Categories: ರಾಜ್ಯ

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸಂಭವಿಸಿವೆ.

ಮದುವೆ ಸಂಬಂಧಗಳು ಕೂಡಿಬರುತ್ತಿಲ್ಲ ಎಂಬ ಹತಾಶೆಯಿಂದ ರಾಜ್ಯದ ಇಬ್ಬರು ಯುವಕರು ನೇಣಿಗೆ ಶರಣಾಗಿದ್ದಾರೆ. ಚಿಕ್ಕಮಗಳೂರಿನ ಕಡೂರಿನಲ್ಲಿ ಶಿರಾ ಮೂಲದ ಕುಮಾರ್ (26) ಹಾಗೂ ವಿಜಯಪುರದ ನಿಡಗುಂದಿಯಲ್ಲಿ ಶಂಕರ್ ತಳವಾರ್ (25) ಎಂಬುವವರು ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳಾಗಿದ್ದಾರೆ.

ಪೋಷಕರು ಎಷ್ಟು ಹುಡುಕಿದರೂ ಸಂಬಂಧಗಳು ನಿಶ್ಚಯವಾಗದಿದ್ದಕ್ಕೆ ಮನನೊಂದ ಇಬ್ಬರು ಯುವಕರು ಮರಕ್ಕೆ ನೇಣು ಬಿಗಿದುಕೊಂಡು ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ…

ಘಟನೆ 1: ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ಕುಮಾರ್ (26). ಸಾವು. ಈತ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬ್ರಹ್ಮಸಂದ್ರ ಗ್ರಾಮದ ನಿವಾಸಿ.

ವಿವರ: ವೃತ್ತಿಯಲ್ಲಿ ಕುರಿಗಾಹಿಯಾಗಿದ್ದ ಕುಮಾರ್‌ಗೆ ಪೋಷಕರು ಕಳೆದ ಕೆಲವು ದಿನಗಳಿಂದ ಹೆಣ್ಣು ಹುಡುಕುತ್ತಿದ್ದರು. ಆದರೆ ಸತತ ಪ್ರಯತ್ನದ ಹೊರತಾಗಿಯೂ ಯಾವುದೇ ಸಂಬಂಧಗಳು ಕುದುರುತ್ತಿರಲಿಲ್ಲ. ಇದರಿಂದ ಮಾನಸಿಕವಾಗಿ ಕುಗ್ಗಿದ್ದ ಕುಮಾರ್, ಕಡೂರು ತಾಲೂಕಿನ ಬೋರಗಾನಹಳ್ಳಿ ಬಳಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಯಗಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆ 2: ವಿಜಯಪುರ ಜಿಲ್ಲೆಯ ನಿಡಗುಂದಿಯಲ್ಲಿ ಶಂಕರ್ ತಳವಾರ್ (25) ಸಾವು. ನಿಡಗುಂದಿ ತಾಲೂಕಿನ ಚಿಮ್ಮಲಗಿ ಗ್ರಾಮದ ನಿವಾಸಿ.

ವಿವರ: ಶಂಕರ್‌ಗೆ ಎರಡು ವರ್ಷಗಳ ಹಿಂದೆಯೇ ಮದುವೆ ನಿಶ್ಚಯವಾಗಿತ್ತು, ಆದರೆ ಕಾರಣಾಂತರಗಳಿಂದ ಆ ಸಂಬಂಧ ಮುರಿದುಬಿದ್ದಿತ್ತು. ಆನಂತರ ಎಷ್ಟೇ ಹುಡುಕಿದರೂ ಮದುವೆಗೆ ಹೆಣ್ಣು ಸಿಗುತ್ತಿರಲಿಲ್ಲ. ಜೀವನದಲ್ಲಿ ಜಿಗುಪ್ಸೆ ಹೊಂದಿದ್ದ ಈತ ಕುರಿ ಮೇಯಿಸಲು ಹೋದ ಸಂದರ್ಭದಲ್ಲಿ ಜಮೀನಿನ ಮರಕ್ಕೆ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾನೆ. ನಿಡಗುಂದಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Ramesh Babu

Journalist

Recent Posts

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

3 hours ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

4 hours ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

11 hours ago

ಲಾರಿ-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…

12 hours ago

ಹಸಿವಿನ ಔಷಧಿ ಮತ್ತು ಮತದಾನ…..

ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…

15 hours ago

ಶಾಲಾ ಆವರಣ ಸುತ್ತಮುತ್ತ ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳ ಮೇಲೆ ದಾಳಿ: 9 ಕೆಜಿ ತಂಬಾಕು ಉತ್ಪನ್ನ, ನಿರ್ಬಂಧಿತ ಏಕಬಳಕೆ ಪ್ಲಾಸ್ಟಿಕ್ ಪತ್ತೆ: ಅಂಗಡಿ ಮಾಲೀಕರಿಗೆ ನೋಟಿಸ್ ಜಾರಿ ಮಾಡಿ, ದಂಡ ವಿಧಿಸಿದ ಅಧಿಕಾರಿಗಳು

ದೊಡ್ಡಬಳ್ಳಾಪುರ ನಗರದ ಶಾಲಾ ಆವರಣದ ಸುತ್ತಮುತ್ತ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಏ.4ರಂದು ದೊಡ್ಡಬಳ್ಳಾಪುರ…

1 day ago