ತಾಲೂಕಿನ ಮಧುರೆ ಹೋಬಳಿಯ ಕೋಡಿಪಾಳ್ಯ ಸಮೀಪದ ಮಧುರೆ ಕೆರೆ ಏರಿ ತಿರುವಿನಲ್ಲಿ ಸಿಮೆಂಟ್ ಬಲ್ಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ.
ತಡರಾತ್ರಿ ಸುಮಾರು 2:30ರ ಸಮಯದಲ್ಲಿ ದೊಡ್ಡಬಳ್ಳಾಪುರದಿಂದ ನೆಲಮಂಗಲ ಕಡೆಗೆ ಹೋಗುವಾಗ ಘಟನೆ ನಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸಿಮೆಂಟ್ ಬಲ್ಕರ್ ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ತಿರುವಿನಲ್ಲಿದ್ದ ಎರಡು ವಿದ್ಯುತ್ ಕಂಬಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಹಾನಿಯಾಗಿವೆ. ಸ್ಥಳಕ್ಕೆ ಬೆಸ್ಕಾಂ ಸಿಬ್ಬಂದಿ ದೌಡಾಯಿಸಿ ಹಾನಿಯಾಗಿರುವ ವಿದ್ಯುತ್ ಕಂಬಗಳನ್ನು ತೆರವು ಮಾಡುವ ಕಾರ್ಯ ಮಾಡುತ್ತಿದ್ದಾರೆ.
ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಸದ್ಯ ಮುಗುಚಿ ಬಿದ್ದ ಸಿಮೆಂಟ್ ಬಲ್ಕರ್ ಲಾರಿ ರಸ್ತೆಯಲ್ಲೇ ಇದ್ದು, ಇಂದು ದಟ್ಟ ಮಂಜು ಆವರಿಸಿರುವ ಕಾರಣ ಬಹಳ ಎಚ್ಚರವಾಗಿ ಇತರೆ ವಾಹನಗಳು ಚಲಾಯಿಸಬೇಕಾಗಿದೆ