ಮದಗೊಂಡನಹಳ್ಳಿ ಗ್ರಾಮದ ಸಿ.ರಾಮಯ್ಯ(75) ನಿಧನ

ದೊಡ್ಡಬಳ್ಳಾಪುರ ತಾಲೂಕಿನ ಮದಗೊಂಡನಹಳ್ಳಿ ಗ್ರಾಮದ ಖ್ಯಾತ ಶಿಕ್ಷಣ ತಜ್ಞ ಸಿ.ರಾಮಯ್ಯ(75) ಅವರು ನಿಧನರಾಗಿದ್ದಾರೆ.

ಸಿ.ರಾಮಯ್ಯ ಅವರು ದೊಡ್ಡಬಳ್ಳಾಪುರ ನಗರದ ಶಾರದ ಪ್ರೌಢಶಾಲೆಯ ಶಿಕ್ಷಕರಾಗಿ, ಚೇತನ ಶಿಕ್ಷಣ ಸಂಸ್ಥೆಯನ್ನು ಆರಂಭಿಸಿ, ಅರವಿಂದ ಶಾಲೆಯ ನಿರ್ದೇಶಕರಾಗಿ, ಮಾರಸಂದ್ರದ ಪಿಕೆಬಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರಾಗಿ, ಪ್ರಸ್ತುತ ವಿನಯಶ್ರೀ ವಿದ್ಯಾ ಸಂಸ್ಥೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ಶಿಕ್ಷಣ ಕ್ಷೇತ್ರದ ಸೇವೆಯಲ್ಲಿ ಅನೇಕರಿಗೆ ಉದ್ಯೋಗ ಅವಕಾಶ ನೀಡಿರುವ ರಾಮಯ್ಯ ಅವರಿಗೆ ಕರ್ನಾಟಕ ರಾಜ್ಯ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ದೊರೆತಿವೆ. ರಾಮಯ್ಯ ಅವರ ಶಿಷ್ಯರು ಬೆಂಗಳೂರಿನ ವಿವಿಧೆಡೆ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿದ್ದಾರೆ.

ಮೃತರು ಮಡದಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದು, ಮದಗೊಂಡನಹಳ್ಳಿಯಲ್ಲಿ ಅಂತಿಮ ಸಂಸ್ಕಾರಕ್ಕೆ ಸಿದ್ಧತೆ ನಡೆಸಲಾಗಿದೆ, ವಿದೇಶದಲ್ಲಿರುವ ಮಕ್ಕಳ ಬರುವಿಕೆಗೆ ನಿರೀಕ್ಷಿಸಲಾಗುತ್ತಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

2 hours ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

11 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

1 day ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

1 day ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

1 day ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

1 day ago