ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಟ್ಟು 7,96,138 ಮತದಾರರು ಕರಡು ಪಟ್ಟಿಯಲ್ಲಿ ಉಳಿದಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ತಿಳಿಸಿದರು.

ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲ ತಹಶೀಲ್ದಾರ್ ಕಚೇರಿಗಳು, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಕರಡು ಮತದಾರರ ಪಟ್ಟಿಯನ್ನು ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ ಎಂದರು.

ಜೂನ್ 16, 2026ರ ವೇಳೆಗೆ ಜಿಲ್ಲೆಯಲ್ಲಿ 9,12,913 ಮತದಾರರಿದ್ದರು. ವಿಶೇಷ ಸಮಗ್ರ ಪರಿಷ್ಕರಣೆಯ ಬಳಿಕ 3,91,515 ಪುರುಷರು, 4,04,564 ಮಹಿಳೆಯರು ಹಾಗೂ 59 ಇತರೆ ಮತದಾರರು ಸೇರಿದಂತೆ ಒಟ್ಟು 7,96,138 ಮತದಾರರನ್ನು ಕರಡು ಪಟ್ಟಿಯಲ್ಲಿ ಉಳಿಸಲಾಗಿದೆ ಎಂದು ಮಾಹಿತಿ ನೀಡಿದರು.

1.16 ಲಕ್ಷ ಮತದಾರರ ಸಂಪರ್ಕ ಪತ್ತೆಯಾಗಿಲ್ಲ

ಗೈರು, ಶಾಶ್ವತ ಸ್ಥಳಾಂತರ, ಮರಣ ಹಾಗೂ ಎರಡು ಕಡೆ ನೋಂದಣಿಗೆ ಸಂಬಂಧಿಸಿದಂತೆ ಒಟ್ಟು 1,16,775 ಮತದಾರರನ್ನು ಗುರುತಿಸಲಾಗಿದೆ. ಇದರಲ್ಲಿ 65,009 ಮಂದಿ ಶಾಶ್ವತವಾಗಿ ಸ್ಥಳಾಂತರಗೊಂಡವರು, 25,161 ಮಂದಿ ಮೃತಪಟ್ಟವರು, 12,212 ಮಂದಿ ಎರಡು ಕಡೆ ನೋಂದಣಿಯಾಗಿರುವವರು, 13,607 ಮಂದಿ ಗೈರು ಹಾಗೂ 786 ಮಂದಿ ಇತರೆ ವರ್ಗಕ್ಕೆ ಸೇರಿದವರಾಗಿದ್ದಾರೆ.

56,369 ಮಂದಿಗೆ ನೋಟಿಸ್

ಮ್ಯಾಪಿಂಗ್ ಆಗದೇ ಉಳಿದಿರುವ 26,299 ಮತದಾರರು ಹಾಗೂ ಮತದಾರರ ಹೆಸರು, ವಿಳಾಸ ಸೇರಿದಂತೆ ವಿವಿಧ ವಿವರಗಳಲ್ಲಿ ತಪ್ಪುಗಳಿರುವ 30,070 ಮತದಾರರು ಸೇರಿದಂತೆ ಒಟ್ಟು 56,369 ಮಂದಿಗೆ ನೋಟಿಸ್ ನೀಡಲು ಸಿದ್ಧತೆ ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಸೆ.23 ಆಕ್ಷೇಪಣೆಗೆ ಕೊನೆ ದಿನ

ಮತದಾರರು ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಕರಡು ಪಟ್ಟಿಯನ್ನು ಪರಿಶೀಲಿಸಿ, ಯಾವುದೇ ಹಕ್ಕು ಮತ್ತು ಆಕ್ಷೇಪಣೆಗಳಿದ್ದರೆ ಆಗಸ್ಟ್ 24ರಿಂದ ಸೆಪ್ಟೆಂಬರ್ 23ರವರೆಗೆ ಸಲ್ಲಿಸಬಹುದು. ಕರಡು ಪಟ್ಟಿಯಲ್ಲಿ ಹೆಸರು ಇಲ್ಲದ ಅರ್ಹ ಮತದಾರರು ನಮೂನೆ-6ರ ಮೂಲಕ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದಾಗಿದೆ.

2026ರ ಅಕ್ಟೋಬರ್ 1ಕ್ಕೆ 18 ವರ್ಷ ಪೂರ್ಣಗೊಳ್ಳುವ ಯುವ ಮತದಾರರೂ ನೋಂದಣಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಎಇಆರ್‌ಒ, ಬಿಎಲ್‌ಒ ಅಥವಾ ವೋಟರ್ ಸರ್ವಿಸ್ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು.

13 ಹೊಸ ಮತಗಟ್ಟೆ

ಮತಗಟ್ಟೆಗಳ ದೃಢೀಕರಣ ಕಾರ್ಯದ ಬಳಿಕ ಜಿಲ್ಲೆಯಲ್ಲಿ 13 ಹೊಸ ಮತಗಟ್ಟೆಗಳನ್ನು ಗುರುತಿಸಲಾಗಿದ್ದು, ಒಟ್ಟು ಮತಗಟ್ಟೆಗಳ ಸಂಖ್ಯೆ 1,154ಕ್ಕೆ ಏರಿಕೆಯಾಗಿದೆ. ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ 1,200ಕ್ಕೂ ಹೆಚ್ಚು ಮತದಾರರನ್ನು ಹೊಂದಿರುವ 12 ಮತಗಟ್ಟೆಗಳಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸಲು ಹಾಗೂ 2 ಕಿ.ಮೀ.ಗಿಂತ ಹೆಚ್ಚು ದೂರವಿರುವ ಒಂದು ಮತಗಟ್ಟೆಯ ಸ್ಥಳ ಬದಲಾವಣೆಗೆ ಸಂಬಂಧಿಸಿದಂತೆ ಒಟ್ಟು 13 ಮತಗಟ್ಟೆಗಳ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದಕ್ಕೆ ಭಾರತ ಚುನಾವಣಾ ಆಯೋಗ ಅನುಮೋದನೆ ನೀಡಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಕ್ಷೇತ್ರವಾರು ಮತದಾರರ ವಿವರ

ಹೊಸಕೋಟೆ: 298 ಮತಗಟ್ಟೆಗಳು; 1,07,380 ಪುರುಷರು, 1,10,556 ಮಹಿಳೆಯರು ಹಾಗೂ 4 ಇತರೆ ಸೇರಿ ಒಟ್ಟು 2,17,940 ಮತದಾರರು.

ದೇವನಹಳ್ಳಿ: 296 ಮತಗಟ್ಟೆಗಳು; 95,669 ಪುರುಷರು, 98,221 ಮಹಿಳೆಯರು ಹಾಗೂ 9 ಇತರೆ ಸೇರಿ ಒಟ್ಟು 1,93,899 ಮತದಾರರು.

ದೊಡ್ಡಬಳ್ಳಾಪುರ: 279 ಮತಗಟ್ಟೆಗಳು; 94,566 ಪುರುಷರು, 97,661 ಮಹಿಳೆಯರು ಹಾಗೂ 1 ಇತರೆ ಸೇರಿ ಒಟ್ಟು 1,92,228 ಮತದಾರರು.

ನೆಲಮಂಗಲ: 281 ಮತಗಟ್ಟೆಗಳು; 93,900 ಪುರುಷರು, 98,126 ಮಹಿಳೆಯರು ಹಾಗೂ 45 ಇತರೆ ಸೇರಿ ಒಟ್ಟು 1,92,071 ಮತದಾರರು.

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ 7,96,138 ಗಣತಿ ನಮೂನೆಗಳನ್ನು ಡಿಜಿಟಲೀಕರಣಗೊಳಿಸಲಾಗಿದ್ದು, ಶೇ.87.21ರಷ್ಟು ಪ್ರಗತಿ ಸಾಧಿಸಲಾಗಿದೆ. ಕರಡು ಪಟ್ಟಿಯಲ್ಲಿ 25,703 ಯುವ ಮತದಾರರು, 113 ಸೇವಾ ಮತದಾರರು, 12,023 ವಿಕಲಚೇತನರು ಹಾಗೂ 85 ವರ್ಷ ಮೇಲ್ಪಟ್ಟ 6,023 ಹಿರಿಯ ನಾಗರಿಕರು ಇದ್ದಾರೆ ಎಂದು ತಿಳಿಸಿದರು.

ಕರಡು ಪಟ್ಟಿಯಲ್ಲಿ ಹೆಸರು ಇಲ್ಲದವರು ಅಥವಾ ತಿದ್ದುಪಡಿ ಅಗತ್ಯವಿರುವವರು ಸೆಪ್ಟೆಂಬರ್ 22ರವರೆಗೆ ಸೂಕ್ತ ದಾಖಲೆಗಳೊಂದಿಗೆ ನಮೂನೆ-6 ಸಲ್ಲಿಸಬಹುದು. ಅರ್ಜಿಗಳನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಹಾಗೂ ನಾಲ್ಕು ತಾಲೂಕುಗಳ ಮತದಾರರ ನೋಂದಣಾಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

11 hours ago

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

13 hours ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

14 hours ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

18 hours ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

20 hours ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

1 day ago