ಮದುವೆಯಾಗಲು ಹೆಣ್ಣು ಸಿಕ್ಕಿಲ್ಲವೆಂದು ಕುಡಿದ ಮತ್ತಿನಲ್ಲಿ ಮಸಣಶೆಟ್ಟಿ ಎಂಬ ಯುವಕ ಹೈಟೆನ್ಷನ್ ವಿದ್ಯುತ್ ಕಂಬ ಏರಿ ಪ್ರಾಣಬಿಟ್ಟ ದಾರುಣ ಘಟನೆ ಚಾಮರಾಜನಗರ ಕೊಳ್ಳೇಗಾಲ ತಾಲೂಕಿನ ಟಿ.ಸಿ.ಹುಂಡಿ ಬಳಿ ನಡೆದಿದೆ.
ವಿದ್ಯುತ್ ಕಂಬದಿಂದ ಇಳಿಯುವಾಗ ತಂತಿ ತಗುಲಿ ಮಸಣಶೆಟ್ಟಿ ಸಾವಿಗೀಡಾಗಿದ್ದಾನೆ. ವಿದ್ಯುತ್ ಕಂಬ ಏರಿದ್ದನ್ನು ನೋಡಿ ಅಲ್ಲಿಗೆ ಧಾವಿಸಿದ್ದ ಸ್ಥಳೀಯರು ಕಂಬದಿಂದ ಕೆಳಗಿಳಿಯುವಂತೆ ಒತ್ತಾಯಿಸಿದ್ದಾರೆ. ಆಗ ಯುವಕ ಇಳಿಯಲು ಮುಂದಾಗಿದ್ದು, ಈ ವೇಳೆ ವಿದ್ಯುತ್ ತಂತಿ ತಗುಲಿ ಕಂಬದಲ್ಲೇ ಪ್ರಾಣಬಿಟ್ಟಿದ್ದಾನೆ.
ಮೃತ ಮಸಣಶೆಟ್ಟಿಯದ್ದು ಸಣ್ಣ ಮನೆ ಹಾಗೂ ಆಸ್ತಿ ಜಮೀನು ಇಲ್ಲ ಎಂಬ ಕಾರಣ ಎರಡು ಬಾರಿ ನೋಡಿ ಬಂದ ಹೆಣ್ಣಿನ ಕಡೆಯವರು ತಿರಸ್ಕರಿಸಿದ್ದರು. ಇದರಿಂದ ಮಾನಸಿಕ ಖಿನ್ನತೆಗೆ ಒಳಾಗಿದ್ದ ಮಸಣಶೆಟ್ಟಿ ಕುಡಿತದ ದಾಸನಾಗಿದ್ದ ಎನ್ನಲಾಗಿದೆ. ಇಂದು ಬೆಳಗ್ಗೆ ಹೈಟೆನ್ಷನ್ ಕಂಬ ಏರಿ ತಾಯಿಯ ಕಣ್ಣೆದುರೇ ದಾರುಣವಾಗಿ ಮೃತಪಟ್ಟಿದ್ದಾನೆ.
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…