಷಯಗಳಾಗಿರುತ್ತವೆ.

ಪ್ರಜಾ ಪ್ರತಿನಿಧಿ ಕಾಯ್ದೆಯನ್ನು ಉಲ್ಲಂಘಿಸುವವರಿಗೆ ಎರಡು ವರ್ಷಗಳವರೆಗೆ ವಿಸ್ತರಿಸಬಹುದಾದ ಕಾರಾಗೃಹ ಶಿಕ್ಷೆ ಅಥವಾ ದಂಡ ಅಥವಾ ದಂಡ ಮತ್ತು ಶಿಕ್ಷೆ ಎರಡನ್ನೂ ವಿಧಿಸಬಹುದಾಗಿದೆ.

ಟಿವಿ/ರೇಡಿಯೋ/ಕೇಬಲ್ ನೆಟ್‍ವರ್ಕ್ ಮತ್ತು ಎಲ್ಲಾ ರೀತಿಯ ಡಿಜಿಟಲ್ ಮಾಧ್ಯಮಗಳು ಮತದಾನ ಪೂರ್ವ 48 ಗಂಟೆಗಳ ಅವಧಿಯಲ್ಲಿ ಚುನಾವಣೆ ಸಂಬಂಧಿ ವಿಷಯಗಳನ್ನು ಪ್ರಸಾರ ಮಾಡದಂತೆ ಕ್ರಮವಹಿಸಬೇಕು.

ಕಾರ್ಯಕ್ರಮದಲ್ಲಿ ಭಾಗವಹಿಸುವವರು (ಪ್ಯಾನಲಿಸ್ಟ್) ಯಾವುದೇ ಪಕ್ಷ ಅಥವಾ ಅಭ್ಯರ್ಥಿಗಳ ಪರ ಅಥವಾ ವಿರೋಧವಾಗಿರುವ ಅಭಿಪ್ರಾಯಗಳು/ಮನವಿಗಳು ಮತ್ತು ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವಂತಹ ವಿಷಯಗಳನ್ನು ಕೂಡ ಪ್ರಸಾರ ಮಾಡಕೂಡದು. ನಿಗದಿತ 48 ಗಂಟೆಗಳ ಅವಧಿಯಲ್ಲಿ ಓಪೀನಿಯನ್ ಪೋಲ್ ಫಲಿತಾಂಶ ಪ್ರಕಟಿಸುವುದು, ಚರ್ಚೆ ಅಥವಾ ವಿಶ್ಲೇಷಣೆ ಏರ್ಪಡಿಸುವುದು, ಅದೇ ರೀತಿ ಚುನಾವಣೋತ್ತರ ಸಮೀಕ್ಷೆಗಳನ್ನು ಪ್ರಸಾರ ಮಾಡುವುದು ಕೂಡ ಪ್ರಜಾಪ್ರತಿನಿಧಿ ಕಾಯ್ದೆ-1951 ರ ಕಲಂ 126 ರ ಅಡಿಯಲ್ಲಿ ನಿಷೇಧಿಸಲಾಗಿರುತ್ತದೆ.

ಕರ್ನಾಟಕ ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023ರ ಅಂಗವಾಗಿ 2023ರ ಮಾರ್ಚ್ 29 ರಿಂದ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ಮೇ 10 ರಂದು ಮತದಾನ ನಡೆಯಲಿದೆ. ಆದ್ದರಿಂದ ಎಲ್ಲಾ ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಮಾಧ್ಯಮಗಳು ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಪಾಲಿಸಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ತಿಳಿಸಿದ್ದಾರೆ.

Ramesh Babu

Journalist

Recent Posts

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

4 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

5 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

1 day ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

1 day ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

1 day ago