ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜೂನ್ 03 ರಂದು ಮತದಾನ ನಡೆಸಲು ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿದೆ.
ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಶಾಂತಿ ಪಾಲನೆ, ಕಾನೂನು ಮತ್ತು ಸುವ್ಯವಸ್ಥೆ ಮತ್ತು ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಮತ್ತು ಮತದಾನ ಮುಕ್ತಾಯವಾಗುವ 48 ಗಂಟೆಗಳ ಅವಧಿಯೊಳಗಿನ ದಿನದಂದು ಚುನಾವಣಾ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಹಿತದೃಷ್ಟಿಯಿಂದ ಜೂನ್. 01 ರಂದು ಮಧ್ಯಾಹ್ನ 4:00 ಗಂಟೆಯಿಂದ ಜೂನ್. 03 ರ ಮಧ್ಯಾಹ್ನ 4.00 ಗಂಟೆಯವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಮದ್ಯ ಉತ್ಪಾದನೆ, ಮಾರಾಟ, ಹಂಚಿಕೆ, ಸಾಗಾಣಿಕೆ, ಶೇಖರಣೆ ಇತ್ಯಾದಿಗಳನ್ನು ನಿಷೇಧಿಸಿ ಎಲ್ಲಾ ರೀತಿಯ ಮದ್ಯದಂಗಡಿಗಳನ್ನು, ಮದ್ಯ ಮಾರಾಟ ಡಿಪೋಗಳನ್ನು ಮುಚ್ಚಲು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಆದೇಶಿಸಿದ್ದಾರೆ.