ತಾಲ್ಲೂಕಿನ ಮದಗೊಂಡನಹಳ್ಳಿ ಗ್ರಾಮದ ಸರಹದ್ದಿನ ಅರಣ್ಯದ ಅಂಚಿನಲ್ಲಿ ಭಾನುವಾರ ಸಂಜೆ ಚಿರತೆ ಕಾಣಿಸಿಕೊಂಡಿದೆ. ಮದಗೊಂಡನಹಳ್ಳಿ ಗ್ರಾಮದ ಚಂದ್ರಪ್ಪ ಎಂಬುವವರಿಗೆ ಸೇರಿದ್ದ ಮೇಕೆ ಹಿಂಡಿನ ಮೇಲೆ ದಾಳಿ ನಡೆಸಿ ಒಂದು ಮೇಕೆಯನ್ನು ಹೊತ್ತೊಯ್ದಿದೆ. ಇದರಿಂದಾಗಿ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.
ಇದರಿಂದಾಗಿ ಸಂಜೆ ವೇಳೆ ರೈತರು ತೋಟಗಳ ಕಡೆಗೆ ಹೋಗಲು ಭಯಪಡುವಂತಾಗಿದೆ ಎಂದು ಮದಗೊಂಡನಹಳ್ಳಿ ಗ್ರಾಮದ ರೈತ ಮಂಜುನಾಥ್ ತಿಳಿಸಿದ್ದಾರೆ.
ಮದಗೊಂಡನಹಳ್ಳಿ ಗ್ರಾಮಕ್ಕೆ ಎರಡು ಕಿ.ಮೀ ದೂರದ ನರಸಯ್ಯನ ಅಗ್ರಹಾರ ಗ್ರಾಮದಲ್ಲಿ ಮೂರು ದಿನಗಳ ಹಿಂದೆಯಷ್ಟೇ ಚಿರತೆಯು ಮೇಕೆ ಹಿಂಡಿನ ಮೇಲೆ ದಾಳಿ ನಡೆಸಿ ಎರಡು ಮೇಕೆಗಳನ್ನು ಬಲಿಪಡೆದಿತ್ತು.
ಈಗ ಮದಗೊಂಡನಹಳ್ಳಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿರುವುದರಿಂದ ಚಿರತೆ ಈ ಭಾಗದಲ್ಲಿಯೇ ಸಂಚರಿಸುತ್ತಿದೆ ಆದ್ದರಿಂದ ಅರಣ್ಯ ಇಲಾಖೆ ಚಿರತೆಯನ್ನು ಸೆರೆ ಹಿಡಿಯಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…