21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ ಪಡೆದ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಈ ಅಧಿಸೂಚನೆಯ ಉದ್ದೇಶ ಅಪ್ರಾಪ್ತ ವಯಸ್ಸಿನವರು ಮದ್ಯಪಾನ ಮಾಡುವುದನ್ನು ತಡೆಯುವುದು, ಯುವಜನರನ್ನು ಇಂತಹ ದುಶ್ಚಟಗಳಿಂದ ರಕ್ಷಿಸುವುದು ಮತ್ತು ರಾಜ್ಯದಲ್ಲಿ ಜವಾಬ್ದಾರಿಯುತ ಮದ್ಯ ಮಾರಾಟ ಹಾಗೂ ಸೇವನೆಯ ಗುರಿಯನ್ನು ಹೊಂದಿದೆ ಎಂದು ತಿಳಿಸಿದ್ದಾರೆ.
ಮದ್ಯ ಮಾರಾಟ ಮಾಡುವ ಸಂಸ್ಥೆಗಳು ಪ್ರತಿಯೊಬ್ಬರ ಗುರುತಿನ ಚೀಟಿ (ID) ಪರಿಶೀಲಿಸಿ ಸಂಗ್ರಹಿಸಬೇಕೆಂಬ ನಿಯಮ ಇಲ್ಲ. ಆದರೆ 21 ವರ್ಷಕ್ಕಿಂತ ಕಡಿಮೆ ವಯಸ್ಸಿನಂತೆ ಕಾಣುವವರ ಗುರುತಿನ ಚೀಟಿ ಪರಿಶೀಲಿಸಿ, ಅವರು ವಯಸ್ಕರೊಂದಿಗೆ ಬಂದಿದ್ದರೂ ಮದ್ಯ ಸೇವನೆಗೆ ಅವಕಾಶ ನೀಡಬಾರದು ಎಂದು ಸೂಚಿಸಿದ್ದಾರೆ.
ತಮ್ಮ ಮಾರಾಟ ಮತ್ತು ಸೇವನೆಯ ಸ್ಥಳದಲ್ಲಿ ಹದಿಹರೆಯದವರು ಮದ್ಯಪಾನ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಸಂಸ್ಥೆಗಳು ಖಚಿತಪಡಿಸಿಕೊಳ್ಳಬೇಕು. ಯಾವುದೇ ನಿರ್ಲಕ್ಷ್ಯ ಕಂಡುಬಂದರೆ ಗಂಭೀರ ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು ಗ್ರಾಮಾಂತರ: ಯಾವುದೇ ನದಿ ಮೂಲವಿಲ್ಲದ ಬಯಲುಸೀಮೆ ಪ್ರದೇಶವಾಗಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲದ ಮೇಲಿನ ಅವಲಂಬನೆ ವರ್ಷದಿಂದ ವರ್ಷಕ್ಕೆ…
ದೊಡ್ಡಬಳ್ಳಾಪುರ: ಕನ್ನಡ ಸಾಹಿತ್ಯ ಪರಿಷತ್ತನ್ನು ಕನ್ನಡಿಗರ ಸ್ವಾಭಿಮಾನದ ಗೌರವ ಸಂಸ್ಥೆಯಾಗಿ ರೂಪಿಸುವುದರ ಜೊತೆಗೆ, ಪರಿಷತ್ತಿಗೆ ಕಾಯಕಲ್ಪ ನೀಡುವ ಉದ್ದೇಶ ಹೊಂದಲಾಗಿದೆ…
ಬೆಂಗಳೂರು ಗ್ರಾಮಾಂತರ: ಪಡಿತರ ಚೀಟಿದಾರರ ಇ-ಕೆವೈಸಿ ಪ್ರಕ್ರಿಯೆಗೆ ಸರ್ಕಾರ ಅ.20ರವರೆಗೆ ಗಡುವು ವಿಸ್ತರಿಸಿದ್ದರೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇದುವರೆಗೆ ಶೇ.26.65ರಷ್ಟು…
ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ದಂಪತಿ ಮೃತಪಟ್ಟಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…
ಜಪಾನಿನ ಐಚಿ - ನಾಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಮತ್ತು ಭಾರತದ ವಿವಿಧ ಭಾಷೆಯ ಟಿವಿ ಚಾನಲ್ ಗಳಲ್ಲಿ ಪ್ರಸಾರವಾಗುತ್ತಿರುವ…
ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…