ಮತ್ತೊಮ್ಮೆ ಸಂಸದ ಮುನಿಸ್ವಾಮಿಗೆ ಬಿಜೆಪಿ ಟಿಕೆಟ್ ನೀಡುವಂತೆ ಒತ್ತಾಯ

ಕೋಲಾರ: ಮೀಸಲು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಜನಸಾಮಾನ್ಯರ ಸಂಸದರಾಗಿ ಉತ್ತಮ ರೀತಿಯಲ್ಲಿ ಜನರ ಪರವಾದ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು ಬಿಜೆಪಿ ಪಕ್ಷದ ಸಂಘಟನೆಗೆ ಹೆಚ್ಚಿನ ಅಧ್ಯತೆಯೊಂದಿಗೆ ಎಲ್ಲಾ ಜಾತಿ ಜನಾಂಗದವರನ್ನು ಜೊತೆಗೆ ಕರೆದುಕೊಂಡು ಹೋಗುವ ಸಂಸದ ಎಸ್ ಮುನಿಸ್ವಾಮಿಗೆ ಮತ್ತೊಮ್ಮೆ ಮೈತ್ರಿಕೂಟದಿಂದ ಬಿಜೆಪಿ ಪಕ್ಷದಿಂದ ಟಿಕೆಟ್ ನೀಡುವಂತೆ ರಾಜ್ಯ ಬಿಜೆಪಿ ಎಸ್ಸಿ ಘಟಕದ ಕಾರ್ಯದರ್ಶಿ ಆರ್.ಎನ್ ಹನುಮಂತಪ್ಪ ಬಿಜೆಪಿ ಹೈಕಮಾಂಡ್ ಅವರನ್ನು ಒತ್ತಾಯಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಈಗಾಗಲೇ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಮೈತ್ರಿಕೂಟದಿಂದ ಚುನಾವಣೆ ಎದುರಿಸಲು ಸಿದ್ದವಾಗಿದ್ದು ಕೋಲಾರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಬಿಜೆಪಿ ಸಂಸದರಾಗಿ ಮುನಿಸ್ವಾಮಿ ಅವರು ಜನರ ಮೆಚ್ಚುಗೆ ಪಡೆದಿದ್ದಾರೆ ಅವರಿಗೆ ಜೆಡಿಎಸ್‌ ಪಕ್ಷದ ವರಿಷ್ಠರಾದ ಎಚ್.ಡಿ ದೇವೇಗೌಡರು ಹಾಗೂ ಎಚ್.ಡಿ ಕುಮಾರಸ್ವಾಮಿ ಅವರು ಮನಸ್ಸು ಮಾಡಿ ಮತ್ತೊಮ್ಮೆ ಕ್ಷೇತ್ರವನ್ನು ಬಿಜೆಪಿ ಪಕ್ಷಕ್ಕೆ ಬಿಟ್ಟು ಕೊಡಬೇಕು ಎಂದು ಮನವಿ ಮಾಡಿದರು.

ಕೋಲಾರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಸುಮಾರು 30 ವರ್ಷಗಳಿಂದ ಗೆಲ್ಲುವ ಅವಕಾಶಗಳು ಇದ್ದರೂ ಕಾರಣದಿಂದಾಗಿ ಅವಕಾಶಗಳು ಸಿಗಲಿಲ್ಲ ನರೇಂದ್ರ ಮೋದಿ ಹಾಗೂ ಬಿಜೆಪಿ ಕಾರ್ಯಕರ್ತರ ಸತತ ಪ್ರಯತ್ನದಿಂದ 2019 ರಲ್ಲಿ ಮೊದಲ ಬಾರಿಗೆ ಬಿಜೆಪಿ ಪಕ್ಷದ ಸಂಸದರನ್ನು ಜಿಲ್ಲೆಯ ಜನ ನೋಡುವಂತಾಗಿದೆ ಬಿಜೆಪಿ ಒಂದು ಶಿಸ್ತಿನ ಪಕ್ಷ ನಾವು ಎಲ್ಲರೂ ಹೈಕಮಾಂಡ್ ತೀರ್ಮಾನಕ್ಕೆ ಬದ್ದರಾಗಿ ಕೆಲಸ ಮಾಡತ್ತೇವೆ ಕಾರ್ಯಕರ್ತರ ಆಧಾರಿತ ಬಿಜೆಪಿ ಪಕ್ಷವು ವ್ಯಕ್ತಿಗಿಂತ ಪಕ್ಷ ದೊಡ್ಡದು ಪಕ್ಷಕಿಂತ ದೇಶ ದೊಡ್ಡದು ಅಡಿಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇವೆ ಜಿಲ್ಲೆಯ ಭವಿಷ್ಯದ ಮತ್ತು ದೇಶದಲ್ಲಿ ನರೇಂದ್ರ ಮೋದಿಯವರನ್ನು ಮತ್ತೊಂದು ಪ್ರಧಾನಿಯಾಗಲು ಕೋಲಾರದಲ್ಲಿ ಮತ್ತೊಂದು ಅವಧಿಗೆ ಬಿಜೆಪಿಗೆ ಟಿಕೆಟ್ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ಹಿಂದಿನ ಎಲ್ಲಾ ಚುನಾವಣೆಗೆ ಹೋಲಿಸಿದರೆ ಬಿಜೆಪಿ ಪಕ್ಷವು ಸದೃಢವಾಗಿದ್ದು ಪಕ್ಷವು ಬೆಳೆಯುತ್ತಾ ಇರುವ ಸಂದರ್ಭದಲ್ಲಿ ಟಿಕೆಟ್ ಸಿಗದೇ ಹೋದರೆ ಪಕ್ಷ ಸಂಘಟನೆಗೆ ಸಮಸ್ಯೆಯಾಗುತ್ತದೆ ಮತ್ತೊಂದು ಬಾರಿ ಬಿಜೆಪಿ ಸ್ಪರ್ಧೆ ಮಾಡಿದರೆ ಕಳೆದ ಬಾರಿಗಿಂತ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಬಹುದು ಜಿಲ್ಲೆಯಲ್ಲಿ ಅರಣ್ಯಾಧಿಕಾರಿಗಳು ರೈತರ ಭೂಮಿ ವಶಪಡಿಸಿಕೊಂಡ ಸಂದರ್ಭ ಸೇರಿದಂತೆ ಕ್ಲಾಕ್ ಟವರ್ ನಲ್ಲಿ ತ್ರಿವರ್ಣ ಧ್ವಜ ಹಾರಿಸಿದ್ದು ಜಿಲ್ಲೆಯಲ್ಲಿ ಶಾಂತಿ ಸೌಹಾರ್ದತೆಗೆ ಧಕ್ಕೆ ಬಾರದಂತೆ ಜನ ಸಾಮನ್ಯರಿಗೆ ಪ್ರತಿನಿತ್ಯ ಸಿಗುವ ರೀತಿಯಲ್ಲಿ ಜನಮನ್ನಣೆ ಗಳಿಸಿರುವ ಸಂಸದ ಎಸ್. ಮುನಿಸ್ವಾಮಿಗೆ ಟಿಕೆಟ್ ನೀಡುವಂತೆ ಬಿಜೆಪಿ ಹೈಕಮಾಂಡ್ ಅವರನ್ನು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಎಸ್ಸಿ ಘಟಕದ ಅಧ್ಯಕ್ಷ ಕಪಾಲಿ ಶಂಕರ್, ಪ್ರಧಾನ ಕಾರ್ಯದರ್ಶಿ ಬಾಬಿ ಸುರೇಶ್, ಉಪಾಧ್ಯಕ್ಷರಾದ ಮಹೇಶ್, ಕೃಷ್ಣಮೂರ್ತಿ, ನಾಗರಾಜ್, ಶ್ರೀನಿವಾಸ್ ಮುಂತಾದವರು ಇದ್ದರು

Leave a Reply

Your email address will not be published. Required fields are marked *