ಮಧುರೆ ಕೆರೆ ಏರಿ ತಿರುವಿನಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಸಿಮೆಂಟ್ ಬಲ್ಕರ್ ಲಾರಿ: ಡಿಕ್ಕಿ ರಭಸಕ್ಕೆ‌‌ ಲಾರಿ ಪಲ್ಟಿ

ತಾಲೂಕಿನ ಮಧುರೆ ಹೋಬಳಿಯ ಕೋಡಿಪಾಳ್ಯ‌ ಸಮೀಪದ‌ಲ್ಲಿಂದು‌ ಸಂಜೆ ಸುಮಾರು 5 ಗಂಟೆಯಲ್ಲಿ ಮಧುರೆ ಕೆರೆ ಏರಿ ತಿರುವಿನಲ್ಲಿ ಸಿಮೆಂಟ್ ಬಲ್ಕರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ‌ ಪಲ್ಟಿ ಹೊಡೆದಿದೆ.

ದೊಡ್ಡಬಳ್ಳಾಪುರದಿಂದ ನೆಲಮಂಗಲ ಕಡೆಗೆ ಹೋಗುವಾಗ ಘಟನೆ ನಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಸಿಮೆಂಟ್ ಬಲ್ಕರ್ ಲಾರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಲಾರಿ ಸಂಪೂರ್ಣ ಜಖಂಗೊಂಡಿದೆ.

ತಿರುವಿನಲ್ಲಿದ್ದ ಒಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಹಾನಿಯಾಗಿದೆ.

ಸ್ಥಳಕ್ಕೆ ಬೆಸ್ಕಾಂ‌ ಸಿಬ್ಬಂದಿ ದೌಡಾಯಿಸಿ ಹಾನಿಯಾಗಿರುವ ವಿದ್ಯುತ್ ಕಂಬವನ್ನು ತೆರವು‌ ಮಾಡುವ ಕಾರ್ಯ ಮಾಡುತ್ತಿದ್ದಾರೆ.

ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇಂತಹದ್ದೇ ಘಟನೆ ಇದೇ ಸ್ಥಳದಲ್ಲಿ ಅದೇ ಕಂಬಕ್ಕೆ 2024ರ ಡಿಸೆಂಬರ್ 22ರಂದು ಸಿಮೆಂಟ್ ಬಲ್ಕರ್ ಲಾರಿ ಡಿಕ್ಕಿ ಹೊಡೆದು ಪಲ್ಟಿ ಹೊಡೆದಿತ್ತು.

Ramesh Babu

Journalist

Recent Posts

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

4 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

1 day ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

1 day ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

1 day ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

1 day ago

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

2 days ago