ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದ ಪಾಪಿ ಪುತ್ರ

ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ.

ಗಂಗಮ್ಮ (65), ಕೊಲೆಯಾದ ಮಹಿಳೆ.

ಉಮಾಶಂಕರ (40) ತಾಯಿಯನ್ನು ಬರ್ಬರವಾಗಿ ಕೊಲೆ ಮಾಡಿದ ಪಾಪಿ ಪುತ್ರ.

ಉಮಾಶಂಕರ ಕಳೆದ‌ ಎರಡು ವರ್ಷದ‌ ಹಿಂದೆ ಅಪಘಾತವಾಗಿ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ. ಕಳೆದ ಒಂದು ವರ್ಷದ ಹಿಂದೆ ಕುಂಭಮೇಳಕ್ಕೆ ತೆರಳಿ ವಾಪಾಸ್ ಆಗುವಾಗ ಅಪಘಾತದಲ್ಲಿ ಉಮಾಶಂಕರ್ ತಲೆಗೆ ಪೆಟ್ಟು ಬಿದ್ದಿತ್ತು. ಒಮ್ಮೊಮ್ಮೆ ಬುದ್ಧಿ ಭ್ರಮಣೆಯಾದವನಂತೆ ವರ್ತಿಸುತ್ತಿದ್ದ.

ಜೊತೆಗೆ ಪದೇ ಪದೇ ಮದುವೆ ಮಾಡಿಸುವಂತೆ ತಾಯಿ ಜೊತೆ ಜಗಳವಾಡುತ್ತಿದ್ದ. ಮಾ.26 ರಂದು ಮನೆಯಲ್ಲಿ ತಾಯಿ ಗಂಗಮ್ಮನ ಜೊತೆ ಮದುವೆ ವಿಚಾರಕ್ಕೆ ಜಗಳ ತೆಗೆದಿದ್ದನಂತೆ. ಮೊದಲು ಕೈಯಿಂದ ತಾಯಿ ಗಂಗಮ್ಮನ ತಲೆಗೆ ಬಲವಾಗಿ ಹೊಡೆದಿದ್ದಾನೆ. ಹೊಡೆತ ತಾಳಲಾರದೆ ತಾಯಿ ಗಂಗಮ್ಮ ಮನೆಯಲ್ಲಿಯೇ ಕುಸಿದು ಬಿದ್ದಿದ್ದಾರೆ. ನಂತರ ತಲೆ ಮೇಲೆ ಕಲ್ಲು ಎತ್ತಿಹಾಕಿದ್ದಾನೆ.

ತೀವ್ರವಾಗಿ ಗಾಯಗೊಂಡು ಹಿಮ್ಸ್‌ನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಗಮ್ಮ, ಚಿಕಿತ್ಸೆ ಫಲಕಾರಿಯಾಗದೆ ಮಾ.30ರ ಮಧ್ಯರಾತ್ರಿ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.

ಶ್ರವಣಬೆಳಗೊಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…

Leave a Reply

Your email address will not be published. Required fields are marked *

error: Content is protected !!