ಮನರೇಗಾ ಉಳಿಸಲು ಗ್ರಾ.ಪಂ ಮಟ್ಟದಲ್ಲೂ ಹೋರಾಟ- ಜಿಲ್ಲಾ ಎಸ್.ಟಿ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ

ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ ಅಧ್ಯಕ್ಷ ಮುನಿಕೃಷ್ಣ ಹೇಳಿದರು.

ಚಿಕ್ಕಬಳ್ಳಾಪುರದಲ್ಲಿ ಸೋಮವಾರ ಮನರೇಗಾ ಯೋಜನೆ ಉಳಿಸಿ ಬೃಹತ್ ಹೋರಾಟಕ್ಕೆ ನಗರದ ಬಸವಭವನದಿಂದ ಕಾರ್ಯಕರ್ತರೊಂದಿಗೆ ತೆರಳುವ ವೇಳೆ ಬಸ್ ಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಕಾಂಗ್ರೆಸ್ ನೇತೃತ್ವದ ಸರ್ಕಾರ ಗ್ರಾಮೀಣ ಭಾಗದಲ್ಲಿ ಗುಳೆ ತಪ್ಪಿಸಲು 2005ರಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(ಮನರೇಗಾ) ಜಾರಿಗೆ ತರಲಾಗಿತ್ತು. ಹಳ್ಳಿಗಳ ಅಭಿವೃದ್ಧಿಯೇ ದೇಶದ ಅಭಿವೃದ್ಧಿ ಎಂದು ಮಹಾತ್ಮ ಗಾಂಧೀಜಿ ಕಂಡಿದ್ದ ಕನಸನ್ನು ಉದ್ಯೋಗ ಖಾತ್ರಿ ಯೋಜನೆ ಜಾರಿಗೆ ತರುವ ಮೂಲಕ ಯುಪಿಎ ಸರ್ಕಾರ ನನಸು ಮಾಡಿತ್ತು. 20 ವರ್ಷಗಳ ಗ್ರಾಮೀಣ ಭಾಗದ ಜನರ ಜೀವನ ಜೊತೆ ಗ್ರಾಮಗಳು ಬಹಳಷ್ಟು ಸುಧಾರಣೆ ಕಂಡಿದೆ. ಆದರೆ ಈಗಿನ ಕೇಂದ್ರ ಸರ್ಕಾರ ಯೋಜನೆ ಮೂಲ ಉದ್ದೇಶಕ್ಕೆ ಕತ್ತರಿ ಹಾಕಿ ಜನರ ದುಡಿಯುವ ಹಕ್ಕು ಕಿತ್ತಿಕೊಂಡಿದೆ. ಮನರೇಗಾ ಯೋಜನೆಯ ಹೆಸರು ಮತ್ತು ಸ್ವರೂಪದ ಬದಲಾವಣೆ ಮೂಲಕ ಉದ್ಯೋಗ ಖಾತ್ರಿ ಯೋಜನೆಯ ಆತ್ಮಕ್ಕೆ ಕೇಂದ್ರ ಸರ್ಕಾರ ಕೊಡಲಿಯೇಟು ನೀಡಿದೆ. ವಿಬಿ ಜಿ–ರಾಮ–ಜಿ ಯೋಜನೆ ಜನರಿಗೆ ಉದ್ಯೋಗ ಒದಗಿಸಲಾರದು. ರಾಜ್ಯ ಸರ್ಕಾರದ ಮೇಲೆ ಆರ್ಥಿಕ ಹೊರೆ ಹೊರಿಸುತ್ತಿದೆ. ರಾಜ್ಯಗಳಿಗೆ ಸಿಗಬೇಕಾದ ಅನುದಾನ ನೀಡದೇ ಕೇಂದ್ರ ವಂಚನೆ ಮಾಡುತ್ತಿದೆ. ಮನರೇಗಾ ಯೋಜನೆ ಮರು ಜಾರಿಗಾಗಿ ತಾಲ್ಲೂಕಿನ ಎಲ್ಲಾ ಗ್ರಾ.ಪಂಗಳಲ್ಲಿ ಹೋರಾಟ ರೂಪಿಸಲಾಗುವುದು ಎಂದು ಹೇಳಿದರು.

ಈ ವೇಳೆ ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ರಾಮೇಗೌಡ, ನರಸಿಂಹ, ಎಂಪಿಸಿಎಸ್ ಅಧ್ಯಕ್ಷ ಕೆಂಪಣ್ಣ, ಹಿರಿಯ ಮುಖಂಡರಾದ ಹನುಮಂತಣ್ಣ, ಮನೋಹರ್, ರಾಮಾಂಜಿನಪ್ಪ, ಮಂಜುನಾಥ, ಸತೀಶ್, ಪಿಳ್ಳವೀರಣ್ಣ ಮತ್ತಿತ್ತರರು ಇದ್ದರು.

Ramesh Babu

Journalist

Recent Posts

‘ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ’…

ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…

2 hours ago

ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಸ್ನೇಹಿತರು ಸಾವು

ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…

3 hours ago

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

16 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

16 hours ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

17 hours ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

23 hours ago