ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2024 ಪ್ರಕಟ: ಅರ್ಹ ಮತದಾರರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿ-ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮತದಾರರ ಕರಡು ಪಟ್ಟಿಯನ್ನು ನಾಲ್ಕು ತಾಲೂಕುಗಳ ಮತಗಟ್ಟೆ, ಮತದಾರ ನೋಂದಣಾಧಿಕಾರಿ ಕಚೇರಿ, ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿಗಳಲ್ಲಿ ಸಾರ್ವಜನಿಕರ ಮಾಹಿತಿಗೆ ಪ್ರಕಟಿಸಲಾಗಿದೆ.

ಈ ಸಂಬಂಧ ಸಾರ್ವಜನಿಕರು ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಹಕ್ಕು ಮತ್ತು ಆಕ್ಷೇಪಣೆಗಳನ್ನು (ಮತದಾರರ ಪಟ್ಟಿಯಲ್ಲಿ ಅರ್ಹ ಮತದಾರರ ಹೆಸರುಗಳ ಸೇರ್ಪಡೆ, ತಿದ್ದುಪಡಿ, ಬಿಡತಕ್ಕದ್ದು, ವರ್ಗಾವಣೆ) ಸಲ್ಲಿಸಲು ನವೆಂಬರ್ 30 ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್.ಶಿವಶಂಕರ್ ಅವರು ತಿಳಿಸಿದ್ದಾರೆ.

2024ರ ವಾರ್ಷಿಕ ಮತದಾರರ ಪಟ್ಟಿಯ ಪರಿಷ್ಕರಣೆ ಸಂದರ್ಭದಲ್ಲಿ 1ನೇ ಜನವರಿ, 1ನೇ ಏಪ್ರಿಲ್, 1ನೇ ಜುಲೈ ಮತ್ತು 1ನೇ ಅಕ್ಟೋಬರ್-2024ಕ್ಕೆ 18 ವರ್ಷ ತುಂಬುವ ಯುವ ಮತದಾರರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ಮುಂಗಡ ಅರ್ಜಿ ಸಲ್ಲಿಸಲು ಅವಕಾಶವಿದೆ. ಮತದಾರರ ಗುರುತಿನ ಚೀಟಿಯನ್ನು ಸಂಬಂಧಪಟ್ಟ ಮತದಾರರಿಗೆ ನೇರವಾಗಿ ಅಂಚೆ ಮೂಲಕ ಕಳುಹಿಸಲಾಗುವುದು ಎಂದು ಹೇಳಿದ್ದಾರೆ.

ಚುನಾವಣಾ ಆಯೋಗದಿಂದ ಇತ್ತೀಚಿನ ನಿರ್ದೇಶನದಂತೆ ಮತದಾರರ ನೋಂದಣಿಗಾಗಿ ಸರಳೀಕರಿಸಿದ ನಮೂನೆ-6 ರ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಮತದಾರರ ಪಟ್ಟಿಯಲ್ಲಿ ಮತದಾರರ ಹೆಸರಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು ಸಲ್ಲಿಸಲು ಹಾಗೂ ಒಂದೇ ತರಹದ ಹೆಸರು / ಭಾವಚಿತ್ರ ನಮೂದುಗಳನ್ನು ಹೊಂದಿರುವ ಮತದಾರರ ಪರಿಶೀಲನೆಗೆ ಮತ್ತು ಕೈಬಿಡಲು ಪರಿಷ್ಕೃತ ನಮೂನೆ-7ನ್ನು ನೀಡಲು ಅವಕಾಶ ಕಲ್ಪಿಸಲಾಗಿದೆ. ಮತದಾರರ ಪಟ್ಟಿಯ ಹೆಸರು, ಇನ್ನಿತರ ತಿದ್ದುಪಡಿಗಳಿಗಾಗಿ ನಮೂನೆ-8ರ ಅರ್ಜಿಯಲ್ಲಿ ಸಲ್ಲಿಸಬಹುದಾಗಿದೆ.

ರಾಜಕೀಯ ಪಕ್ಷಗಳಿಗೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳು, ಮಾನ್ಯತೆ ಪಡೆದ ರಾಜಕೀಯ ಪಕ್ಷಗಳು, ಬೂತ್ ಲೆವೆಲ್ ಏಜೆಂಟ್ (BLA) ಗಳನ್ನು ನೇಮಿಸಲು ಅಗತ್ಯ ಕ್ರಮಕೈಗೊಳ್ಳಬೇಕಾಗಿದೆ. ಬೂತ್ ಲೆವೆಲ್ ಏಜೆಂಟ್‌ಗಳು ಸಂಬಂಧಪಟ್ಟ ಮತಗಟ್ಟೆ ಹಂತದ ಅಧಿಕಾರಿ (BLO)ಗೆ ಪ್ರತಿ ದಿನ 10 ನಮೂನೆಗಳನ್ನು ನಿರಂತರ ಪರಿಷ್ಕರಣೆ ಸಲ್ಲಿಸಲು ಅವಕಾಶವಿದೆ. ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ನಿಗದಿಪಡಿಸಿರುವ ಅವಧಿಯಲ್ಲಿ ಒಬ್ಬ ಬೂತ್‌ ಲೆವೆಲ್ ಏಜೆಂಟ್, 30ಕ್ಕಿಂತ ಹೆಚ್ಚು ನಮೂನೆಗಳನ್ನು ಸಲ್ಲಿಸಿದ್ದಲ್ಲಿ ಸಂಬಂಧಪಟ್ಟ ಮತದಾರರ ನೋಂದಣಾಧಿಕಾರಿ/ಸಹಾಯಕ ಮತದಾರರ ನೋಂದಣಾಧಿಕಾರಿ ಸ್ವತಃ ಪರಿಶೀಲನೆ ಮಾಡುವುದಾಗಿರುತ್ತದೆ. ಬೂತ್ ಲೆವೆಲ್ ಏಜೆಂಟ್ ರವರು ನಮೂನೆಗಳ ಅರ್ಜಿ ಸಹಿತ ತಾನು ನೀಡಿರುವ ಅರ್ಜಿಗಳನ್ನು ಸ್ವತಃ ಪರಿಶೀಲನೆ ಮಾಡಿರುವುದಾಗಿ ದೃಢೀಕರಣ ಸಲ್ಲಿಸಬೇಕು‌.

ಮತದಾರರು ಹಾಗೂ ರಾಜಕೀಯ ಪಕ್ಷಗಳ ಮುಖಂಡರಿಂದ ಬಂದಿರುವ ಆಕ್ಷೇಪಣೆಗಳನ್ನು ಡಿಸೆಂಬರ್ 26ರ ಒಳಗೆ ಇತ್ಯರ್ಥಗೊಳಿಸಲಾಗುವುದು. ಅಂತಿಮ ಮತದಾರರ ಪಟ್ಟಿಯನ್ನು 2024ರ ಜನವರಿ 5 ರಂದು ಪ್ರಕಟಿಸಲಾಗುವುದು ಎಂದರು.

ಜಿಲ್ಲೆಯಲ್ಲಿ ಈಗ ಪ್ರಕಟಿಸಲಾಗಿರುವ ಕರಡು ಮತದಾರರ ಪಟ್ಟಿಯಲ್ಲಿ ಜಿಲ್ಲೆಯ ನಾಲ್ಕು ತಾಲೂಕುಗಳಿಂದ 8,81,961 ಮತದಾರರು ಇದ್ದಾರೆ. ಇದರಲ್ಲಿ 4,37,579 ಪುರುಷರು, 4,44,237 ಮಹಿಳೆಯರು ಹಾಗೂ 145 ಜನ ಇತರೆ ಮತದಾರರು ಇದ್ದಾರೆ.

ಒಟ್ಟು ಮತದಾರರ ಸಂಖ್ಯೆಯಲ್ಲಿ 80 ವರ್ಷ ಮೇಲ್ಪಟ್ಟ ಮತದಾರರು 20,144. ಅಗವಿಕಲ ಮತದಾರರು 12,624 ಹಾಗೂ ಸೇವಾ ಮತದಾರರು 128 ಇದ್ದಾರೆ ಎಂದರು. ಜಿಲ್ಲೆಯ 4 ತಾಲೂಕುಗಳಲ್ಲಿನ ಮತದಾರರ ಪೈಕಿ ಹೆಚ್ಚಿನ ಪ್ರಮಾಣದಲ್ಲಿ ಮಹಿಳಾ ಮತದಾರರೇ ಇದ್ದಾರೆ.

ದೊಡ್ಡಬಳ್ಳಾಪುರದಲ್ಲಿ ಒಟ್ಟು 2,15,282 ಮತದಾರರಿದ್ದು, ಅದರಲ್ಲಿ 1,08,248 ಮಹಿಳಾ ಮತದಾರರು ಹಾಗೂ 1,07,033 ಪುರುಷ ಮತದಾರರಿದ್ದಾರೆ.

ಹೊಸಕೋಟೆಯಲ್ಲಿ ಒಟ್ಟು 2,34,936 ಮತದಾರರಿದ್ದು, ಅದರಲ್ಲಿ 1,18,224 ಮಹಿಳೆ ಹಾಗೂ 1,16, 681 ಪುರುಷ ಮತದಾರರು ಇದ್ದಾರೆ.

ದೇವನಹಳ್ಳಿಯಲ್ಲಿ ಒಟ್ಟು 2,13,381 ಮತದಾರರಿದ್ದು, 1,07,345 ಮಹಿಳಾ ಹಾಗೂ 1,06,018 ಪುರುಷ ಮತದಾರರಿದ್ದಾರೆ.

ನೆಲಮಂಗಲದಲ್ಲಿ 2,18,372 ಮತದಾರರ ಪೈಕಿ 1,10,420 ಮಹಿಳೆ ಹಾಗೂ 1,07,847 ಪುರುಷ ಮತದಾರರಿದ್ದಾರೆ.

ಜಿಲ್ಲೆಯಲ್ಲಿ ಮತದಾರರ ಲಿಂಗಾನುಪಾತದಲ್ಲಿ 1 ಸಾವಿರ ಪುರುಷರಿಗೆ 1016 ಮಹಿಳೆಯರಿದ್ದಾರೆ. ಅದರಲ್ಲಿ ದೊಡ್ಡಬಳ್ಳಾಪುರದಲ್ಲಿ 1011, ಹೊಸಕೋಟೆಯಲ್ಲಿ 1013, ದೇವನಹಳ್ಳಿ 1013 ಹಾಗೂ ನೆಲಮಂಗಲದಲ್ಲಿ ಅತಿ ಹೆಚ್ಚು 1025 ಲಿಂಗಾನುಪಾತ ಕಂಡುಬಂದಿದೆ.

ಜಿಲ್ಲೆಯಲ್ಲಿ 4 ವಿಧಾನಸಭಾ ಕ್ಷೇತ್ರಗಳಿವೆ. ಇದರಲ್ಲಿ ಒಟ್ಟಾಗಿ 1137 ಮತಗಟ್ಟೆಗಳಿವೆ. ಅದರಲ್ಲಿ ದೊಡ್ಡಬಳ್ಳಾಪುರ 276, ಹೊಸಕೋಟೆ 293, ದೇವನಹಳ್ಳಿ 292 ಹಾಗೂ ನೆಲಮಂಗಲದಲ್ಲಿ 276 ಮತಗಟ್ಟೆಗಳಿದೆ.

ಜಿಲ್ಲೆಯಲ್ಲಿ ದೊಡ್ಡಬಳ್ಳಾಪುರ 3350, ಹೊಸಕೋಟೆ 3482, ದೇವನಹಳ್ಳಿ 3484 ಹಾಗೂ ನೆಲಮಂಗಲದಲ್ಲಿ 2308 ಸೇರಿದಂತೆ ಒಟ್ಟು 12,624 ಮಂದಿ ವಿಶೇಷಚೇತನ ಮತದಾರರಿದ್ದಾರೆ. 20,144 ಮಂದಿ 80 ವರ್ಷ ಮೇಲ್ಪಟ್ಟವರಿದ್ದಾರೆ. ಇನ್ನು ಸೇವಾ ಮತದಾರರು 128 ಮಂದಿ ಇದ್ದಾರೆ ಎಂದು ಮಾಹಿತಿ ನೀಡಿದರು.

Ramesh Babu

Journalist

Recent Posts

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ-ಎನ್.ಶೋಭಾ

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…

8 hours ago

ಮನೆ ಹೊಸ್ತಿಲಿನಲ್ಲಿ ಪೂಜೆಗಿಟ್ಟಿದ್ದ ಒಣಗಿದ ದಾಸವಾಳ ಹೂ ನುಂಗಿ ಆರುವರೆ ತಿಂಗಳ ಮಗು ದಾರುಣ ಸಾವು

ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…

10 hours ago

ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಲೋಕಾಯುಕ್ತ ಬಲೆಗೆ

ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…

11 hours ago

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

19 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

22 hours ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

1 day ago