ಮದುವೆಯಾಗಲು ನಿರಾಕರಿಸಿದ ಕಾರಣಕ್ಕೆ ಗೆಳೆಯನ ಖಾಸಗಿ ಭಾಗವನ್ನು ಕತ್ತರಿಸಿದ ಯುವತಿ

ಮದುವೆ ಆಗಲು ನಿರಾಕರಿಸಿದ್ದಕ್ಕೆ ವೈದ್ಯೆಯೊಬ್ಬರು ಗೆಳೆಯನ ಖಾಸಗಿ ಅಂಗ ಕತ್ತರಿಸಿದ ಘಟನೆ ಬಿಹಾರದ ಸರನ್ ಜಿಲ್ಲೆಯ ಖಾಸಗಿ ನರ್ಸಿಂಗ್ ಹೋಮ್​​ನಲ್ಲಿ ನಡೆದಿದೆ. ವೈದ್ಯೆಯನ್ನು ಲೈಂಗಿಕವಾಗಿ ಬಳಸಿ ಕೈ ಕೊಟ್ಟಿದ್ದ ಬಾಯ್ ಫ್ರೆಂಡ್ ಎನ್ನಲಾಗಿದೆ. ಸಿಟ್ಟಿಗೆದ್ದ ವೈದ್ಯ ಚಾಕುವಿನಿಂದ ಗೆಳೆಯನ ಖಾಸಗಿ ಅಂಗವನ್ನೇ ಕತ್ತರಿಸಿದ್ದಾರೆ.

ಸದ್ಯ ಕೊಲೆ ಯತ್ನದ ಆರೋಪದ ಮೇಲೆ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ.

ಮಧುರಾ ಬ್ಲಾಕ್‌ನ ವಾರ್ಡ್ ನಂ. 12 ರ ಕೌನ್ಸಿಲರ್ ಸಂತ್ರಸ್ತ ಪ್ರಸ್ತುತ ಪಾಟ್ನಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ (PMCH) ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಜೋಡಿ ಕಳೆದ ಐದು ವರ್ಷಗಳಿಂದ ಪರಸ್ಪರ ಸಂಬಂಧ ಹೊಂದಿದ್ದರು, ಆದರೆ ಯುವಕನಿಗೆ ಗೆಳತಿಯನ್ನು  ಮದುವೆಯಾಗಲು ಇಷ್ಟವಿರಲಿಲ್ಲ. ಅವಳು ಅಂತಿಮವಾಗಿ ನ್ಯಾಯಾಲಯದಲ್ಲಿ ಮದುವೆಗೆ ಒಪ್ಪಿಕೊಳ್ಳುವಂತೆ ಮನವೊಲಿಸಿದಳು, ಆದರೆ ಅವನು ನಿಗದಿತ ದಿನದಂದು ಹಾಜರಾಗಲಿಲ್ಲ.

ನರ್ಸಿಂಗ್ ಹೋಮ್‌ಗೆ ಬಾಯ್ ಫ್ರೆಂಡ್ ಕರೆದ ವೈದ್ಯೆ ಅನಸ್ತೇಷಿಯಾ ಕೊಟ್ಟು ಖಾಸಗಿ ಅಂಗ ಕತ್ತರಿಸಿದ್ದಾರೆ. ಬಳಿಕ ಬಾಯ್ ಫ್ರೆಂಡ್‌ಗೆ ತೀವ್ರ ರಕ್ತಸ್ರಾವ ಆಗಿದ್ದು, ಪಾಟ್ನಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಆತನ ಕೂಗು ಕೇಳಿದ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಅವರು ಹಾಸಿಗೆಯ ಮೇಲೆ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Ramesh Babu

Journalist

Recent Posts

ರೈತರಿಗೆ ನೋವಾಗುವ ಯಾವುದೇ ತೀರ್ಮಾನ ಇಲ್ಲ; ಕಾವೇರಿ ಬಿಕ್ಕಟ್ಟಿಗೆ ಮೇಕೆದಾಟು ಒಂದೇ ಶಾಶ್ವತ ಪರಿಹಾರ- ಸಚಿವ ಚಲುವರಾಯಸ್ವಾಮಿ

ರೈತರಿಗೆ ನೋವಾಗುವ ಯಾವುದೇ ತೀರ್ಮಾನಗಳನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ. ರೈತರ ಸಹಕಾರವಿದ್ದರೆ, ಅವರಿಗೆ ಅಗತ್ಯವಿರುವ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ ಎಂದು…

3 hours ago

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

5 hours ago

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

5 hours ago

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

12 hours ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

23 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

1 day ago