ಮಧುರನಹೊಸಹಳ್ಳಿ ಕಾಲೋನಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಸಂಭ್ರಮ

ದೊಡ್ಡಬಳ್ಳಾಪುರ ತಾಲೂಕಿನ ಮಧುರನಹೊಸಹಳ್ಳಿ ಕಾಲೋನಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಪಟಾಕಿ ಸಿಡಿಸಿ, ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ತಮಟೆ ವಾದ್ಯದ ಮೂಲಕ ಅದ್ಧೂರಿಯಾಗಿ ಆಚರಿಸಲಾಯಿತು.

ಕಾಲೋನಿ ನಿವಾಸಿಗಳಾದ ಹಿರಿಯರು, ಮಹಿಳೆಯರು, ಯುವಕ-ಯುವತಿಯರು ಹಾಗೂ ಮಕ್ಕಳು ಲವಲವಿಕೆಯಿಂದ ಭಾಗಿಯಾಗಿದ್ದರು.

ನಂತರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದವರಿಗೆ ಅನ್ನ ಪ್ರಸಾದ ವಿತರಣೆ ಮಾಡಲಾಯಿತು.

ಒಟ್ಟಾರೆ, . ಬಿ.ಆರ್. ಅಂಬೇಡ್ಕರ್ ಜಯಂತಿ ಅಂಗವಾಗಿ ಕಾಲೋನಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.

Leave a Reply

Your email address will not be published. Required fields are marked *

error: Content is protected !!