ಮಧುರೆ ಕೆರೆಯಲ್ಲಿ ಮಣ್ಣು ದಂಧೆ ಆರೋಪ: ಸುಮಾರು 35 ಟ್ರ್ಯಾಕ್ಟರ್, 5 ಜೆಸಿಬಿಗಳ ಅಬ್ಬರ; ಮಣ್ಣು ತೆಗೆಯುವುದಕ್ಕೆ ಗ್ರಾಮಸ್ಥರ ಬ್ರೇಕ್!

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್‌ಗಳು ಹಾಗೂ 5 ಜೆಸಿಬಿಗಳನ್ನು ಬಳಸಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಕೆಲವು ವಾಹನಗಳಿಗೆ ನಂಬರ್ ಪ್ಲೇಟ್‌ಗಳಿಲ್ಲದೆ, ಚಾಲಕರ ಬಳಿ ಅಗತ್ಯ ದಾಖಲೆಗಳೂ ಇಲ್ಲದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಆರಂಭದಲ್ಲಿ ರೈತರು ತಮ್ಮ ತೋಟಗಳಿಗೆ ಅಗತ್ಯವಿರುವ ಮಣ್ಣನ್ನು ತೆಗೆದುಕೊಂಡು ಹೋಗುತ್ತಿದ್ದರು ಎನ್ನಲಾಗಿದ್ದು, ಇದನ್ನೇ ಬಂಡವಾಳ ಮಾಡಿಕೊಂಡ ಮಣ್ಣು ದಂಧೆಕೋರರು ಇದೀಗ ಮಣ್ಣನ್ನು ಮಾರಾಟ ಮಾಡುವ ಉದ್ದೇಶದಿಂದ ಹೆಚ್ಚಿನ ಪ್ರಮಾಣದಲ್ಲಿ ಮಣ್ಣು ತೆಗೆಯಲಾಗುತ್ತಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

ಕೆರೆಯ ಪ್ರದೇಶದಲ್ಲಿ ನಾಲ್ಕೈದು ಅಡಿ ಆಳದವರೆಗೆ ಮಣ್ಣು ತೆಗೆಯಲಾಗಿದ್ದು, ಇದರಿಂದ ಕೆರೆಯ ಸ್ವರೂಪಕ್ಕೆ ಧಕ್ಕೆಯಾಗುವ ಆತಂಕ ವ್ಯಕ್ತವಾಗಿದೆ.

ಹೊಂಗೆ ಮರಗಳ ಬುಡಕ್ಕೂ ಜೆಸಿಬಿ ಕಂಟಕ!

ಮಣ್ಣು ತೆಗೆಯುವ ಸಂದರ್ಭದಲ್ಲಿ ಹೊಂಗೆ ಮರಗಳ ಬುಡದವರೆಗೂ ಜೆಸಿಬಿಗಳನ್ನು ಬಳಸಲಾಗುತ್ತಿದ್ದು, ಮರಗಳಿಗೆ ಹಾನಿಯಾಗುವ ಆತಂಕ ಎದುರಾಗಿದೆ. ಅಲ್ಲದೆ, ಜೆಸಿಬಿ ಹಾಗೂ ಟ್ರ್ಯಾಕ್ಟರ್‌ಗಳ ನಿರಂತರ ಸಂಚಾರದಿಂದ ರಸ್ತೆಗಳು ಹಾಳಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಕೆರೆಯ ಪ್ರದೇಶದಲ್ಲಿ ಮಣ್ಣು ತೆಗೆಯುವುದರಿಂದ ದನಕರುಗಳ ಮೇವಿಗೆ, ಓಡಾಟಕ್ಕೂ ತೊಂದರೆಯಾಗುತ್ತಿದೆ. ಗ್ರಾಮಸ್ಥರು ಹಾಗೂ ಜಾನುವಾರುಗಳ ಸುರಕ್ಷತೆಯ ಬಗ್ಗೆ ಕಾಳಜಿ ವಹಿಸದೆ ಮಣ್ಣು ತೆಗೆಯಲಾಗುತ್ತಿದೆ ಎಂಬ ಆಕ್ರೋಶವೂ ವ್ಯಕ್ತವಾಗಿದೆ.

ಮಣ್ಣು ತೆಗೆಯುವುದಕ್ಕೆ ಗ್ರಾಮಸ್ಥರ ತಡೆ

ಮಧುರೆ ಕೆರೆಯಲ್ಲಿ ನಡೆಯುತ್ತಿದೆ ಎನ್ನಲಾದ ಮಣ್ಣು ತೆಗೆಯುವ ಕಾರ್ಯಕ್ಕೆ ಇಂದು ಕೋಡಿಪಾಳ್ಯ ಹಾಗೂ ಚೆನ್ನದೇವಿ ಅಗ್ರಹಾರ ಗ್ರಾಮದ ನಿವಾಸಿಗಳು ತಡೆಹಿಡಿದಿದ್ದಾರೆ. ಕೆರೆಯ ಮಣ್ಣನ್ನು ವಾಣಿಜ್ಯ ಉದ್ದೇಶಕ್ಕೆ ಬಳಸಲಾಗುತ್ತಿದೆಯೇ, ಮಣ್ಣು ತೆಗೆಯಲು ಅಗತ್ಯ ಅನುಮತಿ ಪಡೆಯಲಾಗಿದೆಯೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಕೆಲವು ವಾಹನಗಳಿಗೆ ನಂಬರ್ ಪ್ಲೇಟ್‌ಗಳಿಲ್ಲದಿರುವುದು ಹಾಗೂ ಚಾಲಕರ ಬಳಿ ಅಗತ್ಯ ದಾಖಲೆಗಳಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಇಲಾಖೆಗಳು ವಾಹನಗಳ ದಾಖಲೆ, ಮಣ್ಣು ಸಾಗಾಟದ ಅನುಮತಿ ಮತ್ತು ಕೆರೆಯ ಪ್ರದೇಶದಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಬಗ್ಗೆ ಸಮಗ್ರ ಪರಿಶೀಲನೆ ನಡೆಸಬೇಕು. ಕೆರೆಯ ಸಂರಕ್ಷಣೆ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ತಕ್ಷಣ ಕ್ರಮ ಕೈಗೊಳ್ಳಬೇಕು ಎಂಬುದು ಸ್ಥಳೀಯರ ಆಗ್ರಹವಾಗಿದೆ.

Ramesh Babu

Journalist

Recent Posts

ರಾಜಾನುಕುಂಟೆ ಬಳಿ ರೈಲು ಬೋಗಿಗಳಿಗೆ ಬೆಂಕಿ: ಎರಡು ಬೋಗಿಗಳು ಸುಟ್ಟು ಭಸ್ಮ

ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…

1 hour ago

ನಮ್ಮ ತೆರಿಗೆ ನಮ್ಮ ಹಕ್ಕು…

ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…

8 hours ago

ದೇವನಹಳ್ಳಿ ಬಳಿ ಭೀಕರ ಅಪಘಾತ: ಓರ್ವ ಸಾವು: ಹಲವರಿಗೆ ಗಾಯ

ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…

9 hours ago

ಸ್ಟಿಂಗ್ ವಿಡಿಯೋ ವಿವಾದ: ಪೊಲೀಸ್ ತನಿಖೆ, ನ್ಯಾಯಾಲಯದ ಮೊರೆ ಹೋದ ಮಾಜಿ ಸಿಎಂ ಸಿದ್ದರಾಮಯ್ಯ

ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳ ವಿವಿಧ ವೇದಿಕೆಗಳಲ್ಲಿ ಹರಿದಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಡಿಯೋಗೆ ನನ್ನ ಹೆಸರನ್ನು ಜೋಡಿಸಿ ಅಪಪ್ರಚಾರ…

20 hours ago

ಅಕ್ಟೋಬರ್ 26 ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ

ಅಕ್ಟೋಬರ್ 26 ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ, ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ…

23 hours ago

ಮೀಸಲಾತಿ ಹೆಚ್ಚಳ ವಿಚಾರ: ಹೈಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ ಕುರಿತು ಸಂಪುಟದಲ್ಲಿ ಚರ್ಚೆ- ಡಿಸಿಎಂ ಡಾ ಜಿ.ಪರಮೇಶ್ವರ್

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ತೀರ್ಪಿನ ಕುರಿತು ಸಚಿವ ಸಂಪುಟದಲ್ಲಿ ಸಮಗ್ರವಾಗಿ…

1 day ago