ವಿಧಾನಸಭಾ ಕ್ಷೇತ್ರದಲ್ಲಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ತಾಲ್ಲೂಕಿನ ಮತದಾರರನ್ನು ಹಣ ಕೊಟ್ಟು ಖರೀದಿಗೆ ಮುಂದಾಗಿದೆ ಎಂದು ಜೆಡಿಎಸ್ ರಾಜ್ಯ ಕಾನೂನು ಘಟಕದ ಅಧ್ಯಕ್ಷ ಎ.ಪಿ ರಂಗನಾಥ ಆರೋಪಿಸಿದರು.
ನಗರದ ಜೆಡಿಎಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ಅಭ್ಯರ್ಥಿಗಳು ವ್ಯಾಪರಸ್ಥರು, ವ್ಯಾಪರ ಹಿನ್ನೆಲೆಯುಳ್ಳವರಾಗಿದ್ದಾರೆ.
ಬಿಜೆಪಿ ಅಭ್ಯರ್ಥಿಗೆ ರೈತರ ನಿತ್ಯ ಜೀವನದ ಅರಿವಿಲ್ಲ, ಹೊಲ, ಗದ್ದೆ, ರೈತರ ಕಷ್ಟ ಯಾವುದು ಗೊತ್ತಿಲ್ಲ. ಇನ್ನೂ ಕಾಂಗ್ರೆಸ್ ಅಭ್ಯರ್ಥಿ ವ್ಯಾಪರೀಕರಣ ರಾಜಕಾರಣ ಮಾಡುತ್ತಿದ್ದಾರೆ, ಸ್ವಂತ ಪರಿಶ್ರಮದಿಂದ ಯಾವುದೇ ಕೆಲಸಗಳನ್ನು ಇದುವರೆಗೂ ತಾಲ್ಲೂಕಿನಲ್ಲಿ ಮಾಡಿಲ್ಲ ಎಂದರು.
ಮುನೇಗೌಡ ಅವರು ಕಳೆದ ಹಲವು ವರ್ಷಗಳಿಂದ ಸಾಮಾಜಿಕ ಕೆಲಸಗಳನ್ನು ಮಾಡಿಕೊಂಡು ಬಂದಿದ್ದಾರೆ, ಸಂಕಷ್ಟ ಸಮಯದಲ್ಲಿ ತಾಲ್ಲೂಕಿನಾದ್ಯಂತ ಕುಡಿಯಲು ನೀರನ್ನು ನೀಡಿದ್ದಾರೆ, ದೇವಾಲಯಗಳ ಜೀರ್ಣೊದ್ಧಾರವನ್ನು ತಮ್ಮ ಸ್ವಂತ ಖರ್ಚಿನಿಂದ ನೆರವೇರಿಸಿದ್ದಾರೆ.
ಕುಮಾರಸ್ವಾಮಿ ಪಂಚರತ್ನ ಯೋಜನೆ ಅನುಷ್ಠಾನವಾದರೆ ರಾಜ್ಯದಲ್ಲಿ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಲು ಸಹಕಾರಿಯಾಗಲಿದೆ. ತಾಲ್ಲೂಕಿನಲ್ಲಿ ಈ ಬಾರಿಯ ಜನತೆ ಮುನೇಗೌಡ ಅವರನ್ನು ಗೆಲ್ಲಿಸಿ ಕುಮಾರಸ್ವಾಮಿಯನ್ನು ಮುಖ್ಯಮಂತ್ರಿಯನ್ನಾಗಿ ಮಾಡಿಯೇ ತೀರುತ್ತಾರೆ ಎಂದರು.
ಟಿಎಪಿಎಂಸಿಎಸ್ ಅಧ್ಯಕ್ಷ ಅಂಜನಗೌಡ ಮಾತನಾಡಿ ಕುಮಾರಸ್ವಾಮಿ ರೈತ, ಕಾರ್ಮಿಕರ ಪರ ಕೆಲಸ ಮಾಡಲಿದ್ದಾರೆ, ಈ ಬಾರಿ ಸಂಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬರಲು ಸಕಲ ಸಿದ್ದತೆ ನಡೆಸಿದ್ದೂ ನಾಡಿನ ಜನತೆ ಆಶೀರ್ವಾದ ಮಾಡಲಿದ್ದಾರೆ.
ರಾಷ್ಟ್ರೀಯ ಪಕ್ಷಗಳಿಂದ ಹಣವಂತ, ಬಲಾಢ್ಯ ಅಭ್ಯರ್ಥಿಗಳು ಈ ಬಾರಿ ತಾಲ್ಲೂಕಿನಲ್ಲಿ ಸ್ಪರ್ಧಿಸುತ್ತಿದ್ದಾರೆ, ಜನರನ್ನು ಹಣದ ಮೂಲಕ ಕೊಂಡುಕೊಳ್ಳುವ ಎಲ್ಲಾ ಪ್ರಯತ್ನಗಳನ್ನು ಅಭ್ಯರ್ಥಿಗಳು ಮಾಡುತ್ತಿದ್ದಾರೆ.
ಚುನಾವಣಾ ಕಣದಲ್ಲಿ ಜೆಡಿಎಸ್ ಅಭ್ಯರ್ಥಿ ಬಿ.ಮುನೇಗೌಡ ಅವರು ಇದ್ದೂ ತಾಲ್ಲೂಕಿನಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಹಿಂದೆ ಜನತೆಗೆ ಕಷ್ಟಕಾಲದಲ್ಲಿ ಕುಡಿಯಲು ನೀರು ಸೇರಿದಂತೆ ಸಮಾಜಿಕ ಸೇವೆಯನ್ನು ಸಲ್ಲಿಸಿದ್ದೂ ಇದರ ಆಧಾರದಲ್ಲಿ ಮತಯಾಚನೆಗೆ ಮುಂದಾಗಿದ್ದಾರೆ ಎಂದರು.
ಈ ವೇಳೆ ಡಾ.ವಿಜಯ್ ಕುಮಾರ್, ನಗರಸಭಾ ಸದಸ್ಯ ವಡ್ಡರಹಳ್ಳಿ ರವಿ, ಮಾಜಿ ನಗರಸಭಾ ಸದಸ್ಯ ಕೆಂಪರಾಜ್ ಇತರರು ಇದ್ದರು.
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…
ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಕೋಲಾರ ಇವರ ಸಹಯೋಗದಲ್ಲಿ ರೇಮಂಡ್ ಕಂಪನಿ ಸಮೂಹದ ಸಿಲ್ವರ್ ಸ್ಪಾರ್ಕ್…