Categories: Home

ಮಧುರೆ ಕೆರೆ ಏರಿ ತಿರುವಿನಲ್ಲಿ ಸಿಮೆಂಟ್ ಬಲ್ಕರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ‌ ಪಲ್ಟಿ

ತಾಲೂಕಿನ ಮಧುರೆ ಹೋಬಳಿಯ ಕೋಡಿಪಾಳ್ಯ‌ ಸಮೀಪದ‌ ಮಧುರೆ ಕೆರೆ ಏರಿ ತಿರುವಿನಲ್ಲಿ ಸಿಮೆಂಟ್ ಬಲ್ಕರ್ ಚಾಲಕನ ನಿಯಂತ್ರಣ ತಪ್ಪಿ‌ ಪಲ್ಟಿ ಹೊಡೆದಿದೆ.

ತಡರಾತ್ರಿ ಸುಮಾರು 2:30ರ ಸಮಯದಲ್ಲಿ ದೊಡ್ಡಬಳ್ಳಾಪುರದಿಂದ ನೆಲಮಂಗಲ ಕಡೆಗೆ ಹೋಗುವಾಗ ಘಟನೆ ನಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸಿಮೆಂಟ್ ಬಲ್ಕರ್ ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ತಿರುವಿನಲ್ಲಿದ್ದ ಎರಡು ವಿದ್ಯುತ್ ಕಂಬಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಹಾನಿಯಾಗಿವೆ. ಸ್ಥಳಕ್ಕೆ ಬೆಸ್ಕಾಂ‌ ಸಿಬ್ಬಂದಿ ದೌಡಾಯಿಸಿ ಹಾನಿಯಾಗಿರುವ ವಿದ್ಯುತ್ ಕಂಬಗಳನ್ನು ತೆರವು‌ ಮಾಡುವ ಕಾರ್ಯ ಮಾಡುತ್ತಿದ್ದಾರೆ.

ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಸದ್ಯ ಮುಗುಚಿ ಬಿದ್ದ ಸಿಮೆಂಟ್ ಬಲ್ಕರ್ ಲಾರಿ ರಸ್ತೆಯಲ್ಲೇ ಇದ್ದು, ಇಂದು ದಟ್ಟ ಮಂಜು ಆವರಿಸಿರುವ ಕಾರಣ ಬಹಳ ಎಚ್ಚರವಾಗಿ ಇತರೆ ವಾಹನಗಳು ಚಲಾಯಿಸಬೇಕಾಗಿದೆ

Ramesh Babu

Journalist

Share
Published by
Ramesh Babu

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

9 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

16 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

19 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

19 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago