ತುಮಕೂರಿನಲ್ಲಿ ಘನಘೋರ ಕೃತ್ಯವೊಂದು ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದಿದ್ದಾಗ ತನ್ನ 4 ವರ್ಷ ಮತ್ತು 2 ವರ್ಷದ ಇಬ್ಬರು ಮಕ್ಕಳನ್ನು ಕೊಲೆ ಮಾಡಿದ ತಾಯಿ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಪತಿಯ ವರದಕ್ಷಿಣೆ ಕಿರುಕುಳದಿಂದ ಬೇಸತ್ತ ಪತ್ನಿ ತನ್ನ ಇಬ್ಬರು ಪುಟ್ಟ ಮಕ್ಕಳನ್ನು ಕೊಂದು ತಾನು ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅನುಮಾನಿಸಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.
ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕಡಪನಕೆರೆಯಲ್ಲಿ ಈ ದುರಂತ ಘಟನೆ ನಡೆದಿದ್ದು, ಇಬ್ಬರು ಮುದ್ದು ಮಕ್ಕಳನ್ನು ಕೊಂದ ತಾಯಿ ತಾನೂ ನೇಣಿಗೆ ಶರಣಾಗಿದ್ದಾರೆ.
23 ವರ್ಷದ ಸರಿತಾ ಎಂಬಾಕೆ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಆತ್ಮಹತ್ಯೆಗೂ (Suicide) ಮುನ್ನ 4 ವರ್ಷದ ಮಗ ಕೌಶಿಕ್ ಹಾಗೂ 2 ವರ್ಷದ ಮಗು ಯುಕ್ತಿಯನ್ನು ಕೊಲೆ ಮಾಡಿದ್ದಾರೆ. ಬಳಿಕ ತಾನೂ ನೇಣಿಗೆ ಶರಣಾಗಿದ್ದಾರೆ..
ಈ ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಸರಿತಾ ತನ್ನ ಇಬ್ಬರು ಮಕ್ಕಳ ಹತ್ಯೆಗೈದಿದ್ದು, ಬಳಿಕ ತಾನು ನೇಣಿಗೆ ಶರಣಾಗಿದ್ದಾರೆ.
ಮೂಲತಃ ಕಡಪನಕೆರೆಯ ಸರಿತಾ ತನ್ನದೇ ಊರಿನ ಸಂತೋಷ್ ಜೊತೆ ವಿವಾಹವಾಗಿದ್ದರು. ಕಳೆದ 6 ವರ್ಷಗಳ ಹಿಂದೆ ಸಂತೋಷ್ ಜೊತೆ ವಿವಾಹವಾಗಿತ್ತು. ವೃತ್ತಿಯಲ್ಲಿ ಆಟೋ ಚಾಲಕನಾಗಿರುವ ಸಂತೋಷ್ ಈ ಘಟನೆ ನಡೆದ ವೇಳೆ ಮನೆಯಲ್ಲಿರಲಿಲ್ಲ ಎಂದು ತಿಳಿದುಬಂದಿದೆ.
ಮದುವೆಯಾದಾಗಿನಿಂದ ಪತಿ ಹಾಗೂ ಆತನ ಕುಟುಂಬದಿಂದ ಸರಿತಾ ಅವರಿಗೆ ಕಿರುಕುಳ ನೀಡಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ. ವರದಕ್ಷಿಣೆ ಕಿರುಕುಳ ನೀಡಿದ್ದ ಬಗ್ಗೆ ಶಂಕೆ ವ್ಯಕ್ತವಾಗಿದೆ. ಇದೇ ಕಾರಣಕ್ಕೆ ತಾಯಿ ಸರಿತಾ ನೊಂದು ಮಕ್ಕಳ ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…
ಟಿಎಪಿಎಂಸಿಎಸ್ ಚುನಾವಣೆ ಸೋಲಿಗೆ ನಾನೇ ನೇರ ಕಾರಣ. ಸೋಲಿನ ಸಂಪೂರ್ಣ ಜವಾಬ್ದಾರಿ ಶಾಸಕನಾಗಿ ನಾನೇ ತೆಗೆದುಕೊಳ್ಳುತ್ತೇನೆ ಎಂದು ಶಾಸಕ ಧೀರಜ್…
ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮದಿಂದ ಹೊಲಿಗೆ ಯಂತ್ರ ಪಡೆಯಲು ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ…
ದೊಡ್ಡಬಳ್ಳಾಪುರದ ನೂತನ ತಹಶೀಲ್ದಾರ್ ಆಗಿ ಮಲ್ಲಪ್ಪ ನೇಮಕಗೊಂಡಿದ್ದಾರೆ. ಈ ಹಿನ್ನೆಲೆ ಇಂದು ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ…