ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ.
ಗಂಗಮ್ಮ (65), ಕೊಲೆಯಾದ ಮಹಿಳೆ.
ಉಮಾಶಂಕರ (40) ತಾಯಿಯನ್ನು ಬರ್ಬರವಾಗಿ ಕೊಲೆ ಮಾಡಿದ ಪಾಪಿ ಪುತ್ರ.
ಉಮಾಶಂಕರ ಕಳೆದ ಎರಡು ವರ್ಷದ ಹಿಂದೆ ಅಪಘಾತವಾಗಿ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ. ಕಳೆದ ಒಂದು ವರ್ಷದ ಹಿಂದೆ ಕುಂಭಮೇಳಕ್ಕೆ ತೆರಳಿ ವಾಪಾಸ್ ಆಗುವಾಗ ಅಪಘಾತದಲ್ಲಿ ಉಮಾಶಂಕರ್ ತಲೆಗೆ ಪೆಟ್ಟು ಬಿದ್ದಿತ್ತು. ಒಮ್ಮೊಮ್ಮೆ ಬುದ್ಧಿ ಭ್ರಮಣೆಯಾದವನಂತೆ ವರ್ತಿಸುತ್ತಿದ್ದ.
ಜೊತೆಗೆ ಪದೇ ಪದೇ ಮದುವೆ ಮಾಡಿಸುವಂತೆ ತಾಯಿ ಜೊತೆ ಜಗಳವಾಡುತ್ತಿದ್ದ. ಮಾ.26 ರಂದು ಮನೆಯಲ್ಲಿ ತಾಯಿ ಗಂಗಮ್ಮನ ಜೊತೆ ಮದುವೆ ವಿಚಾರಕ್ಕೆ ಜಗಳ ತೆಗೆದಿದ್ದನಂತೆ. ಮೊದಲು ಕೈಯಿಂದ ತಾಯಿ ಗಂಗಮ್ಮನ ತಲೆಗೆ ಬಲವಾಗಿ ಹೊಡೆದಿದ್ದಾನೆ. ಹೊಡೆತ ತಾಳಲಾರದೆ ತಾಯಿ ಗಂಗಮ್ಮ ಮನೆಯಲ್ಲಿಯೇ ಕುಸಿದು ಬಿದ್ದಿದ್ದಾರೆ. ನಂತರ ತಲೆ ಮೇಲೆ ಕಲ್ಲು ಎತ್ತಿಹಾಕಿದ್ದಾನೆ.
ತೀವ್ರವಾಗಿ ಗಾಯಗೊಂಡು ಹಿಮ್ಸ್‌ನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಗಮ್ಮ, ಚಿಕಿತ್ಸೆ ಫಲಕಾರಿಯಾಗದೆ ಮಾ.30ರ ಮಧ್ಯರಾತ್ರಿ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.
ಶ್ರವಣಬೆಳಗೊಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…