ಮದುವೆ ಸಂಭ್ರಮದ ನಡುವೆ ಬೈಕ್ ಗೆ ಬೆಂಕಿ ಇಟ್ಟ ಕಿಡಿಗೇಡಿಗಳು

ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದಾರೆ.

ರಾತ್ರಿ ಸುಮಾರು 1 ಗಂಟೆಯ ಸಮಯದಲ್ಲಿ ಈ ಕೃತ್ಯ ನಡೆದಿದ್ದು, ರಸ್ತೆ ಪಕ್ಕದಲ್ಲೇ ಇರುವ ಕೃಷ್ಣಪ್ಪ ಎಂಬುವವರ ಮನೆಯ ಮುಂದೆ ನಿಲ್ಲಿಸಿದ್ದ ಮೂರು ಬೈಕ್ ಹಾಗೂ ಒಂದು ಟ್ರಾಕ್ಟರ್ ಸಂಪೂರ್ಣ ಬೆಂಕಿಗಾಹುತಿಯಾಗಿವೆ. ಅಷ್ಟೇ ಅಲ್ಲದೆ, ಕಿಡಿಗೇಡಿಗಳು ಅಲ್ಲಿಯೇ ಇದ್ದ ಇನೋವಾ ಕಾರಿನ ಮೇಲೂ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ್ದಾರೆ. ಅದೃಷ್ಟವಶಾತ್ ಕಾರು ಹೆಚ್ಚಿನ ಅಪಾಯದಿಂದ ಪಾರಾಗಿದೆ.

ಈ ಘಟನೆಯಿಂದ ಮದುವೆ ಮನೆಯವರಲ್ಲಿ ಆತಂಕ ಮೂಡಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ನಂದಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಪೊಲೀಸರು ಕಿಡಿಗೇಡಿಗಳ ಪತ್ತೆಗಾಗಿ ತನಿಖೆ ಚುರುಕುಗೊಳಿಸಿದ್ದಾರೆ.

Ramesh Babu

Journalist

Recent Posts

ವಿಡಿಯೋ ಕಾಲ್ ಮಾಡಿ ನೇಣಿಗೆ ಶರಣಾದ ವ್ಯಕ್ತಿ

ದೊಡ್ಡಬಳ್ಳಾಪುರ: ಮನೆಯವರಿಗೆ ವಿಡಿಯೋ ಕಾಲ್ ಮಾಡಿದ ಬಳಿಕ ಉತ್ತರ ಪ್ರದೇಶ ಮೂಲದ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ…

7 hours ago

ಮಣ್ಣಿನಡಿ ಹುದುಗಿಹೋಗುತ್ತಿದ್ದ ವಿಜಯನಗರ ಕಾಲದ 6 ವೀರಗಲ್ಲುಗಳಿಗೆ ಮರುಜೀವ: ರಸ್ತೆ ವಿಸ್ತರಣೆ ವೇಳೆ ಪತ್ತೆ; ಪುರಾತತ್ವ ಇಲಾಖೆ ತ್ವರಿತ ಕಾರ್ಯಾಚರಣೆ

ದೊಡ್ಡಬಳ್ಳಾಪುರ: ರಸ್ತೆ ವಿಸ್ತರಣೆ ಕಾಮಗಾರಿ ವೇಳೆ ಮಣ್ಣಿನಡಿ ಹುದುಗಿಹೋಗುವ ಅಪಾಯದಲ್ಲಿದ್ದ ವಿಜಯನಗರ ಅರಸರ ಕಾಲದ ಆರು ಐತಿಹಾಸಿಕ ವೀರಗಲ್ಲುಗಳನ್ನು ಪುರಾತತ್ವ…

7 hours ago

ಅರಳುಮಲ್ಲಿಗೆ ಕ್ಷೇತ್ರದಿಂದ ಸ್ಪರ್ಧೆಗೆ ಕೃಷ್ಣಪ್ಪ ಒಲವು

ಮುಂಬರುವ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳ ಹಿನ್ನೆಲೆಯಲ್ಲಿ ಕಾರ್ಯಕರ್ತರನ್ನು ಒಗ್ಗೂಡಿಸಿ ಪಕ್ಷ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು…

8 hours ago

ಮಳೆ ಕೊರತೆ, ಟೊಮೆಟೊ ದರ ಕುಸಿತ: ಸಾಲದ ಸುಳಿಯಲ್ಲಿ ರೈತ!

ದೊಡ್ಡಬಳ್ಳಾಪುರ: ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿರುವ ಬೆನ್ನಲ್ಲೇ, ಮಾರುಕಟ್ಟೆಯಲ್ಲಿ ಟೊಮೆಟೊ ದರ ಕುಸಿತವೂ ರೈತರನ್ನು ಕಂಗಾಲಾಗಿಸಿದೆ. ಬೆಳೆ…

12 hours ago

ಸಿನಿಮಾ ನೋಡಲು ಹೋದ ಕುಟುಂಬದ ಮನೆಗೆ ಕನ್ನ; 130 ಗ್ರಾಂ ಚಿನ್ನದೊಂದಿಗೆ ಸಿಕ್ಕಿಬಿದ್ದ ಕಳ್ಳ!

ಮನೆಯವರೆಲ್ಲರೂ ಸಿನಿಮಾ ನೋಡಲು ತೆರಳಿದ್ದ ವೇಳೆ ಮನೆಗೆ ನುಗ್ಗಿ 130 ಗ್ರಾಂ ಚಿನ್ನ ಕಳವು ಮಾಡಿದ್ದ ಆರೋಪಿಯೊಬ್ಬ, ಮನೆ ಮಾಲೀಕನ…

13 hours ago

ಡ್ರಗ್ಸ್ ಮುಕ್ತ ಭಾರತ, ವ್ಯಸನ ಮುಕ್ತ ಕರ್ನಾಟಕ……..

ಡ್ರಗ್ಸ್ ಮುಕ್ತ ಭಾರತ, ವ್ಯಸನ ಮುಕ್ತ ಕರ್ನಾಟಕ........ ಹೀಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಘೋಷಿಸಿವೆ. ಇನ್ನು ಕೆಲವೇ ವರ್ಷಗಳಲ್ಲಿ…

19 hours ago