ನಗರಸಭೆ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಒಳಚರಂಡಿ ನೀರು, ಕೈಗಾರಿಕಾ ಪ್ರದೇಶದ ಕಾರ್ಖಾನೆಗಳ ರಾಸಾಯನಿಕ ಯುಕ್ತ ತ್ಯಾಜ್ಯ ನೀರು ಸೇರಿದಂತೆ ಇತರೆ ತ್ಯಾಜ್ಯ ನೇರವಾಗಿ ಅರ್ಕಾವತಿ ನದಿ ಪಾತ್ರದ ಕೆರೆಗಳ ಒಡಲು ಸೇರಿ ಸಂಪೂರ್ಣ ಕಲುಷಿತಗೊಂಡಿವೆ.
ಈ ಕೆರೆಗಳ ನೀರನ್ನು ಬಳಿಸಿದ ಜನ ರೋಗಪೀಡಿತರಾಗುತ್ತಿದ್ದಾರೆ. ಪ್ರಾಣಿ ಪಕ್ಷಿಗಳು, ಜಲಚರಗಳು ಸಾವನ್ನಪ್ಪುತ್ತಿವೆ. ಆದ್ದರಿಂದ ಕೆರೆ ಸಂರಕ್ಷಣೆಗೆ, ಕೆರೆ ಶುದ್ಧೀಕರಣಕ್ಕೆ ಈಗಾಗಲೇ ಹಲವು ಮನವಿ, ಹೋರಾಟ, ಪ್ರತಿಭಟನೆ ಸೇರಿದಂತೆ ನಾನಾ ಪ್ರಯತ್ನ ಮಾಡಿದರೂ ಸಮಸ್ಯೆ ಬಗೆಹರಿಯಲಿಲ್ಲ. ಆದರೆ ಪಟ್ಟು ಬಿಡದೇ ಕೆರೆ ಶುದ್ದೀಕರಣ, ಸಂರಕ್ಷಣೆಗೆ ಹೋರಾಟ ಮುಂದುವರಿಸಿದ ಕೆರೆ ಹೋರಾಟ ಸಮಿತಿ ಮುಖಂಡರು, ಗ್ರಾಮಸ್ಥರು.
ಕೆರೆ ಉಳಿವಿಗಾಗಿ 2023ರ ಸಾರ್ವತ್ರಿಕ ಚುನಾವಣೆ ಬಹಿಷ್ಕರಿಸಲು ತೀರ್ಮಾನಿಸಿರುವ ಗ್ರಾಮಸ್ಥರು, ಈ ಹಿನ್ನೆಲೆ ಈಗಾಗಲೇ ಮತದಾನ ಬಹಿಷ್ಕಾರಕ್ಕೆ ಒಪ್ಪಿ ಸಹಿ ಅಕ್ಕಪಕ್ಕದ ಊರಿನ ಗ್ರಾಮಸ್ಥರು ಸಹಿ ಸಂಗ್ರಹ ಕೂಡ ಮಾಡಲಾಗಿದೆ. ಈ ಸಹಿ ಸಂಗ್ರಹ ಪತ್ರವನ್ನು ಚುನಾವಣಾಧಿಕಾರಿಗೆ ತಲುಪಿಸಿದ ಕೆರೆ ಹೋರಾಟ ಸಮಿತಿ ಸದಸ್ಯರು.
ದೊಡ್ಡ ತುಮಕೂರು ಗ್ರಾಮ ಪಂಚಾಯಿತಿ ಮತ್ತು ಮಜುರಾಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಹಳ್ಳಿಗಳಲ್ಲಿ ಸದ್ಯ ಕುಡಿಯಲು ನೀರು ಇಲ್ಲದೆ ಪರಿತಪಿಸುತ್ತಿರುವ ಗ್ರಾಮಸ್ಥರು, ಇದನ್ನು ಚುನಾವಣಾಧಿಕಾರಿ ಗಮನಕ್ಕೆ ತಂದ ಕೆರೆ ಹೋರಾಟ ಸಮಿತಿ ಸದಸ್ಯರು. ಎಲ್ಲಾ ಸಮಸ್ಯೆಗಳನ್ನು ಆಲಿಸಿ ತಾತ್ಕಾಲಿಕವಾಗಿ ಜಕ್ಕಲಮಡಗು ಜಲಾಶಯದಿಂದ ಶುದ್ಧೀಕರಣದ ನೀರನ್ನು ನೀಡುವುದಾಗಿ ಹಾಗೂ ಎಲ್ಲಾ ಹಳ್ಳಿಗಳಲ್ಲಿ ಆರೋಗ್ಯ ಶಿಬಿರ ಏರ್ಪಡಿಸಿ ತಪಾಸಣೆ ಮಾಡಲಾಗುವುದು ಎಂದು ಭರವಸೆ ನೀಡಿದ ಚುನಾವಣಾಧಿಕಾರಿ.
ಈ ಭರವಸೆಗೆ ಒಪ್ಪಿ ಚುನಾವಣಾ ಬಹಿಷ್ಕಾರದ ತೀರ್ಮಾನ ಸದ್ಯ ಸ್ಥಗಿತಗೊಳಿಸಿದ ಹೋರಾಟ ಸಮಿತಿ, ಇನ್ನೇರೆಡು ದಿನಗಳಲ್ಲಿ ಗ್ರಾಮಗಳಿಗೆ ವೈದ್ಯರು, ಕುಡಿಯುವ ನೀರು ಬರದೇ ಹೋದ ಪಕ್ಷದಲ್ಲಿ ಮತ್ತೆ ಮತದಾನ ಬಹಿಷ್ಕಾರ ತೀರ್ಮಾನ ಮುನ್ನೆಲೆಗೆ ತರಲಾಗುವುದು ಎಂದು ಎಚ್ಚರಿಸಿದ ಹೋರಾಟ ಸಮಿತಿ ಮುಖಂಡರು.
ಈ ವೇಳೆ ಕೆರೆ ಸಂರಕ್ಷಣಾ ವೇದಿಕೆಯ ಮುಖಂಡರು ಸೇರಿದಂತೆ ಇತರರು ಉಪಸ್ಥಿತರಿದ್ದರು.