ಬೆಂಗಳೂರು: ಸಿಲಿಕಾನ್ ಸಿಟಿಯ ವರ್ತೂರಿನಲ್ಲಿ ಭಯಾನಕ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪ್ರೀತಿಯ ಹೆಸರಿನಲ್ಲಿ ಮದುವೆಯ ಸತ್ಯವನ್ನು ಮುಚ್ಚಿಟ್ಟು, ಲಿವ್-ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವತಿಯನ್ನು ಆಕೆಯ ಗೆಳೆಯನೇ ಅತ್ಯಂತ ಕ್ರೂರವಾಗಿ ಹತ್ಯೆ ಮಾಡಿದ್ದಾನೆ. ಕೊಡಗು ಮೂಲದ 23 ವರ್ಷದ ರಂಜಿತಾ ಈ ಘಟನೆಯಲ್ಲಿ ಮೃತಪಟ್ಟ ದುರ್ದೈವಿ.
ಪ್ರೀತಿಯ ಹೆಸರಿನಲ್ಲಿ ವಂಚನೆ
ಕೊಡಗಿನಿಂದ ಕೆಲಸ ಅರಸಿ ಬೆಂಗಳೂರಿಗೆ ಬಂದಿದ್ದ ರಂಜಿತಾಳಿಗೆ, ಅಯ್ಯಪ್ಪ ಎಂಬಾತ ಪರಿಚಯವಾಗಿತ್ತು. ಬಳಿಕ ಇಬ್ಬರ ಪ್ರೀತಿಯಾಗಿತ್ತು. ಕಳೆದ ಕೆಲವು ಸಮಯದಿಂದ ಇವರಿಬ್ಬರು ವರ್ತೂರಿನ ಬಾಡಿಗೆ ಮನೆಯೊಂದರಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದರು. ಅಯ್ಯಪ್ಪ ತನ್ನನ್ನು ಮದುವೆಯಾಗುತ್ತಾನೆ ಎಂದು ರಂಜಿತಾ ನಂಬಿದ್ದರು. ಆದರೆ ಅಯ್ಯಪ್ಪನಿಗೆ ಈಗಾಗಲೇ ಮದುವೆಯಾಗಿತ್ತು ಎಂಬ ಸತ್ಯ ರಂಜಿತಾಳಿಗೆ ತಿಳಿದಿರಲಿಲ್ಲ.
ಅಯ್ಯಪ್ಪನಿಗೆ ಈ ಮೊದಲೇ ಮದುವೆಯಾಗಿರುವ ವಿಷಯ ರಂಜಿತಾಳಿಗೆ ಇತ್ತೀಚೆಗೆ ತಿಳಿದುಬಂದಿದೆ. ಈ ವಿಚಾರವಾಗಿ ಇಬ್ಬರ ನಡುವೆ ಮನೆಯಲ್ಲಿ ದೊಡ್ಡ ಮಟ್ಟದ ಗಲಾಟೆ ನಡೆದಿದೆ. ನನಗೆ ಮೋಸ ಮಾಡಿ ಯಾಕೆ ನನ್ನ ಜೊತೆ ಇದ್ದೀಯಾ ? ಎಂದು ರಂಜಿತಾ ಪ್ರಶ್ನಿಸಿದಾಗ ಇಬ್ಬರ ನಡುವಿನ ವಾಗ್ವಾದ ತಾರಕಕ್ಕೇರಿದೆ.
ಕತ್ತು ಬಿಗಿದು ಭೀಕರ ಹತ್ಯೆ
ಜಗಳ ವಿಕೋಪಕ್ಕೆ ಹೋದಾಗ ಆಕ್ರೋಶಗೊಂಡ ಅಯ್ಯಪ್ಪ, ಮನೆಯಲ್ಲಿದ್ದ ಎಲೆಕ್ಟ್ರಿಕಲ್ ವೈಯರ್‌ನಿಂದ ರಂಜಿತಾಳ ಕತ್ತನ್ನು ಬಿಗಿದಿದ್ದಾನೆ. ಯುವತಿ ಪ್ರಾಣ ಉಳಿಸಿಕೊಳ್ಳಲು ಒದ್ದಾಡಿದರೂ ಆರೋಪಿ ವೈಯರ್ ಬಿಗಿದು ಆಕೆಯನ್ನ ಕ್ರೂರವಾಗಿ ಕೊಲೆ ಮಾಡಿದ್ದಾನೆ. ಘಟನೆ ನಡೆದ ನಂತರ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾನೆ.
ಘಟನೆಯ ಬಗ್ಗೆ ಮಾಹಿತಿ ತಿಳಿದ ಕೂಡಲೇ ವರ್ತೂರು ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತ ರಂಜಿತಾಳ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಸದ್ಯ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿ ಅಯ್ಯಪ್ಪನನ್ನು ಬಂಧಿಸಿದ್ದಾರೆ.
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಮುಸ್ಲಿಂ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…