ಮತಾಂತರ ವಿರುದ್ಧ ದೇಶಾದ್ಯಂತ ಜಾಗೃತಿ ಕಾರ್ಯಕ್ರಮ

ಇತ್ತೀಚೆಗೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ಉದ್ಯೋಗದ  ನೆಪದಲ್ಲಿ ಹೆಣ್ಣುಮಕ್ಕಳನ್ನು ಬಲವಂತಾಗಿ ಮತಾಂತರ ಮಾಡುವ ವಿಚಾರ ದೊಡ್ಡ ದುರಂತ ಪ್ರಕರಣವಾಗಿದೆ. ಇದರ ವಿರುದ್ಧ ದೇಶಾದ್ಯಂತ ಕಂಪನಿಗಳಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ವಿಶ್ವ ಹಿಂದು ಪರಿಷತ್ ಕೇಂದ್ರೀಯ ಸಂಘಟನಾ ಕಾರ್ಯದರ್ಶಿ ಮಿಲಿಂದ್ ಪಾರಂಡೆ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಮತಾಂತರ ಮಾಡುವ ಜಾಲಗಳು ಹೆಚ್ಚಾಗುತ್ತಿದ್ದು, ಇದರ ವಿರುದ್ಧ ಹಿಂದೂ ಸಮಾಜ ಎಚ್ಚೆತ್ತುಕೊಳ್ಳಬೇಕಿದೆ ಎಂದರು.

ಪೆಹಲ್ಗಾಮ್ ಹತ್ಯಾಕಾಂಡ ನಡೆದು ಒಂದು ವರ್ಷ ಕಳೆದಿದೆ. ಹತ್ಯಾಕಾಂಡದ ವೇಳೆ ನೀನು ಹಿಂದು ನಾ ಎಂದು ಕೇಳಿ ದಾಳಿ ಮಾಡಲಾಗಿತ್ತು. ಹೀಗಾಗಿ ಮುಸ್ಲಿಂ ಬಾಂಧವರ ಯುವ ಪಿಳೀಗೆಗೆ ಉತ್ತಮ ನಡವಳಿಕೆ, ಸಂಸ್ಕಾರ ನೀಡುವಂತ ಕಾರ್ಯ ಆಗಬೇಕಿದೆ ಎಂದರು.

ಇನ್ನೂ ಗೋವುಗಳ ಸಂತತಿ ಕಡಿಮೆಯಾಗುತ್ತಿದೆ. ಗೋವುಗಳ ಸ್ಮಗ್ಲಿಂಗ್ ಹೆಚ್ಚಾಗಿ ನಡೆಯುತ್ತಿದೆ. ಇದರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಒತ್ತಾಯಿಸಲಾಗುತ್ತಿದೆ. ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರನ್ನ ದುರುದ್ದೇಶಪೂರ್ವಕವಾಗಿ ಗುರಿಯಾಗಿಸಿ ಪ್ರಕರಣಗಳನ್ನು ದಾಖಲು ಮಾಡಲಾಗುತ್ತಿದೆ. ಪೊಲೀಸ್ ಇಲಾಖೆ ಮೇಲೆ ಒತ್ತಡ ಹೇರಿ ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ಗಳನ್ನು ಹಾಕಲಾಗುತ್ತಿದೆ. ಇಂತಹ ದ್ವೇಷ ಕೆಲಸವನ್ನು ಬಿಡಬೇಕು. ಮುಂದಿನ ನವೆಂಬರ್ ನಲ್ಲಿ ಒಂದು ಕೋಟಿ ಹಿಂದು ಕಾರ್ಯಕರ್ತರ ನೊಂದಣಿ ಕಾರ್ಯ ಮಾಡಲಾಗುತ್ತಿದೆ ಎಂದು ತಿಳಿಸಿದರು.

ವಿಹಿಂಪ ದಕ್ಷಿಣ ಪ್ರಾಂತ ಅಧ್ಯಕ್ಷ ದೀಪಕ್ ರಾಜ್ ಗೋಪಾಲ್, ದಕ್ಷಿಣ ಪ್ರಾಂತ ಕಾರ್ಯದರ್ಶಿ ಬಿ.ಇ ಸುರೇಶ್, ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ ವೆಲ್, ಕೋಲಾರ ವಿಭಾಗ ಅಧ್ಯಕ್ಷ ಮಂಜುನಾಥ್, ಕಾರ್ಯದರ್ಶಿ ಗೌರಿ ಶಂಕರ್ ಮತ್ತಿತ್ತರರು ಇದ್ದರು.

Ramesh Babu

Journalist

Recent Posts

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

48 minutes ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

1 hour ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

3 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

7 hours ago

ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯನವರದ್ದು ಕುಮಾರಸ್ವಾಮಿ ತರಹದ ಚರಿತ್ರೆಯಲ್ಲ: ಎಚ್.ಡಿ.ಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ತೀವ್ರ ವಾಗ್ದಾಳಿ

ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…

19 hours ago

ರಾಜಾನುಕುಂಟೆ ಬಳಿ ರೈಲು ಬೋಗಿಗಳಿಗೆ ಬೆಂಕಿ: ಎರಡು ಬೋಗಿಗಳು ಸುಟ್ಟು ಭಸ್ಮ

ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…

1 day ago