ಶಾಸಕ, ತಹಶೀಲ್ದಾರ್, ತಾ.ಪಂ ಇಒ, ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರ ಸಹಯೋಗದೊಂದಿಗೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕಾಡನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮದಗೊಂಡಹಳ್ಳಿ ಗ್ರಾಮದಲ್ಲಿಂದು ಜನಸ್ಪಂದನಾ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಧೀರಜ್ ಮುನಿರಾಜ್, ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ತಲುಪಿಸಲು ಸಲುವಾಗಿ ಜನಸ್ಪಂದನಾ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇದನ್ನು ಎಲ್ಲರೂ ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಜನಸ್ಪಂದನಾ ಕಾರ್ಯಕ್ರಮದಲ್ಲಿ ಆಯೂಷ್ಮಾನ್ ಕಾರ್ಡ್, ಕಾರ್ಮಿಕ ಇಲಾಕೆ ಗುರುತಿನ ಚೀಟಿ, ರೇಷನ್ ಕಾರ್ಡ್, ಹಿರಿಯ ನಾಗರಿಕರ ಗುರುತಿನ ಚೀಟಿ, ವಂಶವೃಕ್ಷಾ, ಇ- ಖಾತಾ, ಕಿಸಾನ್ ಕ್ರೆಡಿಟ್ ಕಾರ್ಡ್, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ, ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆ, ಪ್ರಧಾನ ಮಂತ್ರಿ ಜೀವನ್ ಜ್ಯೋತಿ ವಿಮಾ ಯೋಜನೆ, ಪಿಂಚಣಿ ಯೋಜನೆ, ಸಂಧ್ಯಾ ಸುರಕ್ಷಾ ಯೋಜನೆ, ಬ್ಯಾಂಕ್ ಖಾತೆ ತೆರೆಯುವ ಯೋಜನೆ, ಪೋಡಿ ಮುಕ್ತ ಆಂದೋಲನಕ್ಕಾಗಿ ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪಾನ್ ಕಾರ್ಡ್, ಹೆಬ್ಬೆಟ್ಟಿನ ಸ್ಕ್ಯಾನಿಂಗ್‌ಗಾಗಿ ಅರ್ಜಿದಾರರ ಸ್ವಯಂ ಹಾಜರಾತಿ, ಪಾಸ್ ಪೋರ್ಟ್ ಸೈಜ್ ಫೋಟೋ ಒದಗಿಸಬೇಕು ಎಂದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ಎಲ್ಲ ಅರ್ಹ ನಾಗರೀಕರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇನ್ನಿತರ ಸೇವೆಗಳಿಗೆ ಉಚಿತ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಹೇಳಿದರು.
ಮಧುರೆ ಹೋಬಳಿಗೆ ಕ್ರೀಡಾಂಗಣ ಮಂಜೂರು ಮಾಡಿಕೊಡಬೇಕು. ಸಮಯಕ್ಕೆ ಸರಿಯಾಗಿ ಬಸ್ ಗಳ ವ್ಯವಸ್ಥೆ ಕಲ್ಪಿಸಬೇಕು. ಬೋಕಿಪುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಇಬ್ಬರು ಶಿಕ್ಷಕರು, 19 ಮಂದಿ ಮಕ್ಕಳಿಗೆ ಕೇವಲ ಒಂದೇ ಕೊಠಡಿ ಇದೆ. ಆದ್ದರಿಂದ ಶಾಲಾಲೆಯ ಅಳಿವು ಉಳಿವುಗಾಗಿ ಶಾಲಾ ಕಟ್ಟಡ ನಿರ್ಮಾಣ ಸೇರಿದಂತೆ ಇನ್ನಿತರೆ ಮೂಲಭೂತ ಸೌಕರ್ಯಗಳನ್ನು ಎಲ್ಲಾ ಗ್ರಾಮಗಳಿಗೆ ಒದಗಿಸಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದರು.
ತಾಲೂಕಿನ ಎಲ್ಲಾ ಹೋಬಳಿಗಳಲ್ಲೂ ಪೋಡಿ ಮುಕ್ತ ಅಭಿಯಾನವನ್ನು ವಿಸ್ತರಿಸಬೇಕು. ರಾಗಿ ಖರೀದಿ ಮಾಡಿ ಇನ್ನೂ ರೈತರಿಗೆ ಹಣ ನೀಡಿಲ್ಲ. ಮನೆ, ದನಗಳ ಶೆಡ್ ನಿರ್ಮಾಣಕ್ಕೆ ಹೆಚ್ಚಿನ ಅನುದಾನ ನೀಡಬೇಕು ಎಂದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್, ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ್, ಕಾಡನೂರು ಗ್ರಾಮ ಪಂಚಾಯತಿ ಅಧ್ಯಕ್ಷ ಮನು ಎನ್ ಆರ್, ಉಪಾಧ್ಯಕ್ಷ ಮಂಗಳಮ್ಮ ಮುನಿರಾಜು, ಬಮೂಲ್ ನಿರ್ದೇಶಕ ಸತೀಶ್ ಕೆ ಆರ್, ತಾಲೂಕ್ ಪಂಚಾಯತಿ ಮಾಜಿ ಅಧ್ಯಕ್ಷ ಪ್ರಸನ್ನ ಕುಮಾರ್, ವಿ ಎಸ್ ಎಸ್ ಏನ್ ಮಾಜಿ ಅಧ್ಯಕ್ಷ ನಾಗರಾಜ್ ಬಾಬು, ಗ್ರಾಮ ಪಂಚಾಯತಿ ಸದಸ್ಯರುಗಳಾದ ಗೋಪಾಲಕೃಷ್ಣಯ್ಯ, ಸರೋಜ ಭೈರನ್ಮೇಗೌಡ, ಮಾಜಿ ಅಧ್ಯಕ್ಷ ಲಕ್ಕಪ್ಪ, ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೃಷ್ಣಮೂರ್ತಿ ಹಾಗೂ ತಾಲೂಕು ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
ದೊಡ್ಡಬಳ್ಳಾಪುರದ ಹಲವು ಭಾಗಗಳಲ್ಲಿ ಕೆಲವು ಕಾರ್ಖಾನೆಗಳು ಕಲುಷಿತ ಕೆಮಿಕಲ್ ತ್ಯಾಜ್ಯ, ಇನ್ನಿತರ ತ್ಯಾಜ್ಯವನ್ನು ಕೆರೆಗಳಿಗೆ, ಅರಣ್ಯ ಪ್ರದೇಶದಲ್ಲಿ ಸುರಿಯುತ್ತಿದ್ದಾರೆ. ಇದರಿಂದ…
ಕೂಸು ಇದ್ದ ಮನಿಗ ಬೀಸಣಿಕೆ ಯಾತಕ ? ಕೂಸು ಕಂದಯ್ಯ ಒಳ ಹೊರಗ ಆಡಿದರ ಬೀಸಣಿಕೆ ಗಾಳಿ ಸುಳಿದಾವ. ನಮ್ಮ…
ದೊಡ್ಡಬಳ್ಳಾಪುರ ತಾಲೂಕಿಗೆ ಮಂಜೂರಾಗಿದ್ದ ಜಿಲ್ಲಾಸ್ಪತ್ರೆಯನ್ನು ದೇವನಹಳ್ಳಿಗೆ ವರ್ಗಾವಣೆ ಮಾಡಲಾಗಿದೆ ಎಂಬ ಸುಳ್ಳು ಮಾಹಿತಿ ತಾಲೂಕಿನ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಇದಕ್ಕೆ…
ದೊಡ್ಡಬಳ್ಳಾಪುರ : ಬಡವರು ನಿರ್ಗತಿಕರಿಗೆ ಹಂಚಿಕೆ ಮಾಡಲಾದ ಆಶ್ರಯ ಮನೆಗಳು ಬಲಾಢ್ಯರ ಪಾಲಾಗಿವೆ, ಅಕ್ರಮವಾಗಿ ಮನೆಗಳ ಬೀಗ ಹೊಡೆದು ಅಶ್ರಯ…
ಇಂದು ವಿಧಾನಸೌಧ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಭೆಯ…
ಜಿಲ್ಲಾ ಬಾಲಕಾರ್ಮಿಕ ಯೋಜನೆಯಲ್ಲಿ ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಗೌರವಧನ ಆಧಾರದ ಮೇರೆಗೆ ನೇಮಕಾತಿ ಮಾಡಿಕೊಳ್ಳಲು…