Categories: Home

ಮನಗೂಳಿ ಕೆನರಾ ಬ್ಯಾಂಕ್ ಕಳವು ಪ್ರಕರಣ: ಚಿನ್ನ, ನಗದು ಕಳವು ಮಾಡಿದ್ದು ಯಾರು ಗೊತ್ತಾ….? ಎಷ್ಟು ಕದ್ದು ಎಸ್ಕೇಪ್ ಆಗಿದ್ದರು…? ಈ ಕುರಿತ ಮಾಹಿತಿ ಇಲ್ಲಿದೆ ಓದಿ….

ವಿಜಯಪುರ ಜಿಲ್ಲೆಯ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಬ್ಯಾಂಕಿನ ಹಿಂದಿನ ಹಿರಿಯ ವ್ಯವಸ್ಥಾಪಕ, ರೈಲ್ವೆ ಇಲಾಖೆ ಮೂವರು ನೌಕರರು, ಧಾರವಾಡದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕ ಹಾಗೂ ವಿವಿಧ ಖಾಸಗಿ ಕಂಪನಿಗಳ ನೌಕರರು, ಲಾರಿ ಚಾಲಕ, ವಾಚ್‌ಮನ್, ಎಲೆಕ್ನಿಷಿಯನ್ ಸೇರಿದಂತೆ 15 ಆರೋಪಿಗಳನ್ನು ವಿಜಯಪುರ ಜಿಲ್ಲಾ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ.

ಬಂಧಿತ ಆರೋಪಿಗಳಿಂದ ಒಟ್ಟು 39 ಕೆ.ಜಿ.ಚಿನ್ನ, ₹1.16 ಕೋಟಿ ನಗದು ಹಾಗೂ ಕಳ್ಳತನಕ್ಕೆ ಬಳಸಿದ್ದ ರೈಲ್ವೆ ಇಲಾಖೆಗೆ ಸೇರಿದ ಗೂಡ್ಸ್ ಲಾರಿ, 4 ವಾಕಿಟಾಕಿ, ಒಂದು ಪಿಸ್ತೂಲ್‌ನಂತಿರುವ ಸಿಗರೇಟ್ ಲೈಟರ್, 2 ಗ್ಯಾಸ್‌ ಸಿಲಿಂಡ‌ರ್, ಒಂದು ಆಕ್ಸಿಜನ್ ಸಿಲಿಂಡರ್, ಬರ್ನಿಂಗ್ ಗನ್, ನಕಲಿ ಕೀಲಿಕೈಗಳು, ವಿವಿಧ ಕಂಪನಿಗಳ ಐದು ಕಾರುಗಳನ್ನು ವಶಕ್ಕೆ ಪಡೆದಿರುವುದಾಗಿ ಬೆಳಗಾವಿ ಉತ್ತರ ವಲಯ ಐಜಿಪಿ ಚೇತನ್ ಕುಮಾ‌ರ್ ರಾಠೋಡ್ ಮತ್ತು ವಿಜಯಪುರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮನಗೂಳಿ ಕೆನರಾ ಬ್ಯಾಂಕಿನ ಹಿಂದಿನ ಹಿರಿಯ ವ್ಯವಸ್ಥಾಪಕ ವಿಜಯಕುಮಾ‌ರ್ ಮಿರಿಯಾಲ (41), ಖಾಸಗಿ ಉದ್ಯೋಗಿ ಚಂದ್ರಶೇಖರ ನೆರೆಲ್ಲಾ (38), ಸುನೀಲ ಮೋಕಾ (40) ಎಂಬುವವರನ್ನು ಈಗಾಗಲೇ ಬಂಧಿಸಿ ಅವರಿಂದ ₹10.75 ಕೋಟಿ ಮೌಲ್ಯದ 10.5 ಕೆ.ಜಿ.ಬಂಗಾರದ ಆಭರಣ ಮತ್ತು ಕರಗಿಸಿದ ಬಂಗಾರದ ಕಟ್ಟಿಯನ್ನು ವಶಪಡಿಸಿಕೊಳ್ಳಲಾಗಿತ್ತು ಎಂದು ತಿಳಿಸಿದರು.

ಈ ಮೂವರು ಆರೋಪಿಗಳ ವಿಚಾರಣೆಯಲ್ಲಿ ನೀಡಿದ ಮಾಹಿತಿ ಮೇರೆಗೆ ಇನ್ನುಳಿದ ಆರೋಪಿಗಳಾದ ಹುಬ್ಬಳ್ಳಿ ನೈರುತ್ಯ ರೈಲ್ವೆ ನೌಕರರಾದ ಬಾಲರಾಜ ಮಣಿಕಮ್ ಯೆರುಕುಲಾ(40), ಬಾಬುರಾವ್ ಮಿರಿಯಾಲ (40), ಸೋಲೋಮನ್ನೇ ಪಲುಕುರಿ (40), ಧಾರವಾಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕ ಪೀಟರ್ (40), ಖಾಸಗಿ ನೌಕರ ಗುಂಡು ಜೋಸೆಫ್ (28), ಚಂದನರಾಜ್ (29), ಚಾಲಕ ಇಜಾಜ್ ಧಾರವಾಡ(34), ವಾಚಮನ್ ಸುಸೈರಾಜ್ (44), ನಕಲಿ ಕೀಲಿ ಕೈ ತಯಾರಿಸುವ ಅಂಗಡಿಯವ ಮಹಮ್ಮದ್ ಆಸೀಫ್ ಕಲ್ಲೂರ (31), ಚಾಲಕ ಅನೀಲ ಮಿರಿಯಾಲ (40), ಖಾಸಗಿ ಉದ್ಯೋಗಿ ಅಬು ಅಲಿಯಾಸ್ ಮೋಹನಕುಮಾರ (42), ಇಲೆಕ್ನಿಷಿಯನ್ ಮರಿಯಾದಾಸ (40) ಎಂಬುವವರನ್ನು ಬಂಧಿಸಿಲಾಗಿದೆ ಎಂದರು.

ಬಂಧಿತ ಆರೋಪಿಗಳಿಂದ 39 ಕೆ.ಜಿ ಬಂಗಾರದ ಗಟ್ಟಿ ಹಾಗೂ ಆಭರಣವನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೇ, ಆರೋಪಿಗಳು ಒಂದಷ್ಟು ಬಂಗಾರ ಮಾರಾಟ ಮಾಡಿ ಬಂದ ಹಣವನ್ನು ಗೋವಾದ ಮೆಜೆಸ್ಟಿಕ್ ಪ್ರೈಡ್ ಕ್ಯಾಸಿನೋದಲ್ಲಿ ಡಿಪಾಸಿಟ್ ಮಾಡಿದ್ದ ₹1.16 ಕೋಟಿ ನಗದನ್ನು ವಶಕ್ಕೆ ಪಡೆಯಲಾಗಿದೆ ಎಂದರು.

ಬ್ಯಾಂಕಿನ ಕಳುವಾದ ಸಂದರ್ಭದಲ್ಲಿ ದಾಖಲಿಸಲಾಗಿದ್ದ ಎಫ್‌ಐಆರ್‌ನಲ್ಲಿ 58.97 ಕೆ.ಜಿ. ಚಿನ್ನಾಭರಣ ಎಂದು ಬ್ಯಾಂಕಿನ ಅಧಿಕಾರಿಗಳು ತಿಳಿಸಿದ್ದರು. ಆದರೆ, ತನಿಖೆಯ ವೇಳೆ ಕಳುವಾಗಿದ್ದ ಬಂಗಾರದ ಪ್ರಮಾಣವನ್ನು ನಿಖರವಾಗಿ ಪರಿಶೀಲಿಸಿದಾಗ ಒಟ್ಟು 40.7 ಕೆ.ಜಿ. ಎಂಬುದು ಖಚಿತವಾಗಿದೆ. ಈ ಕುರಿತು ಬ್ಯಾಂಕಿನ ಅಧಿಕಾರಿಗಳು ಲಿಖಿತ ವರದಿ ನೀಡಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಬಂಧಿತ ಆರೋಪಿಗಳಿಂದ 39 ಕೆ.ಜಿ ಬಂಗಾರದ ಗಟ್ಟಿ ಹಾಗೂ ಆಭರಣವನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೇ, ಆರೋಪಿಗಳು ಒಂದಷ್ಟು ಬಂಗಾರ ಮಾರಾಟ ಮಾಡಿ ಬಂದ ಹಣವನ್ನು ಗೋವಾದ ಮೆಜೆಸ್ಟಿಕ್ ಪ್ರೈಡ್ ಕ್ಯಾಸಿನೋದಲ್ಲಿ ಡಿಪಾಸಿಟ್ ಮಾಡಿದ್ದ ₹1.16 ಕೋಟಿ ನಗದನ್ನು ವಶಕ್ಕೆ ಪಡೆಯಲಾಗಿದೆ ಎಂದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಮೂರ್ನಾಲ್ಕು ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ. ಅವರ ಪತ್ತೆ ಕಾರ್ಯ ನಡೆದಿದೆ. ಕಳವುವಾಗಿದ್ದ ಚಿನ್ನಾಭರಣದಲ್ಲಿ ಶೇ 85ರಷ್ಟು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.

ತನಿಖೆಯಲ್ಲಿ ಪಾಲ್ಗೊಂಡಿದ್ದ 100 ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಯ ಕಠಿಣ ಪರಿಶ್ರಮ, ಕರ್ತವ್ಯ ನಿರ್ವಹಣೆ, ಬದ್ಧತೆಯನ್ನು ಶ್ಲಾಘಿಸಿ, ಪ್ರಶಂಸನಾ ಪತ್ರ ನೀಡಿ ಗೌರವಿಸಲಾಯಿತು.

ಘಟನೆ ವಿವರ

ಮೇ 23 ರಿಂದ 25ರ ನಡುವೆ ಕಳ್ಳರು ಮನಗೂಳಿ ಪಟ್ಟಣದಲ್ಲಿರುವ ಕೆನರಾ ಬ್ಯಾಂಕಿನ ಸೇಫ್ ಲಾಕರ್‌ನಲ್ಲಿದ್ದ ಅಂದಾಜು ₹53.26 ಕೋಟಿ ಮೌಲ್ಯದ ಬಂಗಾರದ ಆಭರಣ ಹಾಗೂ ₹5,20,450 ನಗದು ಸೇರಿದಂತೆ ಒಟ್ಟು ₹53.31 ಕೋಟಿ ಮೌಲ್ಯದ ಬಂಗಾರದ ಆಭರಣಗಳು ಹಾಗೂ ನಗದು ಹಣವನ್ನು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದರು.

Ramesh Babu

Journalist

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

12 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

17 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

20 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

1 day ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

1 day ago

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ – ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…

1 day ago