ಮತದಾನ ಬಹಿಷ್ಕಾರ ತೀರ್ಮಾನ ತಾತ್ಕಾಲಿಕ ಸ್ಥಗಿತ: ಕುಡಿಯಲು ಜಕ್ಕಲಮಡಗು ನೀರು ನೀಡುವ ಭರವಸೆ ನೀಡಿದ ಚುನಾವಣಾಧಿಕಾರಿ

ನಗರಸಭೆ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಒಳಚರಂಡಿ ನೀರು, ಕೈಗಾರಿಕಾ ಪ್ರದೇಶದ ಕಾರ್ಖಾನೆಗಳ‌ ರಾಸಾಯನಿಕ ಯುಕ್ತ ತ್ಯಾಜ್ಯ ನೀರು ಸೇರಿದಂತೆ ಇತರೆ ತ್ಯಾಜ್ಯ ನೇರವಾಗಿ ಅರ್ಕಾವತಿ ನದಿ ಪಾತ್ರದ ಕೆರೆಗಳ ಒಡಲು ಸೇರಿ ಸಂಪೂರ್ಣ ಕಲುಷಿತಗೊಂಡಿವೆ.

ಈ ಕೆರೆಗಳ ನೀರನ್ನು ಬಳಿಸಿದ ಜನ ರೋಗಪೀಡಿತರಾಗುತ್ತಿದ್ದಾರೆ. ಪ್ರಾಣಿ ಪಕ್ಷಿಗಳು, ಜಲಚರಗಳು ಸಾವನ್ನಪ್ಪುತ್ತಿವೆ. ಆದ್ದರಿಂದ ಕೆರೆ ಸಂರಕ್ಷಣೆಗೆ, ಕೆರೆ ಶುದ್ಧೀಕರಣಕ್ಕೆ ಈಗಾಗಲೇ ಹಲವು ಮನವಿ, ಹೋರಾಟ, ಪ್ರತಿಭಟನೆ ಸೇರಿದಂತೆ ನಾನಾ ಪ್ರಯತ್ನ ಮಾಡಿದರೂ ಸಮಸ್ಯೆ ಬಗೆಹರಿಯಲಿಲ್ಲ. ಆದರೆ ಪಟ್ಟು ಬಿಡದೇ ಕೆರೆ ಶುದ್ದೀಕರಣ, ಸಂರಕ್ಷಣೆಗೆ ಹೋರಾಟ ಮುಂದುವರಿಸಿದ ಕೆರೆ ಹೋರಾಟ ಸಮಿತಿ ಮುಖಂಡರು, ಗ್ರಾಮಸ್ಥರು.

ಕೆರೆ ಉಳಿವಿಗಾಗಿ 2023ರ ಸಾರ್ವತ್ರಿಕ ಚುನಾವಣೆ ಬಹಿಷ್ಕರಿಸಲು ತೀರ್ಮಾನಿಸಿರುವ ಗ್ರಾಮಸ್ಥರು, ಈ‌ ಹಿನ್ನೆಲೆ ಈಗಾಗಲೇ ಮತದಾನ ಬಹಿಷ್ಕಾರಕ್ಕೆ ಒಪ್ಪಿ ಸಹಿ ಅಕ್ಕಪಕ್ಕದ ಊರಿನ ಗ್ರಾಮಸ್ಥರು ಸಹಿ ಸಂಗ್ರಹ ಕೂಡ ಮಾಡಲಾಗಿದೆ. ಈ ಸಹಿ ಸಂಗ್ರಹ ಪತ್ರವನ್ನು ಚುನಾವಣಾಧಿಕಾರಿಗೆ ತಲುಪಿಸಿದ ಕೆರೆ ಹೋರಾಟ ಸಮಿತಿ ಸದಸ್ಯರು.

ದೊಡ್ಡ ತುಮಕೂರು ಗ್ರಾಮ ಪಂಚಾಯಿತಿ ಮತ್ತು ಮಜುರಾಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಹಳ್ಳಿಗಳಲ್ಲಿ ಸದ್ಯ ಕುಡಿಯಲು ನೀರು ಇಲ್ಲದೆ ಪರಿತಪಿಸುತ್ತಿರುವ ಗ್ರಾಮಸ್ಥರು, ಇದನ್ನು ಚುನಾವಣಾಧಿಕಾರಿ ಗಮನಕ್ಕೆ ತಂದ ಕೆರೆ ಹೋರಾಟ ಸಮಿತಿ ಸದಸ್ಯರು. ಎಲ್ಲಾ ಸಮಸ್ಯೆಗಳನ್ನು ಆಲಿಸಿ ತಾತ್ಕಾಲಿಕವಾಗಿ ಜಕ್ಕಲಮಡಗು ಜಲಾಶಯದಿಂದ ಶುದ್ಧೀಕರಣದ ನೀರನ್ನು ನೀಡುವುದಾಗಿ ಹಾಗೂ ಎಲ್ಲಾ ಹಳ್ಳಿಗಳಲ್ಲಿ ಆರೋಗ್ಯ ಶಿಬಿರ ಏರ್ಪಡಿಸಿ ತಪಾಸಣೆ ಮಾಡಲಾಗುವುದು ಎಂದು ಭರವಸೆ ನೀಡಿದ ಚುನಾವಣಾಧಿಕಾರಿ.

ಈ ಭರವಸೆಗೆ ಒಪ್ಪಿ ಚುನಾವಣಾ ಬಹಿಷ್ಕಾರದ ತೀರ್ಮಾನ ಸದ್ಯ ಸ್ಥಗಿತಗೊಳಿಸಿದ ಹೋರಾಟ ಸಮಿತಿ, ಇನ್ನೇರೆಡು ದಿನಗಳಲ್ಲಿ ಗ್ರಾಮಗಳಿಗೆ ವೈದ್ಯರು, ಕುಡಿಯುವ ನೀರು ಬರದೇ ಹೋದ ಪಕ್ಷದಲ್ಲಿ ಮತ್ತೆ ಮತದಾನ ಬಹಿಷ್ಕಾರ ತೀರ್ಮಾನ ಮುನ್ನೆಲೆಗೆ ತರಲಾಗುವುದು ಎಂದು ಎಚ್ಚರಿಸಿದ ಹೋರಾಟ ಸಮಿತಿ ಮುಖಂಡರು.

ಈ ವೇಳೆ ಕೆರೆ ಸಂರಕ್ಷಣಾ ವೇದಿಕೆಯ ಮುಖಂಡರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

5 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

8 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

10 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

10 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

12 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

16 hours ago