Categories: Crime

ಮದುವೆಯಾದ 45 ದಿನಕ್ಕೆ ಲವರ್​​ ಜೊತೆ ಯುವತಿ ಎಸ್ಕೇಪ್​​: ಪತಿ, ಸೋದರ ಮಾವ ಸೂಸೈಡ್

 

ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು ಡೆತ್ ನೋಟ್ ಬರೆದಿದ್ದಾರೆ. ಇತ್ತ, ಸೊಸೆ ಬೇರೊಬ್ಬನ ಜೊತೆ ಓಡಿಹೋದ ಅವಮಾನ ತಾಳಲಾರದೆ ಮುಂದೆ ನಿಂತು ಮದುವೆ ಮಾಡಿಸಿದ್ದ ಆಕೆಯ ಸಹೋದರ ಮಾವ ರುದ್ರೇಶ್ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ.

ದಾವಣಗೆರೆ, ಜನವರಿ 27: ಮದುವೆಯಾದ 45 ದಿನಕ್ಕೆ ನವವಿವಾಹಿತ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ದಾವಣಗೆರೆ ತಾಲೂಕಿನ ಗುಮ್ಮನೂರಿನಲ್ಲಿ ನಡೆದಿದೆ. ಹರೀಶ್(30) ಮೃತ ದುರ್ದೈವಿಯಾಗಿದ್ದು, ನನ್ನ ಸಾವಿಗೆ ಪತ್ನಿಯ ವರ್ತನೆಯ ಕಾರಣ ಎಂದು 2 ಪುಟಗಳ ಡೆತ್​ನೋಟ್​ ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ. ದುರ್ದೈವ ಅಂದರೆ ಹರೀಶ್​ ಸಾವಿನ ಬೆನ್ನಲ್ಲೇ ಮುಂದೆ ನಿಂತು ಮದುವೆ ಮಾಡಿಸಿದ ತಪ್ಪಿಗೆ ಯುವತಿಯ ಸೋದರ ಮಾವ ರುದ್ರೇಶ್ ಸಹ ಅತ್ಮಹತ್ಯೆಗೆ ಶರಣಾಗಿದ್ದಾರೆ.

ಹರೀಶ್​​ ಡೆತ್​​ನೋಟ್​​ನಲ್ಲಿ ಏನಿದೆ..?

ಪತ್ನಿ ಅನಗತ್ಯ ಕಿರುಕುಳ ನೀಡುತ್ತಿದ್ದಾಳೆ. ಬೇರೆ ಯುವಕನೊಂದಿಗೆ ಓಡಿ ಹೋಗಿ ನಾನು ಹಿಂಸೆ ನೀಡುತ್ತಿರುವೆ ಎಂದು ಆರೋಪಿಸಿದ್ದಾಳೆ. ಪತ್ನಿ ಹಾಗೂ ಸಂಬಂಧಿಕರಿಂದ ತನಗೆ ಜೀವ ಬೆದರಿಕೆ ಇತ್ತು. ಇದೇ ಕಾರಣಕ್ಕೆ ಬೇಸತ್ತು ಆತ್ಮಹತ್ಯೆ ಶರಣಾಗುತ್ತಿದ್ದೇನೆ ಎಂದು ಡೆತ್ ನೋಟ್​​ನಲ್ಲಿ ಹರೀಶ್​​ ಉಲ್ಲೇಖಿಸಿದ್ದಾರೆ.

ಪತ್ನಿ ಹಾಗೂ ಆಕೆ ತಂದೆ, ತಾಯಿ, ಚಿಕ್ಕಪ್ಪನಿಗೆ ಜೀವಾವಧಿ ಶಿಕ್ಷೆ ಆಗಬೇಕು. ಆಸ್ತಿಗಿಂತ ಮಾನ ಮುಖ್ಯವಾಗಿರುವ ಕಾರಣ ಈ ನಿರ್ಧಾರ ಕೈಗೊಳ್ಳುತ್ತಿದ್ದೇನೆ. ತನ್ನನ್ನು ಕ್ಷಮಿಸಿ ಎಂದು ಕುಟುಂಬ ಸದಸ್ಯರಿಗೆ ಹರೀಶ್​​ ಕ್ಷಮೆಯನ್ನೂ ಕೇಳಿದ್ದು, ಪತ್ನಿಯ ಕಡೆಯವರು ನೀಡಿದ ಹಿಂಸೆಗೆ ತನ್ನ ತಂದೆ ತಾಯಿ ಮನೆ ಬಿಡುವ ಯೋಚನೆ ಕೂಡ ಮಾಡಿದ್ದರು ಎಂದು ಆರೋಪಿಸಿದ್ದಾರೆ. ಸ್ಥಳಕ್ಕೆ ದಾವಣಗೆರೆ ಗ್ರಾಮಾಂತರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಇನ್ನು ಇತ್ತ ಹರೀಶ್​​ ಆತ್ಮಹತ್ಯೆಗೆ ಶರಣಾದ ವಿಚಾರ ತಿಳಿಯುತ್ತಿದ್ದಂತೆ ಮುಂದೆ ನಿಂತು ಇವರ ಮದುವೆ ಮಾಡಿಸಿದ್ದ ಯುವತಿಯ ಸಹೋದರ ಮಾವ ರುದ್ರೇಶ್ ಕೂಡ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ರುದ್ರೇಶ್​​ ದಾವಣಗೆರೆಯ ಅನೆಕೊಂಡದ ನಿವಾಸಿಯಾಗಿದ್ದು, 4 ದಿನದ ಹಿಂದೆ ಕುಮಾರ್​ ಎಂಬಾತನ ಜತೆ ಹರೀಶ್ ಪತ್ನಿ ಓಡಿಹೋಗಿದ್ದಳು. ಇದರಿಂದ ಅವಮಾನ ತಾಳಲಾರದೆ ರುದ್ರೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಒಟ್ಟಿನಲ್ಲಿ ಯುವತಿಯ ಹುಚ್ಚಾಟಕ್ಕೆ ಇಬ್ಬರ ಪ್ರಾಣ ಹೋಗಿದೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ.

Ramesh Babu

Journalist

Recent Posts

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

48 minutes ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

1 hour ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

3 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

7 hours ago

ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯನವರದ್ದು ಕುಮಾರಸ್ವಾಮಿ ತರಹದ ಚರಿತ್ರೆಯಲ್ಲ: ಎಚ್.ಡಿ.ಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ತೀವ್ರ ವಾಗ್ದಾಳಿ

ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…

19 hours ago

ರಾಜಾನುಕುಂಟೆ ಬಳಿ ರೈಲು ಬೋಗಿಗಳಿಗೆ ಬೆಂಕಿ: ಎರಡು ಬೋಗಿಗಳು ಸುಟ್ಟು ಭಸ್ಮ

ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…

1 day ago