ಮಾನಸಿಕ ಖಿನ್ನತೆಯಿಂದ ಯುವಕ ಡೆತ್ ನೋಟ್ ಬರೆದಿಟ್ಟು ತಾಲೂಕಿನ ಮಧುರೆ ಕೆರೆಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಬೆಂಗಳೂರಿನ ನಂದಿನಿ ಲೇಔಟ್ ನಿವಾಸಿ ನವೀನ್ ಕುಮಾರ್ (31) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.
ಬೆಂಗಳೂರಿನಿಂದ ಬೈಕಿನಲ್ಲಿ ಬಂದು ಡೆತ್ ನೋಟ್ ಬರೆದು ಪತ್ರ ಹಾಗೂ ಚಪ್ಪಲಿ ಕೆರೆ ದಡದಲ್ಲಿಟ್ಟು ನೀರಿಗೆ ಬಿದ್ದು ಸಾವನ್ನಪ್ಪಿದ್ದಾನೆ.
ಸ್ಥಳಕ್ಕೆ ದೊಡ್ಡಬೆಳವಂಗಲ ಪೊಲೀಸ್ ಠಾಣೆ ಸಿಬ್ಬಂದಿ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.