ಮತ ಎಣಿಕೆ ಕಾರ್ಯಕ್ಕೆ ಸಕಲ ಸಿದ್ಧತೆ: ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ 2023ರ ಮೇ.10 ರಂದು ಮತದಾನ ಪ್ರಕ್ರಿಯೆ ನಡೆದಿದ್ದು, ಮೇ.13 ರಂದು ದೇವನಹಳ್ಳಿಯ ಪ್ರಸನ್ನಹಳ್ಳಿಯಲ್ಲಿರುವ ಆಕಾಶ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ, ನಡೆಯಲಿರುವ ಮತ ಎಣಿಕೆ ಕಾರ್ಯಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ  ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದರು.

2023ರ ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಮೇ.10ರಂದು ನಡೆದ ಮತದಾನದಲ್ಲಿ ಶೇಕಡ 85.06 ರಷ್ಟು ಮತ ಚಲಾವಣೆಯಾಗಿರುತ್ತದೆ.

ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯಲ್ಲಿ ಒಟ್ಟಾರೆ 8,77,890 ಮತದಾರರಿದ್ದು, ಅದರಲ್ಲಿ  4,35,835 ಪುರುಷ ಮತದಾರರು, 4,41,907 ಮಹಿಳಾ ಮತದಾರರು ಹಾಗೂ 148 ಇತರೆ ಮತದಾರರಿದ್ದಾರೆ.

ಒಟ್ಟು 7,46,873(ಶೇ.85.08) ಮತದಾರರು ಮತ ಚಲಾಯಿಸಿದ್ದಾರೆ. ಅದರಲ್ಲಿ 3,74,588 ಪುರುಷ ಮತದಾರರು, 3,72,230 ಮಹಿಳಾ ಮತದಾರರು, 55 ಇತರೆ ಮತದಾರರು ಮತದಾನ ಮಾಡಿದ್ದಾರೆ.

ಮತದಾನ ನಡೆದ 1,137 ಮತಗಟ್ಟೆಗಳ ಇವಿಎಂ ಹಾಗೂ ವಿವಿಪ್ಯಾಟ್ ಯಂತ್ರಗಳನ್ನು ಮತ ಎಣಿಕೆ ಕೇಂದ್ರದ ಭದ್ರತಾ ಕೊಠಡಿಯಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ನಲ್ಲಿ ಇರಿಸಲಾಗಿದೆ.

ಮತ ಎಣಿಕೆ ಕಾರ್ಯವನ್ನು ಮೇ.13ರಂದು ಬೆಳಿಗ್ಗೆ 8 ಗಂಟೆಗೆ ಪ್ರಾರಂಭಿಸಲಾಗುವುದು ಹಾಗೂ ನಾಲ್ಕು ಕೊಠಡಿಯಲ್ಲಿ ನಡೆಸಲಾಗುವುದು. ಮತ ಎಣಿಕೆ ಕಾರ್ಯಗಳು 21 ಹಾಗೂ 20 ಸುತ್ತುಗಳು ನಡೆಯಲಿವೆ.

ಪ್ರತಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯಕ್ಕಾಗಿ 14 ಟೇಬಲ್ ಗಳನ್ನು ನಿಗದಿಪಡಿಸಲಾಗಿದ್ದು, ಪ್ರತಿ ಟೇಬಲ್ ಗೆ ಒಬ್ಬ ಎಣಿಕೆ ಮೇಲ್ವಿಚಾರಕರು, ಎಣಿಕೆ ಸಹಾಯಕರು ಮತ್ತು ಮೈಕ್ರೋ ಅಬ್ಸರ್ವರ್‌ಅನ್ನು ನೇಮಕ ಮಾಡಲಾಗಿದೆ.

ಅಂಚೆ ಮತ ಎಣಿಕೆ ಕಾರ್ಯಕ್ಕಾಗಿ 1 ಪ್ರತ್ಯೇಕ ಟೇಬಲ್ ನ್ನು ನಿಗದಿಪಡಿಸಲಾಗಿದ್ದು, ಸದರಿ ಟೇಬಲ್ ಗೆ ಒಬ್ಬ ಎಣಿಕೆ ಮೇಲ್ವಿಚಾರಕರು, ಎಣಿಕೆ ಸಹಾಯಕರು ಮತ್ತು ಮೈಕ್ರೋ ಅಬ್ಸರ್ವರ್‌ಅನ್ನು ನೇಮಕ ಮಾಡಲಾಗಿದೆ.

130 ಸೇವಾ ಮತದಾರರಿಗೆ ಅಂಚೆ ಮತ ಪತ್ರವನ್ನ ಇಟಿಪಿಬಿಎಸ್ ತಂತ್ರಾಂಶ ಮುಖಾಂತರ ರವಾನಿಸಲಾಗಿದ್ದು, ಸದರಿ ಮತಪತ್ರಗಳ ಎಣಿಕೆ ಕಾರ್ಯವನ್ನು ಮೊದಲು  ಕೈಗೊಳ್ಳಲಾಗುವುದು.

74 ಸಾಮಾನ್ಯ ಮತದಾರರಿಗೆ (ಕರ್ತವ್ಯ ನಿರತ ಚುನಾವಣಾ ಸಿಬ್ಬಂದಿಗೆ) ಅಂಚೆ ಮತ ಪತ್ರವನ್ನು ವಿತರಿಸಲಾಗಿದ್ದು, ಈವರೆಗೆ 74 ಅಂಚೆ ಮತ ಪತ್ರಗಳು ಸ್ವೀಕೃತವಾಗಿವೆ. ಇವಿಯಂ ಯಂತ್ರಗಳ ಮತ ಎಣಿಕೆ ಮುಗಿದ ನಂತರ 5 ಮತಗಟ್ಟೆಗಳ ವಿವಿಪ್ಯಾಟ್ ಯಂತ್ರದಲ್ಲಿರುವ ಸ್ಲಿಪ್‌ಗಳ ಎಣಿಕೆ ಕಾರ್ಯವನ್ನು ನಡೆಸಲಾಗುವುದು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 56 ಅಭ್ಯರ್ಥಿಗಳಿದ್ದು ಮತ ಎಣಿಕೆ ಕಾರ್ಯ ನಡೆಯಲಿದೆ.

ಮತ ಎಣಿಕೆ ಕೇಂದ್ರದಲ್ಲಿ ಚುನಾವಣಾ ವೀಕ್ಷಕರು, ಮಾಧ್ಯಮ ಪ್ರತಿನಿಧಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ.

ಮತ ಎಣಿಕೆ ಕಾರ್ಯವು ಎಂಕೋರ್ ತಂತ್ರಾಂಶ ಮುಖಾಂತರ ನಡೆಯಲಿದ್ದು, ಮತ ಎಣಿಕೆ ಕೇಂದ್ರದಲ್ಲಿ ಸೂಕ್ತ ಮೂಲಭೂತ ಸೌಕರ್ಯಗಳ ಏರ್ಪಾಟು ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಮಾಹಿತಿ ನೀಡಿದ್ದಾರೆ.

Ramesh Babu

Journalist

Recent Posts

ಸೋಲು – ಸಾವು – ಭಯ – ಬದುಕು……

"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…

11 hours ago

Understanding Cheap Emotional Support Animal Letters(6)

Cheap Emotional Support Animal Letter: Your Guide Understanding Cheap Emotional Support Animal Letters In recent…

13 hours ago

The Role of ESA Letters in Mental Health Therapy

Understanding ESA Letters for Mental Health Support The Role of ESA Letters in Mental Health…

13 hours ago

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್: ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ- ಸಿಎಂ ಸಿದ್ದರಾಮಯ್ಯ

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…

21 hours ago

ಭಕ್ತಿ ಭಾವ ಉತ್ಸವದಲ್ಲಿ ಅಸಭ್ಯ ನೃತ್ಯ: ಸಾರ್ವಜನಿಕರಿಂದ ತೀವ್ರ ಅಸಮಾಧಾನ

ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…

23 hours ago

ಏ.5ಕ್ಕೆ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ

ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…

1 day ago